AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಮೈದಾನಕ್ಕೆ ನುಗ್ಗಿದ ಕೊಹ್ಲಿಯ ಅಭಿಮಾನಿ: ಆಮೇಲೆ ಆಗಿದ್ದೇನು?

IPL 2022: ಬಿರುಸಿನ ಇನಿಂಗ್ಸ್ ಆಡಿದ ರಜತ್ ಪಾಟಿದಾರ್ 49 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಎಲಿಮಿನೇಟರ್​ ಪಂದ್ಯದಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟ್ಸ್​ಮನ್ ದಾಖಲೆ ಬರೆದರು.

Virat Kohli: ಮೈದಾನಕ್ಕೆ ನುಗ್ಗಿದ ಕೊಹ್ಲಿಯ ಅಭಿಮಾನಿ: ಆಮೇಲೆ ಆಗಿದ್ದೇನು?
Virat Kohli Fan Video
TV9 Web
| Updated By: ಝಾಹಿರ್ ಯೂಸುಫ್|

Updated on:May 26, 2022 | 8:32 PM

Share

ಐಪಿಎಲ್​ನ ಎಲಿಮಿನೇಟರ್​ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ ಭರ್ಜರಿ ಜಯ ಸಾಧಿಸಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB vs LSG) ತಂಡವು 2ನೇ ಕ್ವಾಲಿಫೈಯರ್​ಗೆ ಲಗ್ಗೆಯಿಟ್ಟಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್​ ತಂಡದ ನಾಯಕ ಕೆಎಲ್ ರಾಹುಲ್ (KL Rahul) ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಫಾಫ್ ಡುಪ್ಲೆಸಿಸ್​ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಆದರೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಜತ್ ಪಾಟಿದಾರ್ ಇಡೀ ತಂಡದ ಜವಾಬ್ದಾರಿಯನ್ನು ಒಬ್ಬರೇ ನಿಭಾಯಿಸಿಕೊಳ್ಳುವ ಗಮನ ಸೆಳೆದರು.

ಬಿರುಸಿನ ಇನಿಂಗ್ಸ್ ಆಡಿದ ರಜತ್ ಪಾಟಿದಾರ್ (Rajat Patidar) 49 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಎಲಿಮಿನೇಟರ್​ ಪಂದ್ಯದಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟ್ಸ್​ಮನ್ ದಾಖಲೆ ಬರೆದರು. ಅಂತಿಮವಾಗಿ ದಿನೇಶ್ ಕಾರ್ತಿಕ್ 23 ಎಸೆತಗಳಲ್ಲಿ 37 ರನ್ ಬಾರಿಸಿದರೆ, ರಜತ್ ಪಾಟಿದಾರ್ 54 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್, 12 ಫೋರ್​ನೊಂದಿಗೆ ಅಜೇಯ 112 ರನ್​ಗಳಿಸಿದರು. ಪರಿಣಾಮ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್​ ಕಲೆಹಾಕಿತು.

ಇದನ್ನೂ ಓದಿ
Image
Rajat Patidar: ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ರಜತ್ ಪಾಟಿದಾರ್
Image
IPL 2022: ಕೊನೆಯ ಓವರ್​ನಲ್ಲಿ ಚೇಸ್ ಮಾಡಿಯೇ ದಾಖಲೆ ಬರೆದ ಗುಜರಾತ್ ಟೈಟಾನ್ಸ್
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಈ ಬೃಹತ್ ಟಾರ್ಗೆಟ್ ಅನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್​ಗೆ ಮೊದಲ ಓವರ್​ನಲ್ಲೇ ಮೊಹಮ್ಮದ್ ಸಿರಾಜ್ ಆಘಾತ ನೀಡಿದರು. ಆರ್​ಸಿಬಿ ಪ್ರಥಮ ಓವರ್​ನಲ್ಲೇ ಕ್ವಿಂಟನ್ ಡಿಕಾಕ್ ವಿಕೆಟ್ ಪಡೆದರೂ ಆ ಬಳಿಕ ಕೆಎಲ್ ರಾಹುಲ್ ಹಾಗೂ ದೀಪಕ್ ಹೂಡಾ ಉತ್ತಮವಾಗಿ ಬ್ಯಾಟ್ ಬೀಸಿದ್ದರು. ಅದರಲ್ಲೂ ಪಂದ್ಯವು ಕೊನೆಯ 4 ಓವರ್​ಗಳ ರೋಚಕತೆಯತ್ತ ಸಾಗಿತ್ತು. ಆದರೆ ಈ ಹಂತದಲ್ಲಿ ದೀಪಕ್ ಹೂಡಾ (45) ಔಟಾದರೆ, 19ನೇ ಓವರ್​ನಲ್ಲಿ ಕೆಎಲ್ ರಾಹುಲ್ (79) ಕೂಡ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ಆರ್​ಸಿಬಿ ತಂಡದ ಗೆಲುವು ಖಚಿತವಾಗಿತ್ತು.

ಇತ್ತ ಅಂತಿಮ ಓವರ್​ ವೇಳೆಗೆ ಗೆಲುವಿನ ಖುಷಿಯಲ್ಲಿದ್ದ ಆರ್​ಸಿಬಿ ಅಭಿಮಾನಿಗಳ ಹರ್ಷೋದ್ಘಾರ ಸ್ಟೇಡಿಯಂನಲ್ಲಿ ಮುಗಿಲು ಮುಟ್ಟಿತ್ತು. ಈ ವೇಳೆ ಮೈದಾನಕ್ಕೆ ನುಗ್ಗಿದ ಅಭಿಮಾನಿಯೊಬ್ಬ ಬೌಂಡರಿ ಲೈನ್​ನಲ್ಲಿ ಫೀಲ್ಡಿಂಗ್​ನಲ್ಲಿ  ವಿರಾಟ್ ಕೊಹ್ಲಿಯನ್ನು ಭೇಟಿಯಾಗಲು ಪ್ರಯತ್ನಿಸಿದ ಘಟನೆ ಕೂಡ ನಡೆಯಿತು. ಅತ್ತ ಓವರ್​ ನಡೆಯುತ್ತಿದ್ದರೆ, ಇತ್ತ ಅಭಿಮಾನಿಯೊಬ್ಬ ಸೆಕ್ಯೂರಿಟಿಗಳನ್ನು ವಂಚಿಸಿ ಮೈದಾನಕ್ಕೆ ಜಿಗಿದಿದ್ದ. ಅಲ್ಲದೆ ನೇರವಾಗಿ ವಿರಾಟ್ ಕೊಹ್ಲಿಯತ್ತ ಓಡಿದ್ದಾರೆ. ಅಷ್ಟರಲ್ಲಾಗಲೇ ಓಡಿ ಬಂದ ಮೈದಾನದ ಸಿಬ್ಬಂದಿಗಳು ವಿರಾಟ್ ಕೊಹ್ಲಿಯ ಅಭಿಮಾನಿಯನ್ನು ಎತ್ತಿಕೊಂಡು ಹೋಗಿದ್ದಾರೆ. ಹೀಗೆ ಎತ್ತಿಕೊಂಡು ಹೋಗುತ್ತಿರುವುದನ್ನು ನೋಡಿ ಖುದ್ದು ವಿರಾಟ್ ಕೊಹ್ಲಿ ಅಶ್ಚರ್ಯವ್ಯಕ್ತಪಡಿಸಿದರು. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 208 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ಅಂತಿಮವಾಗಿ 6 ವಿಕೆಟ್ ನಷ್ಟಕ್ಕೆ 193 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಆರ್​ಸಿಬಿ ತಂಡವು 14 ರನ್​ಗಳಿಂದ ಜಯ ಸಾಧಿಸಿ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿತು. 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಆಡಲಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:55 pm, Thu, 26 May 22

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್