IPL 2022 Final GT vs RR: ಫೈನಲ್ ಪ್ಲೇಯಿಂಗ್ ಇಲೆವೆನ್
IPL 2022 Final GT vs RR Playing 11: ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ಉತ್ತಮ ಪೈಪೋಟಿ ನೀಡಿತ್ತು. ಕೊನೆಯ ಓವರ್ನಲ್ಲಿ ಡೇವಿಡ್ ಮಿಲ್ಲರ್ 3 ಸಿಕ್ಸ್ ಬಾರಿಸುವ ಮೂಲಕ ಗುಜರಾತ್ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.
IPL 2022 Final: ಗುಜರಾತ್ನ ಅಹಮದಾಬಾದ್ನಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ ಸೀಸನ್ 15 ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ (RR) ತಂಡದ ನಾಯಕ ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಮೊದಲು ಬೌಲಿಂಗ್ ಮಾಡಲಿದೆ. ಈ ಪಂದ್ಯದಲ್ಲಿ ಗುಜರಾತ್ ಗೆದ್ದರೆ ಮೊದಲ ಬಾರಿಗೆ ಟ್ರೋಫಿ ಎತ್ತಿ ಹಿಡಿಯಲಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ಗೆದ್ದರೆ 14 ವರ್ಷಗಳ ಬಳಿಕ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಲಿದೆ. ಹೀಗಾಗಿ ಉಭಯ ತಂಡಗಳಿಂದ ಫೈನಲ್ ಪಂದ್ಯದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
ಇದಾಗ್ಯೂ ಈ ಬಾರಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಗುಜರಾತ್ ಟೈಟಾನ್ಸ್ ಮೇಲುಗೈ ಸಾಧಿಸಿದೆ. ಏಕೆಂದರೆ ಗುಜರಾತ್ ಹಾಗೂ ರಾಜಸ್ಥಾನ್ ಈ ಸಲ 2 ಪಂದ್ಯವಾಡಿದೆ. ಈ ಎರಡೂ ಮ್ಯಾಚ್ ಅನ್ನು ಗುಜರಾತ್ ಟೈಟನ್ಸ್ ಗೆದ್ದಿದೆ. ಲೀಗ್ ಹಂತದಲ್ಲಿ ಆಡಿದ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ದ ಗುಜರಾತ್ ಟೈಟಾನ್ಸ್ 37 ರನ್ಗಳಿಂದ ಜಯ ಸಾಧಿಸಿತ್ತು. ಇನ್ನು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ 7 ವಿಕೆಟ್ಗಳಿಂದ ಗೆಲುವು ದಾಖಲಿಸಿತ್ತು. ಹೀಗಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಗುಜರಾತ್ ಟೈಟಾನ್ಸ್ ಮೇಲುಗೈ ಹೊಂದಿದೆ ಎನ್ನಬಹುದು.
ಇದಾಗ್ಯೂ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ಉತ್ತಮ ಪೈಪೋಟಿ ನೀಡಿತ್ತು. ಕೊನೆಯ ಓವರ್ನಲ್ಲಿ ಡೇವಿಡ್ ಮಿಲ್ಲರ್ 3 ಸಿಕ್ಸ್ ಬಾರಿಸುವ ಮೂಲಕ ಗುಜರಾತ್ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಹೀಗಾಗಿ ಫೈನಲ್ ಪಂದ್ಯದಲ್ಲಿ ಮತ್ತೆ ರಾಜಸ್ಥಾನ್ ರಾಯಲ್ಸ್ ಕಡೆಯಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಅದರಂತೆ ಇಂದು ಕಣಕ್ಕಿಳಿಯುತ್ತಿರುವ ಉಭಯ ತಂಡಗಳು ಹೀಗಿದೆ.
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಒಬೆದ್ ಮೆಕಾಯ್.
ಗುಜರಾತ್ ಟೈಟಾನ್ಸ್: ಹಾರ್ದಿಕ್ ಪಾಂಡ್ಯ, ವೃದ್ಧಿಮಾನ್ ಸಹಾ, ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಆರ್ ಸಾಯಿ ಕಿಶೋರ್, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಶಮಿ.
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:34 pm, Sun, 29 May 22