ಐಪಿಎಲ್ ಸೀಸನ್ 15 ಗಾಗಿ (IPL 2022) ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಈಗಾಗಲೇ ಆಗಮಿಸಿದ್ದಾರೆ. ಅಲ್ಲದೆ ಸೋಮವಾರ ಆರ್‌ಸಿಬಿ (RCB) ತಂಡದ ಅಭ್ಯಾಸದಲ್ಲೂ ಕಾಣಿಸಿಕೊಂಡಿದ್ದರು. ಹೀಗಾಗಿಯೇ ಮ್ಯಾಕ್ಸ್‌ವೆಲ್ ರಾಜಸ್ಥಾನ್ ರಾಯಲ್ಸ್ ವಿರುದ್ದ ಆಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಕ್ರಿಕೆಟ್ ಆಸ್ಟ್ರೇಲಿಯಾ ನಿಯಮದ ಪ್ರಕಾರ ಆಸ್ಟ್ರೇಲಿಯಾ ಆಟಗಾರರು ಏಪ್ರಿಲ್ 5 ರ ಬಳಿಕವಷ್ಟೇ ಐಪಿಎಲ್ನಲ್ಲಿ ಭಾಗವಹಿಸಬಹುದು. ಏಕೆಂದರೆ ಆಸ್ಟ್ರೇಲಿಯಾ ತಂಡವು ಪಾಕಿಸ್ತಾನದ ವಿರುದ್ದ ಸರಣಿ ಆಡುತ್ತಿದ್ದು, ಹೀಗಾಗಿ ತಂಡದಿಂದ ಹೊರಗುಳಿದಿರುವ ಕ್ರಿಕೆಟ್ ಆಸ್ಟ್ರೇಲಿಯಾ ಜೊತೆ ಒಪ್ಪಂದ ಹೊಂದಿರುವ ಆಟಗಾರರು ಪಾಕ್ ಸರಣಿ ಮುಗಿಯುವರೆಗೂ ಐಪಿಎಲ್ನಲ್ಲಿ ಭಾಗವಹಿಸುವಂತಿಲ್ಲ ಎಂದು ತಿಳಿಸಿದೆ.
ಹೀಗಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಮ್ಯಾಕ್ಸ್‌ವೆಲ್ ಆಡುವುದು ಕೂಡ ಅನುಮಾನ ಎನ್ನಲಾಗಿತ್ತು. ಏಕೆಂದರೆ ಪಾಕಿಸ್ತಾನ್ ಹಾಗೂ ಆಸ್ಟ್ರೇಲಿಯಾ ನಡುವಣ ಸರಣಿ ಏಪ್ರಿಲ್ 5 ಕ್ಕೆ ಮುಗಿಯಲಿದೆ. ಅಂದರೆ ಏಪ್ರಿಲ್ 6 ರಿಂದ ಮಾತ್ರ ಆಸ್ಟ್ರೇಲಿಯಾ ಆಟಗಾರರು ಐಪಿಎಲ್ನಲ್ಲಿ ಭಾಗವಹಿಸಬಹುದು. ಹೀಗಾಗಿ ಮ್ಯಾಕ್ಸ್‌ವೆಲ್ ಏಪ್ರಿಲ್ 5 ರಂದು ಆಡುವಂತಿಲ್ಲ. ಇದೀಗ ಗ್ಲೆನ್ ಮ್ಯಾಕ್ಸ್‌ವೆಲ್ ರಾಜಸ್ಥಾನ್ ರಾಯಲ್ಸ್ ವಿರುದ್ದ ಆಡುವುದಿಲ್ಲ ಎಂಬುದನ್ನು ಖುದ್ದು ಆರ್‌ಸಿಬಿ ಡೈರೆಕ್ಟರ್ ಮೈಕ್ ಹೆಸೆನ್ ಖಚಿತಪಡಿಸಿದ್ದಾರೆ.
ಗ್ಲೆನ್ ಮ್ಯಾಕ್ಸ್ವೆಲ್ಗೆ ರಾಜಸ್ಥಾನ್ ರಾಯಲ್ಸ್ ವಿರುದ್ದ ಆಡಲು ಸಾಧ್ಯವಾಗುವುದಿಲ್ಲ. ಏಪ್ರಿಲ್ 9 ರಂದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿಯಲಿದ್ದಾರೆ ಎಂದು ಹೆಸನ್ ಹೇಳಿದ್ದಾರೆ . ಕ್ವಾರಂಟೈನ್ ಪೂರ್ಣಗೊಳಿಸಿದ ನಂತರ ತಂಡವನ್ನು ಸೇರಿಕೊಂಡರೂ, ಕ್ರಿಕೆಟ್ ಆಸ್ಟ್ರೇಲಿಯಾದಿಂದ ತನ್ನ ಒಪ್ಪಂದದ ಆಟಗಾರರಿಗೆ ನಿಗದಿಪಡಿಸಿದ ಎನ್ಒಸಿ ಡೇಟ್ ಕಾರಣದಿಂದ ಅವರು ಆರ್ಆರ್ ವಿರುದ್ದದ ಪಂದ್ಯವನ್ನು ತಪ್ಪಿಸಿಕೊಳ್ಳಲಿದ್ದಾರೆ ಎಂದು ಹೆಸನ್ ಹೇಳಿದ್ದಾರೆ.
ಹೀಗಾಗಿ ಶನಿವಾರ ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯದ ಮೂಲಕ ಗ್ಲೆನ್ ಮ್ಯಾಕ್ಸ್‌ವೆಲ್ ಐಪಿಎಲ್ ಸೀಸನ್ 15 ಅಭಿಯಾನವನ್ನು ಆರಂಭಿಸಲಿದ್ದಾರೆ. ಅದರಂತೆ ಕೆಕೆಆರ್ ವಿರುದ್ದ ಆಡಿದ ವಿದೇಶಿ ಆಟಗಾರರೇ ಇಂದು ಕೂಡ ಆರ್‌ಸಿಬಿ ಪರ ಕಣಕ್ಕಿಳಿಯಲಿದ್ದಾರೆ.
ಕಳೆದ ಸೀಸನ್ನಲ್ಲಿ ಮ್ಯಾಕ್ಸಿ ಆರ್ಭಟ: ಕಳೆದ ಸೀಸನ್ ಗ್ಲೆನ್ ಮ್ಯಾಕ್ಸ್‌ವೆಲ್ ಭರ್ಜರಿ ಪ್ರದರ್ಶನ ನೀಡಿದ್ದರು. ಸ್ಫೋಟಕ ಬ್ಯಾಟಿಂಗ್ ಮಾಡಿದ್ದ ಮ್ಯಾಕ್ಸ್‌ವೆಲ್ 42.75ರ ಸರಾಸರಿಯಲ್ಲಿ 513 ರನ್ ಗಳಿಸಿದ್ದರು. ಈ ಬಾರಿ ಕೂಡ ಮ್ಯಾಕ್ಸಿಯಿಂದ ಆರ್‌ಸಿಬಿ ಅಂತಹ ಆಟವನ್ನೇ ನಿರೀಕ್ಷಿಸುತ್ತಿದೆ. ಇತ್ತ ಎಬಿ ಡಿವಿಲಿಯರ್ಸ್ ಅನುಪಸ್ಥಿತಿಯಲ್ಲಿ ಮುಂಬರುವ ಪಂದ್ಯಗಳಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಲಭ್ಯತೆಯು ಅನಿವಾರ್ಯ. ಹೀಗಾಗಿ ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯದ ಮೂಲಕ ಗ್ಲೆನ್ ಮ್ಯಾಕ್ಸ್‌ವೆಲ್ ಆರ್‌ಸಿಬಿ ಪರ ಆರ್ಭಟಿಸಲು ಕಣಕ್ಕಿಳಿಯಲಿದ್ದಾರೆ.
ಒಂದು ಸೋಲು-ಒಂದು ಗೆಲುವು:
ಆರ್‌ಸಿಬಿ ಈಗಾಗಲೇ ಎರಡು ಪಂದ್ಯಗಳನ್ನು ಆಡಿದೆ. ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ ಸೋಲುವ ಮೂಲಕ ಐಪಿಎಲ್ ಅಭಿಯಾನವನ್ನು ಆರಂಭಿಸಿದೆ. ಇನ್ನು 2ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ದ ಪ್ರಯಾಸದ ಗೆಲುವು ದಾಖಲಿಸಿದೆ. ಮೊದಲ ಪಂದ್ಯದಲ್ಲಿ ಬ್ಯಾಟ್ಸ್ಮನ್ಗಳು ಉತ್ತಮ ಪ್ರದರ್ಶನ ನೀಡಿದ್ದರೆ, 2ನೇ ಪಂದ್ಯದಲ್ಲಿ ಬೌಲರ್ಗಳು ಅತ್ಯುತ್ತಮ ಪ್ರದರ್ಶನ ತೋರಿಸಿದ್ದರು. ಹೀಗಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ದದ ಪಂದ್ಯದ ಮೂಲಕ ಸಾಂಘಿಕ ಪ್ರದರ್ಶನ ನೀಡುವ ಅನಿವಾರ್ಯತೆ ಆರ್‌ಸಿಬಿ ಮುಂದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.
ಇದನ್ನೂ ಓದಿ: KL Rahul: ಟಿ20 ಕ್ರಿಕೆಟ್ನಲ್ಲಿ ಮತ್ತೊಂದು ಸಾಧನೆ ಮಾಡಿದ ಕೆಎಲ್ ರಾಹುಲ್