IPL 2022: ಗುಜರಾತ್ ಟೈಟನ್ಸ್ ಏನನ್ನೂ ಸಾಬೀತುಪಡಿಸಲು ಬಂದಿಲ್ಲ: ಪಾಂಡ್ಯ ಖಡಕ್ ಮಾತು

IPL 2022 Gujarat Titans: ಈ ಸೀಸನ್​ನಲ್ಲಿ ಗುಜರಾತ್ ಟೈಟನ್ಸ್ ಮತ್ತು ಹಾರ್ದಿಕ್ ನಾಯಕನಾಗಿ ಸಾಬೀತುಪಡಿಸಲು ವಿಶೇಷವಾದ ಏನನ್ನೂ ಹೊಂದಿಲ್ಲದಿರಬಹುದು, ಆದರೆ ವೈಯಕ್ತಿಕವಾಗಿ ಭಾರತೀಯ ಆಲ್‌ರೌಂಡರ್​ಗೆ ಅಗ್ನಿಪರೀಕ್ಷೆಯಾಗಿರಲಿದೆ ಈ ಟೂರ್ನಿ.

IPL 2022: ಗುಜರಾತ್ ಟೈಟನ್ಸ್ ಏನನ್ನೂ ಸಾಬೀತುಪಡಿಸಲು ಬಂದಿಲ್ಲ: ಪಾಂಡ್ಯ ಖಡಕ್ ಮಾತು
Hardik Pandya
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 19, 2022 | 3:33 PM

ಇಂಡಿಯನ್ ಪ್ರೀಮಿಯರ್ ಲೀಗ್ 2022 ಸೀಸನ್‌ನಲ್ಲಿ (IPL 2022) ಹಲವು ಹೊಸತನಗಳಿಗೆ ಸಾಕ್ಷಿಯಾಗಲಿದೆ. ಹೊಸ ತಂಡಗಳು, ಹೊಸ ಸ್ವರೂಪ, ಹೊಸ ನಾಯಕರು ಮತ್ತು ಹೊಸ ಮುಖಗಳು ಹೀಗೆ ಈ ಬಾರಿ ಐಪಿಎಲ್​ನಲ್ಲಿ ಹೊಸ ರಂಗ ಕಾಣಿಸಿಕೊಳ್ಳಲಿದೆ. ಇದಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಹೊಸ ಸೀಸನ್​ ಆರಂಭಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಮತ್ತೊಂದೆಡೆ ಹೊಸ ತಂಡದೊಂದಿಗೆ ನೂತನ ನಾಯಕನಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ. ಪಾಂಡ್ಯ ಕಳೆದ 7 ವರ್ಷಗಳಿಂದ ಐಪಿಎಲ್‌ನ ಭಾಗವಾಗಿದ್ದರು. ಆದರೆ ಇದೇ ಮೊದಲ ಬಾರಿ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇದೇ ಕಾರಣದಿಂದಾಗಿ ಈ ಬಾರಿ ಗುಜರಾತ್ ಟೈಟನ್ಸ್​ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಹಾರ್ದಿಕ್ ಪಾಂಡ್ಯ ಹೇಗೆ ತಂಡವನ್ನು ಮುನ್ನಡೆಸಲಿದ್ದಾರೆ ಎಂಬ ಕುತೂಹಲ ಏರ್ಪಟ್ಟಿದೆ. ಆದರೆ ಈ ಬಗ್ಗೆ ಹಾರ್ದಿಕ್ ಪಾಂಡ್ಯ ಮಾತ್ರ ತಲೆ ಕೆಡಿಸಿಕೊಂಡಿಲ್ಲ, ಯಾರಿಗೂ ಏನನ್ನೂ ಸಾಬೀತುಪಡಿಸಲು ತಮ್ಮ ತಂಡ ಇಲ್ಲಿಗೆ ಬಂದಿಲ್ಲ ಎಂದು ನೇರವಾಗಿಯೇ ಪಾಂಡ್ಯ ಹೇಳಿದ್ದಾರೆ.

ಕಳೆದ ವರ್ಷ ಬಿಸಿಸಿಐ ಆಯೋಜಿಸಿದ್ದ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ಅನ್ನು ಸಿವಿಸಿ ಕ್ಯಾಪಿಟಲ್ಸ್ ಖರೀದಿಸಿತ್ತು. ಇದೀಗ ಗುಜರಾತ್ ತಂಡವು ಚೊಚ್ಚಲ ಐಪಿಎಲ್ ಸೀಸನ್​ ಆಡಲು ಸಜ್ಜಾಗಿದೆ. ಗುಜರಾತ್ ಟೈಟನ್ಸ್ ಹೊರತುಪಡಿಸಿ, ಲಕ್ನೋ ಸೂಪರ್ ಜೈಂಟ್ಸ್ ಕೂಡ ಹೊಸ ತಂಡವಾಗಿದೆ, ಎಲ್​ಎಸ್​ಜಿ ತಂಡದ ನಾಯಕರಾಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಅವರು ಈಗಾಗಲೇ ಎರಡು ವರ್ಷಗಳ ಕಾಲ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದಾರೆ. ಹೀಗಾಗಿ ರಾಹುಲ್ ನಾಯಕತ್ವಕ್ಕಿಂತ ಹಾರ್ದಿಕ್ ಪಾಂಡ್ಯ ಅವರ ಕ್ಯಾಪ್ಟನ್ಸಿ ಹೇಗಿರಲಿದೆ ಎಂಬುದು ಚರ್ಚಾ ವಿಷಯವಾಗಿದೆ.

ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ ಎಂದ ಪಾಂಡ್ಯ: ಹಾರ್ದಿಕ್ ಪಾಂಡ್ಯ ಕ್ಯಾಪ್ಟನ್ಸಿ ಬಗ್ಗೆಯಾಗಲಿ, ಜನರ ನಿರೀಕ್ಷೆಯ ಬಗ್ಗೆಯಾಗಲಿ ತಲೆನೇ ಕೆಡಿಸಿಕೊಂಡಿಲ್ವಂತೆ. ಉತ್ತಮ ಕ್ರಿಕೆಟ್ ಆಡುವುದೇ ನಮ್ಮ ತಂಡದ ಗುರಿಯೇ ಹೊರತು, ಯಾರಿಗೂ ಏನನ್ನೂ ಸಾಬೀತುಪಡಿಸುವುದಕ್ಕೆ ನಾವು ಕ್ರಿಕೆಟ್ ಆಡ್ತಿಲ್ಲ ಎಂದು ಪಾಂಡ್ಯ ತಿಳಿಸಿದ್ದಾರೆ.

“ತಂಡದ ಬಗ್ಗೆ ನನಗೆ ತುಂಬಾ ಸಂತೋಷವಾಗಿದೆ. ಇದು ಹೊಸ ತಂಡವಾಗಿದ್ದು, ನಾವು ಯಾರಿಗೂ ಏನನ್ನೂ ಸಾಬೀತುಪಡಿಸಬೇಕಿಲ್ಲ. ಉತ್ತಮ ಕ್ರಿಕೆಟ್ ಆಡಲು ಇಲ್ಲಿಗೆ ಬಂದಿದ್ದೇವೆ. ತಂಡದ ಹೊಂದಾಣಿಕೆ ಉತ್ತಮವಾಗಿದೆ ಮತ್ತು ಆಟಗಾರರು ತಮ್ಮ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸಲು ಉತ್ತಮ ವಾತಾವರಣವಿದೆ ಎಂದು ಖಚಿತಪಡಿಸಿಕೊಳ್ಳಲು ನಾವು ಬಯಸುತ್ತೇವೆ. ನಮಗೆ ಯಾವುದೇ ರೀತಿಯ ನಿರೀಕ್ಷೆಗಳಿಲ್ಲ. ನಾವು ಸುಧಾರಿಸುವ ತಂಡವಾಗುತ್ತೇವೆ ಎಂದು ಪಾಂಡ್ಯ ತಿಳಿಸಿದ್ದಾರೆ.

ಪಾಂಡ್ಯಗೆ ಅಗ್ನಿ ಪರೀಕ್ಷೆ: ಈ ಸೀಸನ್​ನಲ್ಲಿ ಗುಜರಾತ್ ಟೈಟನ್ಸ್ ಮತ್ತು ಹಾರ್ದಿಕ್ ನಾಯಕನಾಗಿ ಸಾಬೀತುಪಡಿಸಲು ವಿಶೇಷವಾದ ಏನನ್ನೂ ಹೊಂದಿಲ್ಲದಿರಬಹುದು, ಆದರೆ ವೈಯಕ್ತಿಕವಾಗಿ ಭಾರತೀಯ ಆಲ್‌ರೌಂಡರ್​ಗೆ ಅಗ್ನಿಪರೀಕ್ಷೆಯಾಗಿರಲಿದೆ ಈ ಟೂರ್ನಿ. ಏಕೆಂದರೆ ತಮ್ಮ ಫಿಟ್‌ನೆಸ್‌ನಿಂದಾಗಿ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಹಾರ್ದಿಕ್‌ ಪಾಂಡ್ಯ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಬೇಕಾದ್ರೆ ಐಪಿಎಲ್ 2022 ರಲ್ಲಿ ಮಿಂಚಲೇಬೇಕು. ಅದರಲ್ಲೂ ಬೌಲಿಂಗ್ ವಿಷಯದಲ್ಲಿ ಫಿಟ್ನೆಸ್ ಅವರಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಹೀಗಾಗಿ ಈ ಬಾರಿಯ ಐಪಿಎಲ್​ ಹಾರ್ದಿಕ್ ಪಾಂಡ್ಯ ಅವರ ಟೀಮ್ ಇಂಡಿಯಾ ಕಂಬ್ಯಾಕ್ ಅನ್ನು ನಿರ್ಧರಿಸಲಿದೆ.

ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಹಮಾನುಲ್ಲಾ ಗುರ್ಬಾಜ್, ವೃದ್ಧಿಮಾನ್ ಸಹಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ಡೊಮಿನಿಕ್ ಡ್ರೇಕ್ಸ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಯಶ್ ದಯಾಳ್, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ಗುರುಕೀರತ್ ಸಿಂಗ್, ಬಿ ಸಾಯಿ ಸುದರ್ಶನ್.

ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(IPL 2022: Gujarat Titans are not here to prove anything to anyone, says captain Hardik Pandya)

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ