Faf du plessis: 7 ಸಿಕ್ಸ್ಗಳೊಂದಿಗೆ ಅಬ್ಬರಿಸಿ ವಿಶೇಷ ಸಾಧನೆ ಮಾಡಿದ ಫಾಫ್ ಡುಪ್ಲೆಸಿಸ್
IPL 2022: ಹಂತದಲ್ಲಿ ಅನೂಜ್ ರಾವತ್ ಔಟಾದರೂ ಫಾಫ್ ಡುಪ್ಲೆಸಿಸ್ ಅಬ್ಬರ ಮಾತ್ರ ನಿಂತಿರಲಿಲ್ಲ. ವಿರಾಟ್ ಕೊಹ್ಲಿ ಜೊತೆಗೂಡಿದ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಫಾಫ್ ಡುಪ್ಲೆಸಿಸ್ 36 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
ಐಪಿಎಲ್ನ (IPL 2022) 3ನೇ ಪಂದ್ಯದಲ್ಲಿ ಆರ್ಸಿಬಿ ಹಾಗೂ ಪಂಜಾಬ್ ಕಿಂಗ್ಸ್ (RCB vs PBKS) ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡರು. ಆದರೆ ಪಂಜಾಬ್ ಕಿಂಗ್ಸ್ ತಂಡದ ನಾಯಕನ ಲೆಕ್ಕಚಾರಗಳನ್ನು ತಲೆಕೆಳಗಾಗಿಸುವಲ್ಲಿ ಆರ್ಸಿಬಿ ತಂಡದ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ (Faf du plessis) ಯಶಸ್ವಿಯಾಗಿದ್ದರು. ಯುವ ಆಟಗಾರ ಅನೂಜ್ ರಾವತ್ ಜೊತೆ ಇನಿಂಗ್ಸ್ ಆರಂಭಿಸಿದ ಫಾಫ್ ಮೊದಲ ವಿಕೆಟ್ಗೆ 50 ರನ್ಗಳ ಜೊತೆಯತಾಟವಾಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು. ಈ ಹಂತದಲ್ಲಿ ಅನೂಜ್ ರಾವತ್ ಔಟಾದರೂ ಫಾಫ್ ಡುಪ್ಲೆಸಿಸ್ ಅಬ್ಬರ ಮಾತ್ರ ನಿಂತಿರಲಿಲ್ಲ. ವಿರಾಟ್ ಕೊಹ್ಲಿ ಜೊತೆಗೂಡಿದ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಫಾಫ್ ಡುಪ್ಲೆಸಿಸ್ 36 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
ಅರ್ಧಶತಕದ ಬಳಿಕ ಬ್ಯಾಟಿಂಗ್ ಗೇರ್ ಬದಲಿಸಿದ ಫಾಫ್ ಬ್ಯಾಕ್ ಟು ಬ್ಯಾಕ್ ಸಿಕ್ಸ್ಗಳನ್ನು ಸಿಡಿಸುವ ಮೂಲಕ ಅಬ್ಬರಿಸಿದರು. ಅದರಂತೆ ವೈಯುಕ್ತಿಕ ಸ್ಕೋರ್ 65 ರನ್ಗಳಿಸುವುದರೊಂದಿಗೆ ಫಾಫ್ ಡುಪ್ಲೆಸಿಸ್ ಐಪಿಎಲ್ನಲ್ಲಿ 3 ಸಾವಿರ ರನ್ ಪೂರೈಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಸ್ಥಾನ ಪಡೆದರು. ಐಪಿಎಲ್ನಲ್ಲಿ 101 ಪಂದ್ಯಗಳನ್ನಾಡಿರುವ ಡುಪ್ಲೆಸಿಸ್ 94 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 23 ಅರ್ಧಶತಕದೊಂದಿಗೆ 3 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ.
ಫಾಫ್ ಡುಪ್ಲೆಸಿಸ್ ಐಪಿಎಲ್ನಲ್ಲಿ ಇದುವರೆಗೆ ಮೂರು ತಂಡಗಳ ಪರ ಆಡಿದ್ದಾರೆ. ರೈಸಿಂಗ್ ಪುಣೆ ಜೈಂಟ್ಸ್ ತಂಡದೊಂದಿಗೆ ಐಪಿಎಲ್ ಇನಿಂಗ್ಸ್ ಆರಂಭಿಸಿದ್ದ ಡುಪ್ಲೆಸಿಸ್ ಇದಾದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕಾಣಿಸಿಕೊಂಡರು. ಇದೀಗ ಐಪಿಎಲ್ ಸೀಸನ್ 15 ನಲ್ಲಿ ಆರ್ಸಿಬಿ ತಂಡದ ನಾಯಕನಾಗಿ ಪದಾರ್ಪಣೆ ಮಾಡಿದ್ದಾರೆ. ಅಲ್ಲದೆ ನಾಯಕನಾಗಿ ಮೊದಲ ಪಂದ್ಯದಲ್ಲೇ ಅರ್ಧಶತಕ ಬಾರಿಸಿ ಅಬ್ಬರಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ 57 ಎಸೆತಗಳಲ್ಲಿ 7 ಭರ್ಜರಿ ಸಿಕ್ಸರ್ ಹಾಗೂ 3 ಬೌಂಡರಿಯೊಂದಿಗೆ 88 ರನ್ಗಳಿಸಿ ಡುಪ್ಲೆಸಿಸ್ ಅರ್ಷದೀಪ್ಸಿಂಗ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.
ಆರ್ಸಿಬಿ ಪ್ಲೇಯಿಂಗ್ 11: ಫಾಫ್ ಡುಪ್ಲೆಸಿಸ್, ಅನೂಜ್ ರಾವತ್, ವಿರಾಟ್ ಕೊಹ್ಲಿ, ಶೆರ್ಫಾನ್ ರುದರ್ಫೋರ್ಡ್, ದಿನೇಶ್ ಕಾರ್ತಿಕ್, ಡೇವಿಡ್ ವಿಲ್ಲಿ, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಭಾನುಕಾ ರಾಜಪಕ್ಸೆ (ವಿಕೆಟ್ ಕೀಪರ್), ಶಾರುಖ್ ಖಾನ್, ಒಡಿಯನ್ ಸ್ಮಿತ್, ರಾಜ್ ಬಾವಾ, ಅರ್ಷ್‌ದೀಪ್ ಸಿಂಗ್, ಹರ್‌ಪ್ರೀತ್ ಬ್ರಾರ್, ಸಂದೀಪ್ ಶರ್ಮಾ, ರಾಹುಲ್ ಚಾಹರ್
ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?
ಇದನ್ನೂ ಓದಿ: IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು