IPL 2022 Final: ಐಪಿಎಲ್​ನಲ್ಲಿ ಯಾರು ವಿನ್ನರ್, ಯಾರು ರನ್ನರ್: ಇಲ್ಲಿದೆ ಸಂಪೂರ್ಣ ಪಟ್ಟಿ

IPL 2022 Final: ಪಿಎಲ್ ಇತಿಹಾಸದಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ತಂಡ ಯಾವುದು, ರನ್ನರ್ ಆದ ತಂಡ ಯಾವುದೆಂದು ನೋಡೋಣ...

IPL 2022 Final: ಐಪಿಎಲ್​ನಲ್ಲಿ ಯಾರು ವಿನ್ನರ್, ಯಾರು ರನ್ನರ್: ಇಲ್ಲಿದೆ ಸಂಪೂರ್ಣ ಪಟ್ಟಿ
Ipl winners list
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 29, 2022 | 3:55 PM

IPL 2022: ಐಪಿಎಲ್​ನ 15ನೇ ಫೈನಲ್​ಗೆ ಅಹಮದಾಬಾದ್ ಸ್ಟೇಡಿಯಂ ಸಜ್ಜಾಗಿ ನಿಂತಿದೆ. ಈ ಬಾರಿಯ ಅಂತಿಮ ಹಣಾಹಣಿಯಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ (GT vs RR) ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗುಜರಾತ್ ಗೆದ್ದರೆ ಚೊಚ್ಚಲ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ. ಇನ್ನು ರಾಜಸ್ಥಾನ್ ಗೆದ್ದರೆ 14 ವರ್ಷಗಳ ಬಳಿಕ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸಲಿದೆ. ಆಗಿದ್ರೆ ಕಳೆದ 14 ಸೀಸನ್​ ಐಪಿಎಲ್ ಇತಿಹಾಸದಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ತಂಡ ಯಾವುದು, ರನ್ನರ್ ಆದ ತಂಡ ಯಾವುದೆಂದು ನೋಡೋಣ…

  1. IPL 2021-ಚೆನ್ನೈ ಸೂಪರ್ ಕಿಂಗ್ಸ್: ಕಳೆದ ಸೀಸನ್​ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಕೊಲ್ಕತ್ತಾ ನೈಟ್ ರೈಡರ್ಸ್​ ವಿರುದ್ದ ಆಡಿದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು CSK 3 ವಿಕೆಟ್ ನಷ್ಟಕ್ಕೆ 192 ರನ್​ ಕಲೆಹಾಕಿತು. ಈ ಬೃಹಯ್ ಮೊತ್ತವನ್ನು ಬೆನ್ನತ್ತಿ ಕೆಕೆಆರ್​ 9 ವಿಕೆಟ್ ಕಳೆದುಕೊಂಡು 165 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಸಿಎಸ್​ಕೆ 27 ರನ್‌ಗಳಿಂದ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.
  2. IPL 2020-ಮುಂಬೈ ಇಂಡಿಯನ್ಸ್: 2020ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ 5 ವಿಕೆಟ್​ಗಳ ಗೆಲುವು ದಾಖಲಿಸುವ ಮೂಲಕ ಮುಂಬೈ ಇಂಡಿಯನ್ಸ್ 5ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.
  3. IPL 2019-ಮುಂಬೈ ಇಂಡಿಯನ್ಸ್: ಐಪಿಎಲ್ 12ನೇ ಸೀಸನ್​ ಫೈನಲ್​ನಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿದ್ದವು. ಫೈನಲ್​ನ ಕೊನೆಯ ಎಸೆತದಲ್ಲಿ 1 ರನ್​ಗಳಿಂದ ಜಯಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ ಚಾಂಪಿಯನ್​ ಪಟ್ಟ ಅಲಂಕರಿಸಿದ್ದು ಇತಿಹಾಸ.
  4. IPL 2018-ಚೆನ್ನೈ ಸೂಪರ್ ಕಿಂಗ್ಸ್: ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್‌ನಲ್ಲಿ ಎರಡಕ್ಕಿಂತ ಹೆಚ್ಚು ಟ್ರೋಫಿಗಳನ್ನು ಗೆದ್ದ ಎರಡನೇ ತಂಡವಾಗಿದೆ. 2018 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ದ ಗೆಲ್ಲುವ ಮೂಲಕ ಸಿಎಸ್​ಕೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
  5. ಇದನ್ನೂ ಓದಿ
    Image
    Rajat Patidar: ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ರಜತ್ ಪಾಟಿದಾರ್
    Image
    IPL 2022: ಕೊನೆಯ ಓವರ್​ನಲ್ಲಿ ಚೇಸ್ ಮಾಡಿಯೇ ದಾಖಲೆ ಬರೆದ ಗುಜರಾತ್ ಟೈಟಾನ್ಸ್
    Image
    IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
    Image
    IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು
  6. IPL 2017-ಮುಂಬೈ ಇಂಡಿಯನ್ಸ್: ಐಪಿಎಲ್ 2017 ರ ಫೈನಲ್‌ನಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಕೇವಲ ಒಂದು ರನ್​ಗಳಿಂದ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
  7. IPL 2016-ಸನ್‌ರೈಸರ್ಸ್ ಹೈದರಾಬಾದ್: ಸನ್‌ರೈಸರ್ಸ್ ಹೈದರಾಬಾದ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಫೈನಲ್ ಪಂದ್ಯದಲ್ಲಿ ಕೇವಲ 8 ರನ್‌ಗಳಿಂದ ಗೆದ್ದು ಎಸ್​ಆರ್​ಹೆಚ್ ಹೆಸರಿನಲ್ಲಿ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
  8. IPL 2015-ಮುಂಬೈ ಇಂಡಿಯನ್ಸ್: 2015 ರ ಫೈನಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ 41 ರನ್​ಗಳ ಭರ್ಜರಿ ಜಯ ಸಾಧಿಸುವ ಮೂಲಕ ಮುಂಬೈ ಇಂಡಿಯನ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
  9. IPL 2014-ಕೋಲ್ಕತ್ತಾ ನೈಟ್ ರೈಡರ್ಸ್: 2012ರ ಆವೃತ್ತಿಯ ಫೈನಲ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ನೀಡಿದ 199 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತುವ ಮೂಲಕ ಕೆಕೆಆರ್ ತಂಡವು 3 ವಿಕೆಟ್ ರೋಚಕ ಜಯದೊಂದಿಗೆ ಚಾಂಪಿಯನ್ ಪಟ್ಟಕ್ಕೇರಿತು.
  10. IPL 2013-ಮುಂಬೈ ಇಂಡಿಯನ್ಸ್: ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ದದ ಫೈನಲ್ ಪಂದ್ಯದಲ್ಲಿ 23 ರನ್​ಗಳ ಜಯದೊಂದಿಗೆ ಮುಂಬೈ ಇಂಡಿಯನ್ಸ್ ತಂಡವು ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
  11. IPL 2012-ಕೋಲ್ಕತ್ತಾ ನೈಟ್ ರೈಡರ್ಸ್:ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 5 ವಿಕೆಟ್​ಗಳಿಂದ ಸೋಲಿಸುವ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಐಪಿಎಲ್​ನಲ್ಲಿ ಚೊಚ್ಚಲ ಬಾರಿಗೆ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು.
  12. IPL 2011-ಚೆನ್ನೈ ಸೂಪರ್ ಕಿಂಗ್ಸ್: ಚನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ ಬ್ಯಾಕ್ ಟು ಬ್ಯಾಕ್ ಫೈನಲ್ಸ್ ಗೆದ್ದ ಮೊದಲ ತಂಡವಾಗಿದೆ. ಫೈನಲ್​ಲ್ಲಿ ಆರ್​ಸಿಬಿ ವಿರುದ್ದ 58 ರನ್​ಗಳಿಂದ ಜಯಗಳಿಸಿ ಟ್ರೋಫಿಯನ್ನು ಎತ್ತಿ ಹಿಡಿಯಿತು.
  13. IPL 2010-ಚೆನ್ನೈ ಸೂಪರ್ ಕಿಂಗ್ಸ್: 2010ರ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 22 ರನ್​ಗಳಿಂದ ಸೋಲಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
  14. IPL 2009-ಡೆಕ್ಕನ್ ಚಾರ್ಜರ್ಸ್: ಐಪಿಎಲ್​ನ 2ನೇ ಸೀಸನ್​ನ ಫೈನಲ್ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು 6 ರನ್​ಗಳಿಂದ ಸೋಲಿಸುವ ಮೂಲಕ ಡೆಕ್ಕನ್ ಚಾರ್ಜರ್ಸ್​ (ಈಗಿನ ಎಸ್​ಆರ್​ಹೆಚ್​) ತಂಡವು ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತ್ತು.
  15. IPL 2008-ರಾಜಸ್ಥಾನ್ ರಾಯಲ್ಸ್: ಚೊಚ್ಚಲ ಐಪಿಎಲ್ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 163 ರನ್​ ಕಲೆಹಾಕಿತು. ಈ ಸ್ಪರ್ಧಾತ್ಮಕ ಸವಾಲು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಕೊನೆಯ ಎಸೆತದಲ್ಲಿ ಗೆಲ್ಲುವ ಮೂಲಕ ರೋಚಕ ಜಯ ಸಾಧಿಸಿ ಮೊದಲ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

ಇದೀಗ 14 ವರ್ಷಗಳ ಬಳಿಕ ರಾಜಸ್ಥಾನ್ ರಾಯಲ್ಸ್ ಮತ್ತೆ ಫೈನಲ್​ಗೆ ಪ್ರವೇಶಿಸಿದೆ. ಈ ಬಾರಿ ಎದುರಾಳಿ ಗುಜರಾತ್ ಟೈಟಾನ್ಸ್. ಉಭಯ ತಂಡಗಳು ಬಲಿಷ್ಠವಾಗಿರುವ ಕಾರಣ ಅಂತಿಮ ಹಣಾಹಣಿಯಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ