IPL 2022: ವಿರಾಟ್ ಕೊಹ್ಲಿ ಬಗ್ಗೆ ಖಡಕ್ ಎಚ್ಚರಿಕೆ ನೀಡಿದ ಗ್ಲೆನ್ ಮ್ಯಾಕ್ಸ್​ವೆಲ್

IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

IPL 2022: ವಿರಾಟ್ ಕೊಹ್ಲಿ ಬಗ್ಗೆ ಖಡಕ್ ಎಚ್ಚರಿಕೆ ನೀಡಿದ ಗ್ಲೆನ್ ಮ್ಯಾಕ್ಸ್​ವೆಲ್
Virat Kohli- Glenn Maxwell
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 17, 2022 | 10:26 PM

ಐಪಿಎಲ್ ಸೀಸನ್​ 15 ಗಾಗಿ ಆರ್​ಸಿಬಿ ತಂಡವು ಭರ್ಜರಿ ಸಿದ್ದತೆಯಲ್ಲಿದೆ. ಈಗಾಗಲೇ ಕೆಲ ಆಟಗಾರರು ಆರ್​ಸಿಬಿ ತಂಡದ ಅಭ್ಯಾಸ ಕ್ಯಾಂಪ್​ ಅನ್ನು ಸೇರಿಕೊಂಡಿದ್ದು, ಶೀಘ್ರದಲ್ಲೇ ಸ್ಟಾರ್ ಆಟಗಾರರು ಕೂಡ ಮುಂಬೈಗೆ ಬಂದಿಳಿಯಲಿದ್ದಾರೆ. ಇತ್ತ ಆರ್​ಸಿಬಿ ತಂಡವು ಭರ್ಜರಿ ಸಿದ್ದತೆಯಲ್ಲಿರುವಾಗಲೇ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​​ವೆಲ್ ಎದುರಾಳಿಗಳಿಗೆ ಎಚ್ಚರಿಕೆ ರವಾನಿಸಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯ ವಿಷಯದಲ್ಲಿ ಎಂಬುದು ವಿಶೇಷ. ಹೌದು, ಈ ಬಾರಿ ನೀವು ಈ ಹಿಂದಿನ ವಿರಾಟ್ ಕೊಹ್ಲಿಯನ್ನು ನೋಡುವುದಿಲ್ಲ, ಯಾವುದೇ ಒತ್ತಡವಿಲ್ಲದ ಕೊಹ್ಲಿಯನ್ನು ಕಟ್ಟಿಹಾಕುವುದು ನಿಮಗೆ ದೊಡ್ಡ ಸವಾಲಾಗಲಿದೆ ಎಂದು ಮ್ಯಾಕ್ಸ್​ವೆಲ್ ಎಚ್ಚರಿಸಿದ್ದಾರೆ.

ನಾಯಕತ್ವ ತೊರೆದ ನಂತರ ವಿರಾಟ್ ಕೊಹ್ಲಿ ಈಗ ಸಂಪೂರ್ಣವಾಗಿ ಒತ್ತಡ ಮುಕ್ತರಾಗಿದ್ದಾರೆ. ಈಗ ಯಾವುದೇ ಜವಾಬ್ದಾರಿಯನ್ನು ಹೊಂದಿಲ್ಲ. ಹೀಗಾಗಿ ಈ ಬಾರಿ ವಿರಾಟ್ ಕೊಹ್ಲಿ ಎದುರಾಳಿಗಳಿಗೆ ಅಪಾಯಕಾರಿಯಾಗಿ ಪರಿಣಮಿಸಲಿದ್ದಾರೆ ಎಂದು ಗ್ಲೆನ್ ಮ್ಯಾಕ್ಸ್​ವೆಲ್ ಅಭಿಪ್ರಾಯಪಟ್ಟಿದ್ದಾರೆ.

ಹಿಂದಿನ ದಿನಗಳಲ್ಲಿ ವಿರಾಟ್ ಕೊಹ್ಲಿ ವಿರುದ್ಧ ಆಡುತ್ತಿದ್ದಾಗ, ಆತ ಕಿಚ್ಚಿನಿಂದ ಕೂಡಿದ ಪ್ರತಿಸ್ಪರ್ಧಿಯಾಗಿದ್ದನು. ನೇರ ನೇರ ಹೋರಾಟಕ್ಕೆ ಮುಂದಾಗುತ್ತಿದ್ದಂತಹ ಆಟಗಾರ. ತನ್ನನ್ನು ಆಟದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲು ಕೊಹ್ಲಿ ಪ್ರಯತ್ನಿಸುತ್ತಾನೆ. ಇದೀಗ ಮತ್ತೆ ಹಳೆಯ ವಿರಾಟ್ ಕೊಹ್ಲಿ ಮತ್ತೆ ಕಾಣಿಸಿಕೊಳ್ಳಲಿದ್ದಾರೆ ಎಂದು ಮ್ಯಾಕ್ಸ್​ವೆಲ್ ತಿಳಿಸಿದ್ದಾರೆ.

ಇದೇ ವೇಳೆ ತಮ್ಮಿಬ್ಬರ ಗೆಳೆತನದ ಬಗ್ಗೆ ಮಾತನಾಡಿದ ಮ್ಯಾಕ್ಸ್​ವೆಲ್, ನಾನು ವಿರಾಟ್ ಕೊಹ್ಲಿಯಲ್ಲಿ ಗಮನಿಸಿದ ಮತ್ತೊಂದು ಅಂಶವೆಂದರೆ ಆತ ಭಾವನಾತ್ಮಕ ಜೀವಿ. ಪ್ರತಿ ನಿರ್ಧಾರವನ್ನು ಅಳೆದು ತೂಗಿ ತೆಗೆದುಕೊಳ್ಳುತ್ತಾರೆ. ಈಗ ನಾವಿಬ್ಬರೂ ಪರಸ್ಪರ ಎಷ್ಟು ಹತ್ತಿರವಾಗಿದ್ದೇವೆ. ಪ್ರತಿಯೊಂದು ವಿಷಯದಲ್ಲೂ ವಿರಾಟ್ ಕೊಹ್ಲಿ ನನಗೆ ಆಶ್ಚರ್ಯವನ್ನುಂಟುಮಾಡಿದ್ದಾರೆ. ಏಕೆಂದರೆ ವಿರುದ್ದವಾಗಿ ಆಡುವಾಗ ಆತನ ಮುಖಭಾವ ಬೇರೆಯದ್ದೇ ರೀತಿಯಲ್ಲಿ ನೀವು ನೋಡುತ್ತೀರಿ. ಆದರೆ ಅವರೊಂದಿಗೆ ಸಮಯ ಕಳೆದಾಗ, ಮಾತುಕತೆ ನಡೆಸಿದಾಗ ಹೊಸ ವ್ಯಕ್ತಿ ಕಾಣಿಸುತ್ತಾನೆ. ಈ ಎಲ್ಲಾ ಕಾರಣಗಳಿಂದ ವಿರಾಟ್ ಕೊಹ್ಲಿ ಜೊತೆಗಿನ ಗೆಳೆತನವನ್ನು ನಾನು ಆನಂದಿಸಿದ್ದೇನೆ ಎಂದು ಗ್ಲೆನ್ ಮ್ಯಾಕ್ಸ್​ವೆಲ್ ತಿಳಿಸಿದ್ದಾರೆ.

ಇನ್ನು ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಮಾರ್ಚ್​ 27 ರಂದು ಆಡಲಿದ್ದು, ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್​ ವಿರುದ್ದ ಸೆಣಸಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಲುವ್ನಿತ್ ಸಿಸೋಡಿಯಾ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.

ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ