IPL 2022: RCB ತಂಡದ ಹೊಸ ನಾಯಕ ಇವರೇ..!
RCB's new captain: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್, ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಜೋಶ್ ಹ್ಯಾಝಲ್ವುಡ್.
ಐಪಿಎಲ್ ಸೀಸನ್ 15 ಗಾಗಿ (IPL 2022) ರಾಯಲ್ ಚಾಲೆಂಜರ್ಸ್ ಬೆಂಗಳೂರು (IPL 2022 RCB Captain) ತಂಡದ ಹೊಸ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಆರ್ಸಿಬಿ ನಾಯಕರುಗಳ ಪಟ್ಟಿಯಲ್ಲಿ ನಾಲ್ವರು ಆಟಗಾರರ ಹೆಸರುಗಳಿದ್ದವು. ಈ ನಾಲ್ವರು ಕೂಡ ಈ ಹಿಂದೆ ನಾಯಕರಾಗಿ ತಂಡಗಳನ್ನು ಮುನ್ನಡೆಸಿದ ಅನುಭವ ಕೂಡ ಹೊಂದಿದ್ದರು. ಆರ್ಸಿಬಿ ಕ್ಯಾಪ್ಟನ್ಸ್ ಪಟ್ಟಿಯಲ್ಲಿದ್ದ ಹೆಸರೆಂದರೆ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ ಹಾಗೂ ವಿರಾಟ್ ಕೊಹ್ಲಿ. ಇದೀಗ ಅಂತಿಮವಾಗಿ ಆರ್ಸಿಬಿ ತಂಡವು ಫಾಫ್ ಡುಪ್ಲೆಸಿಸ್ (Faf du Plessis) ಅವರನ್ನು ನಾಯಕನಾಗಿ ಆಯ್ಕೆ ಮಾಡಿದೆ. ಅದರಂತೆ ಐಪಿಎಲ್ ಸೀಸನ್ 15 ನಲ್ಲಿ ಆರ್ಸಿಬಿ ತಂಡವನ್ನು ಫಾಫ್ ಡುಪ್ಲೆಸಿಸ್ ಮುನ್ನಡೆಸಲಿದ್ದಾರೆ.
The Leader of the Pride is here!
Captain of RCB, @faf1307! ?#PlayBold #RCBCaptain #RCBUnbox #ForOur12thMan #UnboxTheBold pic.twitter.com/UfmrHBrZcb
— Royal Challengers Bangalore (@RCBTweets) March 12, 2022
ಈ ಹಿಂದೆಯೇ ಫಾಫ್ ಡುಪ್ಲೆಸಿಸ್ ಹೆಸರು ಜೋರಾಗಿ ಕೇಳಿ ಬಂದಿತ್ತು. ಏಕೆಂದರೆ ವಿರಾಟ್ ಕೊಹ್ಲಿ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಾಯಕತ್ವದ ಅನುಭವ ಹೊಂದಿರುವ ಏಕೈಕ ಆಯ್ಕೆ ಫಾಫ್ ಡುಪ್ಲೆಸಿಸ್ ಮಾತ್ರ. ಇನ್-ಫಾರ್ಮ್ ಓಪನರ್ ಕೂಡ ಆಗಿರುವ ಫಾಫ್ ಡು ಪ್ಲೆಸಿಸ್ ಆರ್ಸಿಬಿ ಮುಂದಿರುವ ಅತ್ಯುತ್ತಮ ಆಯ್ಕೆಯಾಗಿತ್ತು. ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿರುವ ಡುಪ್ಲೆಸಿಸ್ ಐಪಿಎಲ್ 2022 ರ ಸಂಪೂರ್ಣ ಅವಧಿಗೆ ಲಭ್ಯವಿರುತ್ತಾರೆ.
ಅಷ್ಟೇ ಅಲ್ಲದೆ ಡು ಪ್ಲೆಸಿಸ್ ದಕ್ಷಿಣ ಆಫ್ರಿಕಾ ತಂಡದ ನಾಯಕತ್ವದ ಅನುಭವವನ್ನು ಹೊಂದಿರುವ ಬಗ್ಗೆ ಇತರಿಗೆ ಮೆಗಾ ಹರಾಜಿಗೂ ಮುನ್ನ ಆರ್ಸಿಬಿ ನಿರ್ದೇಶಕ ಮೈಕ್ ಹೆಸನ್ ವಿವರಿಸಿದ್ದರು. ಹೀಗಾಗಿ ನಾವು ಅವರನ್ನು ಹರಾಜಿನಲ್ಲಿ ಖರೀದಿಸಬೇಕಾಗಿದೆ. ಇದಕ್ಕಾಗಿ ದೊಡ್ಡ ಮೊತ್ತವೊಂದನ್ನು ಫಾಫ್ ಡುಪ್ಲೆಸಿಸ್ಗಾಗಿ ತೆಗೆದಿಡಬೇಕಾಗುತ್ತದೆ ಎಂದು ಮೈಕ್ ಹೆಸನ್ ಮೆಗಾ ಹರಾಜಿಗೂ ಮುನ್ನ ನಡೆದ ಚರ್ಚೆಯಲ್ಲಿ ತಮ್ಮ ಪ್ಲ್ಯಾನ್ ಅನ್ನು ಮುಂದಿಟ್ಟಿದ್ದರು. ಅದರಂತೆ ಮೆಗಾ ಹರಾಜು ಮೂಲಕ ಫಾಫ್ ಡುಪ್ಲೆಸಿಸ್ ಅವರನ್ನು ಆರ್ಸಿಬಿ ಬರೋಬ್ಬರಿ 7 ಕೋಟಿ ರೂ. ನೀಡಿ ಖರೀದಿಸಿತು. ಅದರಂತೆ ಇದೀಗ ಫಾಫ್ ಡುಪ್ಲೆಸಿಸ್ ಅವರಿಗೆ ಆರ್ಸಿಬಿ ನಾಯಕ ಪಟ್ಟ ಒಲಿದಿದೆ ಎಂದು ತಿಳಿದು ಬಂದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್, ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಜೋಶ್ ಹ್ಯಾಝಲ್ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಶ್ ಪ್ರಭುದೇಸ್, ಚಮಾ ಮಿಲಿಂದ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಲವ್ನೀತ್ ಸಿಸೋಡಿಯಾ, ಡೇವಿಡ್ ವಿಲ್ಲಿ
ಇದನ್ನೂ ಓದಿ: IPL 2022: ಐಪಿಎಲ್ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್
(IPL 2022: Faf du Plessis is likely to be named as RCB’s new captain)
Published On - 4:38 pm, Sat, 12 March 22