IPL 2022 Final GT vs RR: ಫೈನಲ್ ಪ್ಲೇಯಿಂಗ್ ಇಲೆವೆನ್

| Updated By: ಝಾಹಿರ್ ಯೂಸುಫ್

Updated on: May 29, 2022 | 7:34 PM

IPL 2022 Final GT vs RR Playing 11: ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ಉತ್ತಮ ಪೈಪೋಟಿ ನೀಡಿತ್ತು. ಕೊನೆಯ ಓವರ್​ನಲ್ಲಿ ಡೇವಿಡ್ ಮಿಲ್ಲರ್ 3 ಸಿಕ್ಸ್ ಬಾರಿಸುವ ಮೂಲಕ ಗುಜರಾತ್ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.

IPL 2022 Final GT vs RR: ಫೈನಲ್ ಪ್ಲೇಯಿಂಗ್ ಇಲೆವೆನ್
GT vs RR
Follow us on

IPL 2022 Final: ಗುಜರಾತ್​​ನ ಅಹಮದಾಬಾದ್​ನಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ ಸೀಸನ್ 15 ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ (RR)​ ತಂಡದ ನಾಯಕ ಸಂಜು ಸ್ಯಾಮ್ಸನ್​ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಹಾರ್ದಿಕ್ ಪಾಂಡ್ಯ​ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಮೊದಲು ಬೌಲಿಂಗ್ ಮಾಡಲಿದೆ. ಈ ಪಂದ್ಯದಲ್ಲಿ ಗುಜರಾತ್ ಗೆದ್ದರೆ ಮೊದಲ ಬಾರಿಗೆ ಟ್ರೋಫಿ ಎತ್ತಿ ಹಿಡಿಯಲಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ಗೆದ್ದರೆ 14 ವರ್ಷಗಳ ಬಳಿಕ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಲಿದೆ. ಹೀಗಾಗಿ ಉಭಯ ತಂಡಗಳಿಂದ ಫೈನಲ್ ಪಂದ್ಯದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಇದಾಗ್ಯೂ ಈ ಬಾರಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಗುಜರಾತ್ ಟೈಟಾನ್ಸ್ ಮೇಲುಗೈ ಸಾಧಿಸಿದೆ. ಏಕೆಂದರೆ ಗುಜರಾತ್ ಹಾಗೂ ರಾಜಸ್ಥಾನ್ ಈ ಸಲ 2 ಪಂದ್ಯವಾಡಿದೆ. ಈ ಎರಡೂ ಮ್ಯಾಚ್ ಅನ್ನು ಗುಜರಾತ್ ಟೈಟನ್ಸ್ ಗೆದ್ದಿದೆ. ಲೀಗ್ ಹಂತದಲ್ಲಿ ಆಡಿದ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ದ ಗುಜರಾತ್ ಟೈಟಾನ್ಸ್ 37 ರನ್​ಗಳಿಂದ ಜಯ ಸಾಧಿಸಿತ್ತು. ಇನ್ನು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ 7 ವಿಕೆಟ್​ಗಳಿಂದ ಗೆಲುವು ದಾಖಲಿಸಿತ್ತು. ಹೀಗಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಗುಜರಾತ್ ಟೈಟಾನ್ಸ್ ಮೇಲುಗೈ ಹೊಂದಿದೆ ಎನ್ನಬಹುದು.

ಇದಾಗ್ಯೂ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ಉತ್ತಮ ಪೈಪೋಟಿ ನೀಡಿತ್ತು. ಕೊನೆಯ ಓವರ್​ನಲ್ಲಿ ಡೇವಿಡ್ ಮಿಲ್ಲರ್ 3 ಸಿಕ್ಸ್ ಬಾರಿಸುವ ಮೂಲಕ ಗುಜರಾತ್ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಹೀಗಾಗಿ ಫೈನಲ್ ಪಂದ್ಯದಲ್ಲಿ ಮತ್ತೆ ರಾಜಸ್ಥಾನ್ ರಾಯಲ್ಸ್ ಕಡೆಯಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಅದರಂತೆ ಇಂದು ಕಣಕ್ಕಿಳಿಯುತ್ತಿರುವ ಉಭಯ ತಂಡಗಳು ಹೀಗಿದೆ.

ಇದನ್ನೂ ಓದಿ
Rajat Patidar: ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ರಜತ್ ಪಾಟಿದಾರ್
IPL 2022: ಕೊನೆಯ ಓವರ್​ನಲ್ಲಿ ಚೇಸ್ ಮಾಡಿಯೇ ದಾಖಲೆ ಬರೆದ ಗುಜರಾತ್ ಟೈಟಾನ್ಸ್
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಒಬೆದ್ ಮೆಕಾಯ್.

ಗುಜರಾತ್ ಟೈಟಾನ್ಸ್: ಹಾರ್ದಿಕ್ ಪಾಂಡ್ಯ, ವೃದ್ಧಿಮಾನ್ ಸಹಾ, ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಆರ್ ಸಾಯಿ ಕಿಶೋರ್, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಶಮಿ.

 

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

Published On - 7:34 pm, Sun, 29 May 22