ಐಪಿಎಲ್ನ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ ಭರ್ಜರಿ ಜಯ ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs LSG) ತಂಡವು 2ನೇ ಕ್ವಾಲಿಫೈಯರ್ಗೆ ಲಗ್ಗೆಯಿಟ್ಟಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ (KL Rahul) ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಫಾಫ್ ಡುಪ್ಲೆಸಿಸ್ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಆದರೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಜತ್ ಪಾಟಿದಾರ್ ಇಡೀ ತಂಡದ ಜವಾಬ್ದಾರಿಯನ್ನು ಒಬ್ಬರೇ ನಿಭಾಯಿಸಿಕೊಳ್ಳುವ ಗಮನ ಸೆಳೆದರು.
ಬಿರುಸಿನ ಇನಿಂಗ್ಸ್ ಆಡಿದ ರಜತ್ ಪಾಟಿದಾರ್ (Rajat Patidar) 49 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಎಲಿಮಿನೇಟರ್ ಪಂದ್ಯದಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟ್ಸ್ಮನ್ ದಾಖಲೆ ಬರೆದರು. ಅಂತಿಮವಾಗಿ ದಿನೇಶ್ ಕಾರ್ತಿಕ್ 23 ಎಸೆತಗಳಲ್ಲಿ 37 ರನ್ ಬಾರಿಸಿದರೆ, ರಜತ್ ಪಾಟಿದಾರ್ 54 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್, 12 ಫೋರ್ನೊಂದಿಗೆ ಅಜೇಯ 112 ರನ್ಗಳಿಸಿದರು. ಪರಿಣಾಮ ಆರ್ಸಿಬಿ ತಂಡವು ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್ ಕಲೆಹಾಕಿತು.
ಈ ಬೃಹತ್ ಟಾರ್ಗೆಟ್ ಅನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ಗೆ ಮೊದಲ ಓವರ್ನಲ್ಲೇ ಮೊಹಮ್ಮದ್ ಸಿರಾಜ್ ಆಘಾತ ನೀಡಿದರು. ಆರ್ಸಿಬಿ ಪ್ರಥಮ ಓವರ್ನಲ್ಲೇ ಕ್ವಿಂಟನ್ ಡಿಕಾಕ್ ವಿಕೆಟ್ ಪಡೆದರೂ ಆ ಬಳಿಕ ಕೆಎಲ್ ರಾಹುಲ್ ಹಾಗೂ ದೀಪಕ್ ಹೂಡಾ ಉತ್ತಮವಾಗಿ ಬ್ಯಾಟ್ ಬೀಸಿದ್ದರು. ಅದರಲ್ಲೂ ಪಂದ್ಯವು ಕೊನೆಯ 4 ಓವರ್ಗಳ ರೋಚಕತೆಯತ್ತ ಸಾಗಿತ್ತು. ಆದರೆ ಈ ಹಂತದಲ್ಲಿ ದೀಪಕ್ ಹೂಡಾ (45) ಔಟಾದರೆ, 19ನೇ ಓವರ್ನಲ್ಲಿ ಕೆಎಲ್ ರಾಹುಲ್ (79) ಕೂಡ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ಆರ್ಸಿಬಿ ತಂಡದ ಗೆಲುವು ಖಚಿತವಾಗಿತ್ತು.
ಇತ್ತ ಅಂತಿಮ ಓವರ್ ವೇಳೆಗೆ ಗೆಲುವಿನ ಖುಷಿಯಲ್ಲಿದ್ದ ಆರ್ಸಿಬಿ ಅಭಿಮಾನಿಗಳ ಹರ್ಷೋದ್ಘಾರ ಸ್ಟೇಡಿಯಂನಲ್ಲಿ ಮುಗಿಲು ಮುಟ್ಟಿತ್ತು. ಈ ವೇಳೆ ಮೈದಾನಕ್ಕೆ ನುಗ್ಗಿದ ಅಭಿಮಾನಿಯೊಬ್ಬ ಬೌಂಡರಿ ಲೈನ್ನಲ್ಲಿ ಫೀಲ್ಡಿಂಗ್ನಲ್ಲಿ ವಿರಾಟ್ ಕೊಹ್ಲಿಯನ್ನು ಭೇಟಿಯಾಗಲು ಪ್ರಯತ್ನಿಸಿದ ಘಟನೆ ಕೂಡ ನಡೆಯಿತು. ಅತ್ತ ಓವರ್ ನಡೆಯುತ್ತಿದ್ದರೆ, ಇತ್ತ ಅಭಿಮಾನಿಯೊಬ್ಬ ಸೆಕ್ಯೂರಿಟಿಗಳನ್ನು ವಂಚಿಸಿ ಮೈದಾನಕ್ಕೆ ಜಿಗಿದಿದ್ದ. ಅಲ್ಲದೆ ನೇರವಾಗಿ ವಿರಾಟ್ ಕೊಹ್ಲಿಯತ್ತ ಓಡಿದ್ದಾರೆ. ಅಷ್ಟರಲ್ಲಾಗಲೇ ಓಡಿ ಬಂದ ಮೈದಾನದ ಸಿಬ್ಬಂದಿಗಳು ವಿರಾಟ್ ಕೊಹ್ಲಿಯ ಅಭಿಮಾನಿಯನ್ನು ಎತ್ತಿಕೊಂಡು ಹೋಗಿದ್ದಾರೆ. ಹೀಗೆ ಎತ್ತಿಕೊಂಡು ಹೋಗುತ್ತಿರುವುದನ್ನು ನೋಡಿ ಖುದ್ದು ವಿರಾಟ್ ಕೊಹ್ಲಿ ಅಶ್ಚರ್ಯವ್ಯಕ್ತಪಡಿಸಿದರು. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
When the intruder towards Virat Kohli at Eden Gardens – VK couldn't control his laugh seeing policeman's reaction ? pic.twitter.com/Ctvw8fU4uy
— sohom ᱬ (@AwaaraHoon) May 26, 2022
ಇನ್ನು ಈ ಪಂದ್ಯದಲ್ಲಿ ಆರ್ಸಿಬಿ ನೀಡಿದ 208 ರನ್ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ಅಂತಿಮವಾಗಿ 6 ವಿಕೆಟ್ ನಷ್ಟಕ್ಕೆ 193 ರನ್ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಆರ್ಸಿಬಿ ತಂಡವು 14 ರನ್ಗಳಿಂದ ಜಯ ಸಾಧಿಸಿ 2ನೇ ಕ್ವಾಲಿಫೈಯರ್ಗೆ ಪ್ರವೇಶಿಸಿತು. 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ಸಿಬಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಆಡಲಿದೆ.
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:55 pm, Thu, 26 May 22