IPL 2022 format explained: 2 ಗುಂಪು, 70 ಪಂದ್ಯಗಳು: ಹೇಗಿರಲಿದೆ IPL 2022 ಟೂರ್ನಿ
IPL 2022 format explained: ಲೀಗ್ ಹಂತದ ಒಟ್ಟು 70 ಪಂದ್ಯಗಳನ್ನು ಮುಂಬೈ ಹಾಗೂ ಪುಣೆಯ 4 ಸ್ಟೇಡಿಯಂಗಳಲ್ಲಿ ಆಡಲಾಗುತ್ತದೆ. ಅದರಂತೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 20 ಪಂದ್ಯಗಳು, ಬ್ರಬೋರ್ನ್ ಸ್ಟೇಡಿಯಂ (CCI)ನಲ್ಲಿ 15 ಪಂದ್ಯಗಳು, ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ 20 ಪಂದ್ಯಗಳು ನಡೆಯಲಿದೆ.
ಐಪಿಎಲ್ ಸೀಸನ್ 15 ಗಾಗಿ ದಿನಾಂಕ ಘೋಷಣೆಯಾಗಿದೆ. ಈ ಬಾರಿ ಐಪಿಎಲ್ನ (IPL 2022 format explained) ಫಾರ್ಮಾಟ್ ಬದಲಿಸಲಾಗಿದ್ದು, ಅದರಂತೆ ಈ ಬಾರಿ ಒಟ್ಟು 10 ತಂಡಗಳು ಎರಡು ಗುಂಪುಗಳಾಗಿ ಕಣಕ್ಕಿಳಿಯಲಿದೆ. ಈ ಹಿಂದಿನ ಫಾರ್ಮಾಟ್ನಲ್ಲಿ ಪಂದ್ಯ ನಡೆಸಿದರೆ ಒಟ್ಟು 94 ಪಂದ್ಯಗಳನ್ನು ಆಡಬೇಕಾಗುತ್ತದೆ. ಹೀಗಾಗಿ ಬಿಸಿಸಿಐ (BCCI) ರೌಂಡ್ ರಾಬಿನ್ ಫಾರ್ಮಾಟ್ನಲ್ಲಿ ಟೂರ್ನಿ ನಡೆಸಲಿದೆ. ಅಂದರೆ ಇಲ್ಲಿ 10 ತಂಡಗಳನ್ನು 5 ತಂಡಗಳಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಆ ಬಳಿಕ ತಲಾ 14 ಪಂದ್ಯಗಳನ್ನು ಆಡಿಸಲಾಗುತ್ತದೆ. ಅಂದರೆ ಗ್ರೂಪ್ A-ನಲ್ಲಿರುವ 5 ತಂಡಗಳು ಪರಸ್ಪರ ಎರಡೆರಡು ಪಂದ್ಯಗಳನ್ನು ಆಡಲಿದೆ. ಆ ಬಳಿಕ ಗ್ರೂಪ್ ಬಿ-ನಲ್ಲಿರುವ ತಂಡದ ವಿರುದ್ದ ಒಂದೊಂದು ಪಂದ್ಯವಾಡಲಿದೆ. ಇದೇ ಮಾದರಿಯಲ್ಲಿ ಗ್ರೂಪ್ ಬಿ ತಂಡಗಳು ಕೂಡ ಆಡಲಿದೆ.
ಉದಾಹರಣೆಗೆ: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗ್ರೂಪ್ B-ನಲ್ಲಿದ್ದು, ತನ್ನದೇ ಗ್ರೂಪ್ನಲ್ಲಿರುವ 4 ತಂಡಗಳ ವಿರುದ್ದ ತಲಾ 2 ಪಂದ್ಯಗಳನ್ನು ಆಡಲಿದೆ. ಇಲ್ಲಿ ಒಟ್ಟು ಪಂದ್ಯಗಳ ಸಂಖ್ಯೆ 8 ಆಗುತ್ತೆ. ಹಾಗೆಯೇ ಗ್ರೂಪ್ A-ನಲ್ಲಿರುವ 5 ತಂಡಗಳ ತಂಡಗಳ ವಿರುದ್ದ ತಲಾ ಒಂದು ಪಂದ್ಯಗಳನ್ನು ಆಡಲಿದೆ. ಇದರೊಂದಿಗೆ ಪ್ರತಿ ತಂಡಗಳ ಪಂದ್ಯಗಳ ಸಂಖ್ಯೆ 13 ಆಗಲಿದೆ. ಇದರ ಜೊತೆಗೆ ಗ್ರೂಪ್ A ನಲ್ಲಿರುವ ಒಂದು ತಂಡದ ವಿರುದ್ದ ಎರಡು ಪಂದ್ಯ ಆಡಲಿದೆ. ಈ ಮೂಲಕ 14 ಪಂದ್ಯಗಳನ್ನು ಪೂರ್ಣಗೊಳಿಸಲಾಗುತ್ತದೆ. ಈ ಬಾರಿ ಆರ್ಸಿಬಿ ಗ್ರೂಪ್ ಎ ನಲ್ಲಿರುವ ರಾಜಸ್ಥಾನ್ ರಾಯಲ್ಸ್ ವಿರುದ್ದ 2 ಪಂದ್ಯಗಳನ್ನು ಆಡಲಿದೆ. ಅಂದರೆ ಪ್ರತಿ ತಂಡಗಳು 5 ತಂಡಗಳ ವಿರುದ್ದ ತಲಾ ಎರೆಡೆರಡು ಪಂದ್ಯಗಳನ್ನು ಹಾಗೂ ನಾಲ್ಕು ತಂಡಗಳ ವಿರುದ್ದ ಒಂದೊಂದು ಪಂದ್ಯಗಳನ್ನು ಆಡಲಿದೆ. ಈ ಮೂಲಕ ಒಟ್ಟು 70 ಲೀಗ್ ಪಂದ್ಯಗಳನ್ನು ಆಡಲಿದೆ.
ಇದಾಗ್ಯೂ ಪಾಯಿಂಟ್ ಟೇಬಲ್ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಅಂದರೆ 10 ತಂಡಗಳಿಗೂ ಒಂದೇ ಪಾಯಿಂಟ್ ಟೇಬಲ್ ಇರಲಿದೆ. ಇಲ್ಲಿ ಟಾಪ್-4 ನಲ್ಲಿ ಸ್ಥಾನ ಪಡೆಯುವ ನಾಲ್ಕು ತಂಡಗಳು ಪ್ಲೇ ಆಫ್ಗೆ ಪ್ರವೇಶಿಸಲಿದೆ. ಇನ್ನು ಪ್ಲೇಆಫ್ ಈ ಹಿಂದಿನಂತೆ ಇರಲಿದ್ದು, ಮೊದಲ ಕ್ವಾಲಿಫೈಯರ್ ಪಂದ್ಯ, ಬಳಿಕ ಎಲಿಮಿನೇಟರ್ ಪಂದ್ಯ…ಆ ನಂತರ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಅದರಂತೆ ಫೈನಲ್ ಸೇರಿದಂತೆ ಪ್ಲೇಆಫ್ನಲ್ಲಿ 4 ಪಂದ್ಯಗಳನ್ನು ಆಡಲಾಗುತ್ತದೆ.
ಇನ್ನು ಲೀಗ್ ಹಂತದ ಒಟ್ಟು 70 ಪಂದ್ಯಗಳನ್ನು ಮುಂಬೈ ಹಾಗೂ ಪುಣೆಯ 4 ಸ್ಟೇಡಿಯಂಗಳಲ್ಲಿ ಆಡಲಾಗುತ್ತದೆ. ಅದರಂತೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 20 ಪಂದ್ಯಗಳು, ಬ್ರಬೋರ್ನ್ ಸ್ಟೇಡಿಯಂ (CCI)ನಲ್ಲಿ 15 ಪಂದ್ಯಗಳು, ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ 20 ಪಂದ್ಯಗಳು ನಡೆಯಲಿದೆ. ಹಾಗೆಯೇ ಪುಣೆಯ ಎಂಸಿಎ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ 15 ಪಂದ್ಯಗಳು ಜರುಗಲಿದೆ. ಈ ಪಂದ್ಯಗಳ ಬಳಿಕ ಪ್ಲೇ ಆಫ್ಗೆ ಮೈದಾನವನ್ನು ನಿರ್ಧರಿಸಲಾಗುತ್ತದೆ. ಸದ್ಯ ಮಾಹಿತಿ ಪ್ರಕಾರ ಪ್ಲೇ ಆಫ್ ಪಂದ್ಯವು ಅಹಮದಾಬಾದ್ನಲ್ಲಿ ನಡೆಯುವ ಸಾಧ್ಯತೆಯಿದೆ. ಇನ್ನು ಫೈನಲ್ ಪಂದ್ಯವು ಮೇ 29 ರಂದು ನಡೆಯಲಿದೆ.
ಗ್ರೂಪ್- A ತಂಡಗಳು:
ಮುಂಬೈ ಇಂಡಿಯನ್ಸ್
ಕೊಲ್ಕತ್ತಾ ನೈಟ್ ರೈಡರ್ಸ್
ರಾಜಸ್ಥಾನ್ ರಾಯಲ್ಸ್
ಡೆಲ್ಲಿ ಕ್ಯಾಪಿಟಲ್ಸ್
ಲಕ್ನೋ ಸೂಪರ್ ಜೈಂಟ್ಸ್
ಗ್ರೂಪ್- B ತಂಡಗಳು:
ಚೆನ್ನೈ ಸೂಪರ್ ಕಿಂಗ್ಸ್
ರಾಯಲ್ ಚಾಲೆಂಜರ್ಸ್ ಬೆಂಗಳೂರು
ಪಂಜಾಬ್ ಕಿಂಗ್ಸ್
ಸನ್ರೈಸರ್ಸ್ ಹೈದರಾಬಾದ್
ಗುಜರಾತ್ ಟೈಟನ್ಸ್
ಇದನ್ನೂ ಓದಿ: World Record: ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಯುವ ಬ್ಯಾಟ್ಸ್ಮನ್
ಇದನ್ನೂ ಓದಿ: ಐಪಿಎಲ್ ಆರಂಭಿಕ ಪಂದ್ಯಗಳಿಗೆ ಈ ಆಟಗಾರರು ಅಲಭ್ಯ
ಇದನ್ನೂ ಓದಿ: IPL 2022: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶೇನ್ ವಾಟ್ಸನ್ ಎಂಟ್ರಿ..!
Published On - 2:50 pm, Sat, 26 February 22