IPL 2022: ಗ್ರೀನ್ ಜೆರ್ಸಿ RCB ಪಾಲಿಗೆ ಅನ್​ಲಕ್ಕಿ, ಯಾಕೆ ಗೊತ್ತಾ?

IPL 2022: RCB ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್

IPL 2022: ಗ್ರೀನ್ ಜೆರ್ಸಿ RCB ಪಾಲಿಗೆ ಅನ್​ಲಕ್ಕಿ, ಯಾಕೆ ಗೊತ್ತಾ?
RCB
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 07, 2022 | 3:11 PM

IPL 2022: ಐಪಿಎಲ್​ನ 54ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಎಸ್​ಆರ್​ಹೆಚ್ (RCB vs SRH)​ ತಂಡಗಳು ಸೆಣಸಲಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ. ಇತ್ತ ಆರ್​ಸಿಬಿ ತಂಡವು ಹಸಿರು ಉಡುಪಿನಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೀಗ ಅಭಿಮಾನಿಗಳ ಚಿಂತೆಗೆ ಕಾರಣವಾಗಿದೆ. ಏಕೆಂದರೆ ಆರ್​ಸಿಬಿಗೆ ಮುಂದಿನ ಮೂರು ಪಂದ್ಯಗಳು ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ 18 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇದೀಗ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಕಣಕ್ಕಿಳಿಯುತ್ತಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

ಏಕೆಂದರೆ ಆರ್​ಸಿಬಿ ಪಾಲಿಗೆ ಗ್ರೀನ್ ಜೆರ್ಸಿ ಅದೃಷ್ಟವಲ್ಲ ಎಂಬ ಮಾತಿದೆ. ಇದಕ್ಕೆ ಮುಖ್ಯ ಕಾರಣ ವಿಶೇಷ ಜೆರ್ಸಿಯಲ್ಲಿ ಆರ್​ಸಿಬಿ ಕಣಕ್ಕಿಳಿದಾಗ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಅಂದರೆ 2011 ರಿಂದ ಆರ್​ಸಿಬಿ ತಂಡವು ಗ್ರೀನ್ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತಿದೆ. ಇದುವರೆಗೆ ಆರ್​ಸಿಬಿ ತಂಡವು 10 ಪಂದ್ಯಗಳನ್ನಾಡಿದ್ದು, ಈ ವೇಳೆ ಬಾರಿ ಗೆದ್ದಿದೆ. ಇನ್ನು ಏಳು ಪಂದ್ಯಗಳಲ್ಲಿ ಸೋತಿದೆ. ಇನ್ನು ಒಂದು ಪಂದ್ಯದಲ್ಲಿ ಫಲಿತಾಂಶ ಮೂಡಿಬಂದಿರಲಿಲ್ಲ.

ಆರ್​ಸಿಬಿ ತಂಡದ ಹಸಿರು ಜೆರ್ಸಿ ಪಂದ್ಯಗಳ ಫಲಿತಾಂಶಗಳು ಹೀಗಿವೆ:

2011 – ಗೆಲುವು

2012 – ಸೋಲು

2013 – ಸೋಲು

2014 – ಸೋಲು

2015 – ಫಲಿತಾಂಶವಿಲ್ಲ

2016 – ಗೆಲುವು

2017 – ಸೋಲು

2018 – ಸೋಲು

2019 – ಸೋಲು

2020 – ಸೋಲು

2021 – (ನೀಲಿ ಜೆರ್ಸಿ) ಸೋಲು

ಅಂದರೆ ಆರ್​ಸಿಬಿ ತಂಡವು ವಿಶೇಷ ಜೆರ್ಸಿಯಲ್ಲಿ ಕಣಕ್ಕಿಳಿದ ಕಳೆದ 5 ಪಂದ್ಯಗಳಲ್ಲೂ ಸೋತಿದೆ. ಹೀಗಾಗಿಯೇ ಗ್ರೀನ್ ಜೆರ್ಸಿ ಆರ್​ಸಿಬಿ ಪಾಲಿಗೆ ಅದೃಷ್ಟವಲ್ಲ ಎಂಬ ಮಾತಿದೆ. ಇದಾಗ್ಯೂ ಈ ಬಾರಿ ಆರ್​ಸಿಬಿ ಫಾಫ್ ಡುಪ್ಲೆಸಿಸ್​ ನಾಯಕತ್ವದಲ್ಲಿ ಆಡುತ್ತಿದ್ದು, ಹೀಗಾಗಿ ಸೋಲಿನ ಸರಪಳಿಯಿಂದ ಆರ್​ಸಿಬಿ ಹೊರಬರಲಿದೆಯಾ ಕಾದು ನೋಡಬೇಕಿದೆ.

RCB ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಜಮೀನ್ದಾರರು, ಗ್ರಾಮಸ್ಥರ ಆಕ್ರೋಶ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಜಮೀನ್ದಾರರು, ಗ್ರಾಮಸ್ಥರ ಆಕ್ರೋಶ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್