AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ ಹೊಸ ತಂಡಕ್ಕೆ ಟೀಮ್ ಇಂಡಿಯಾಗೆ ವಿಶ್ವಕಪ್ ಗೆದ್ದುಕೊಟ್ಟ ಕೋಚ್?

Gary Kirsten: ಐಪಿಎಲ್​ 2015 ಮತ್ತು 2016 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಕೋಚ್​ ಆಗಿ ಕರ್ಸ್ಟನ್ ಕಾರ್ಯ ನಿರ್ವಹಿಸಿದ್ದರು. ಈ ವೇಳೆ ಡೆಲ್ಲಿ ತಂಡವು 28 ಪಂದ್ಯಗಳಲ್ಲಿ ಗೆದ್ದಿದ್ದು ಕೇವಲ 8 ಪಂದ್ಯಗಳಲ್ಲಿ ಮಾತ್ರ.

IPL 2022: ಐಪಿಎಲ್ ಹೊಸ ತಂಡಕ್ಕೆ ಟೀಮ್ ಇಂಡಿಯಾಗೆ ವಿಶ್ವಕಪ್ ಗೆದ್ದುಕೊಟ್ಟ ಕೋಚ್?
IPL 2022
TV9 Web
| Edited By: |

Updated on: Nov 15, 2021 | 6:44 PM

Share

ಟಿ20 ವಿಶ್ವಕಪ್ (T20 World Cup 2021) ಮುಕ್ತಾಯದ ಬೆನ್ನಲ್ಲೇ ಎಲ್ಲರ ಗಮನ ಐಪಿಎಲ್ (IPL 2022)​ ಕ್ರಿಕೆಟ್‌ನತ್ತ ನೆಟ್ಟಿದೆ. ಈಗಾಗಲೇ ಐಪಿಎಲ್​ 2022ರ ಸಿದ್ಧತೆಗಳು ಶುರುವಾಗಿದ್ದು, ಮುಂದಿನ ತಿಂಗಳಲ್ಲಿ ಮೆಗಾ ಹರಾಜು ನಡೆಯುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ಎಲ್ಲಾ ತಂಡಗಳು ಪೂರ್ವ ತಯಾರಿಯನ್ನು ಆರಂಭಿಸಿದೆ. ಅದರಲ್ಲೂ ಹೊಸದಾಗಿ ಸೇರ್ಪಡೆಯಾಗಿರುವ ಲಕ್ನೋ ಫ್ರಾಂಚೈಸಿ ಕೋಚ್ ಹಾಗೂ ಇನ್ನಿತರ ಸಿಬ್ಬಂದಿಗಳ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಿದೆ. ಸದ್ಯ ಮಾಹಿತಿ ಪ್ರಕಾರ ಲಕ್ನೋ ತಂಡದ ಮಾಲೀಕರಾದ RPSG ತಮ್ಮ ತಂಡದ ಕೋಚ್ ಸ್ಥಾನಕ್ಕೆ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಗ್ಯಾರಿ ಕರ್ಸ್ಟನ್ ಅವರನ್ನು ಸಂಪರ್ಕಿಸಿದ್ದಾರೆ. ಈ ಹಿಂದೆ ಟೀಮ್ ಇಂಡಿಯಾ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ಗ್ಯಾರಿ ಕಸ್ಟರ್ನ್, 2011 ರಲ್ಲಿ ಭಾರತ ತಂಡಕ್ಕೆ ಏಕದಿನ ವಿಶ್ವಕಪ್ ತಂದುಕೊಟ್ಟಿದ್ದರು. ಇದೇ ಕಾರಣದಿಂದ ತಮ್ಮ ತಂಡಕ್ಕೆ ಗ್ಯಾರಿ ಕಸ್ಟರ್ನ್​ ಅವರನ್ನು ಕರೆತರುವ ಯೋಜನೆಯಲ್ಲಿದೆ RPSG ಮಾಲಿಕತ್ವದ ಲಕ್ನೋ ಫ್ರಾಂಚೈಸಿ.

ಅತ್ತ ಟೀಮ್ ಇಂಡಿಯಾ ತರಬೇತುದಾರರಾಗಿ ಯಶಸ್ವಿಯಾಗಿದ್ದ ಗ್ಯಾರಿ ಕಸ್ಟರ್ನ್​ ಈ ಹಿಂದೆ ಐಪಿಎಲ್​ನಲ್ಲೂ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. ಆದರೆ ಭಾರತ ತಂಡದಲ್ಲಿ ಕಂಡಿದ್ದ ಯಶಸ್ಸು ಐಪಿಎಲ್​ ಟೂರ್ನಿಯಲ್ಲಿ ಮೂಡಿಬಂದಿರಲಿಲ್ಲ ಎಂಬುದು ವಿಶೇಷ. ಏಕೆಂದರೆ ಐಪಿಎಲ್​ 2015 ಮತ್ತು 2016 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಕೋಚ್​ ಆಗಿ ಕರ್ಸ್ಟನ್ ಕಾರ್ಯ ನಿರ್ವಹಿಸಿದ್ದರು. ಈ ವೇಳೆ ಡೆಲ್ಲಿ ತಂಡವು 28 ಪಂದ್ಯಗಳಲ್ಲಿ ಗೆದ್ದಿದ್ದು ಕೇವಲ 8 ಪಂದ್ಯಗಳಲ್ಲಿ ಮಾತ್ರ.

ಇದಾದ ಬಳಿಕ 1 ವರ್ಷ ಐಪಿಎಲ್​ನಿಂದ ಹೊರಗುಳಿದಿದ್ದ ಗ್ಯಾರಿ ಕಸ್ಟರ್ನ್​ ಆನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕೋಚ್ ಆಗಿ ಮರಳಿದ್ದರು. 2 ವರ್ಷಗಳ ಕಾಲ ಆರ್​ಸಿಬಿ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ ಅವಧಿಯಲ್ಲಿ ಆರ್​ಸಿಬಿ ಪ್ರದರ್ಶನ ಉತ್ತಮವಾಗಿರಲಿಲ್ಲ. ಇದೀಗ ಲಕ್ನೋ ಫ್ರಾಂಚೈಸಿ ಗ್ಯಾರಿ ಕಸ್ಟರ್ನ್​ ಅವರನ್ನು ಮತ್ತೆ ಐಪಿಎಲ್​ಗೆ ಕರೆತರಲು ಮುಂದಾಗಿದ್ದು, ಈ ಆಫರ್​ನ್ನು ಟೀಮ್ ಇಂಡಿಯಾದ ಮಾಜಿ ಕೋಚ್ ಒಪ್ಪಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

ಇದನ್ನೂ ಓದಿ: T20 World Cup 2021: ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾಗೆ ಸಿಕ್ಕ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: T20 World Cup Winners: 7 ಟಿ20 ವಿಶ್ವಕಪ್​: ಚಾಂಪಿಯನ್​ ಪಟ್ಟಕ್ಕೇರಿದ 6 ತಂಡಗಳು

ಇದನ್ನೂ ಓದಿ:  Sourav Ganguly: ದ್ರಾವಿಡ್ ಅವರ ಮಗ ಕರೆ ಮಾಡಿ ಅಪ್ಪ ತುಂಬಾ ಕಟ್ಟುನಿಟ್ಟು, ನೀವು ಅವರನ್ನು ಕರ್ಕೊಂಡು ಹೋಗಿ ಎಂದರು..!

(IPL 2022: Former Team India coach Gary Kirsten likely to join Lucknow-based IPL team)

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್