AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashid Khan: ರಶೀದ್ ಖಾನ್ ಫ್ಲೈಯಿಂಗ್ ಕಿಸ್ ಕೊಟ್ಟಿದ್ದು ಯಾರಿಗೆ? ವೈರಲ್ ಆಯ್ತು ವಿಡಿಯೋ

Hardik Pandya | Agastya: ಗುಜರಾತ್ ಟೈಟಾನ್ಸ್ ಉಪನಾಯಕ ರಶೀದ್ ಖಾನ್ ಈ ಬಾರಿಯ ಐಪಿಎಲ್​ನಲ್ಲಿ ಬೌಲಿಂಗ್​ಗಿಂತ ಬ್ಯಾಟಿಂಗ್ ಮೂಲಕವೇ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಇದೀಗ ಅವರು ಫ್ಲೈಯಿಂಗ್ ಕಿಸ್ ನೀಡಿರುವ ವಿಡಿಯೋವೊಂದು ವೈರಲ್ ಆಗಿದೆ.

Rashid Khan: ರಶೀದ್ ಖಾನ್ ಫ್ಲೈಯಿಂಗ್ ಕಿಸ್ ಕೊಟ್ಟಿದ್ದು ಯಾರಿಗೆ? ವೈರಲ್ ಆಯ್ತು ವಿಡಿಯೋ
ರಶೀದ್ ಖಾನ್
TV9 Web
| Updated By: shivaprasad.hs|

Updated on: May 05, 2022 | 11:38 AM

Share

ಈ ಬಾರಿಯ ಐಪಿಎಲ್​ನಲ್ಲಿ (IPL 2022) ಚೊಚ್ಚಲ ಸೀಸನ್​ ಆಡುತ್ತಿರುವ ಎರಡು ಹೊಸ ತಂಡಗಳೇ ಪ್ರಾಬಲ್ಯ ಸಾಧಿಸಿವೆ. ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಅವುಗಳೇ ಇದ್ದು, ಪ್ರಶಸ್ತಿ ರೇಸ್​ನಲ್ಲಿ ಮುಂಚೂಣಿಯಲ್ಲಿವೆ. ಹರಾಜು ಪೂರ್ಣಗೊಂಡಾಗ ಗುಜರಾತ್ ಟೈಟಾನ್ಸ್ (Gujarat Titans) ತಂಡವನ್ನು ಸಾಧಾರಣ ತಂಡವಾಗಿ ಪರಿಗಣಿಸಿದ್ದೇ ಹೆಚ್ಚು. ಆದರೆ ಮೈದಾನದಲ್ಲಿ ಐಪಿಎಲ್ ಇತಿಹಾಸದ ಪ್ರಬಲ ತಂಡಗಳಿಗೆ ಗುಜರಾತ್ ಸೋಲುಣಿಸಿದೆ. ಅಲ್ಲದೇ ಸಾಂಘಿಕ ಪ್ರದರ್ಶನದ ಮೂಲಕ ಗೆಲುವನ್ನು ಕಾಣುತ್ತಿರುವುದು ಉಳಿದೆಲ್ಲಾ ತಂಡಗಳಿಗಿಂತ ಆ ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಗುಜರಾತ್ ಗೆಲುವುಗಳಲ್ಲಿ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಹಾಗೂ ಉಪನಾಯಕ ರಶೀದ್ ಖಾನ್ (Rashid Khan) ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಬೌಲಿಂಗ್​ಗಿಂತ ಬ್ಯಾಟಿಂಗ್ ಮೂಲಕವೇ ಹೆಚ್ಚು ಸುದ್ದಿಯಾಗುತ್ತಿದ್ದಾರೆ ಅಫ್ಘನ್ ಮೂಲದ ಸ್ಪಿನ್ನರ್ ರಶೀದ್. ಇದೀಗ ಅವರು ಫ್ಲೈಯಿಂಗ್ ಕಿಸ್ ನೀಡಿರುವ ವಿಡಿಯೋವೊಂದು ವೈರಲ್ ಆಗಿದೆ.

ಗುಜರಾತ್ ಟೈಟಾನ್ಸ್​​ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ರಶೀದ್ ಖಾನ್ ಫ್ಲೈಯಿಂಗ್ ಕಿಸ್ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ವಿಶೇಷವಾಗಿದ್ದು, ಎಲ್ಲರ ಗಮನಸೆಳೆದಿದೆ. ವಿಡಿಯೋದಲ್ಲಿ ಹಾರ್ದಿಕ್ ಪಾಂಡ್ಯ ತಮ್ಮ ಪುತ್ರ ಅಗಸ್ತ್ಯನನ್ನು ಕರೆದುಕೊಂಡಿದ್ದಾರೆ. ಅಗಸ್ತ್ಯನನ್ನು ಮುದ್ದಾಗಿ ಮಾತನಾಡಿಸುತ್ತಿರುವ ರಶೀದ್ ಖಾನ್, ಫ್ಲೈಯಿಂಗ್ ಕಿಸ್ ನೀಡಿದ್ದಾರೆ. ಇದಕ್ಕೆ ಅಗಸ್ತ್ಯ ಕೂಡ ಅದೇ ರೀತಿ ಮುದ್ದುಮುದ್ದಾಗಿ ಪ್ರತಿಕ್ರಿಯಿಸಿದ್ದಾನೆ. ಇದು ಎಲ್ಲರ ಮುಖದಲ್ಲಿ ನಗು ಮೂಡಿಸಿದೆ.

ಇದನ್ನೂ ಓದಿ
Image
IPL 2022: ಆರೆಂಜ್ ಕ್ಯಾಪ್ ಬಟ್ಲರ್ ಬಳಿ ಭದ್ರ; ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಇರೋರು ಯಾರೆಲ್ಲಾ?
Image
‘ಪ್ರಶಾಂತ್​ ನೀಲ್​ ಅವರಿಂದ ಭಾರತೀಯ ಚಿತ್ರರಂಗಕ್ಕೆ ನೂರಾರು ಕೋಟಿ ರೂ. ನಷ್ಟ’: ವಿವರ ನೀಡಿದ ಆರ್​ಜಿವಿ
Image
ಬೆಂಗಳೂರು- ಚೆನ್ನೈ ಪಂದ್ಯದ ವೇಳೆ ವಿಶೇಷ ಕ್ಷಣ; ಆರ್​ಸಿಬಿ ಜೆರ್ಸಿ ತೊಟ್ಟ ಗೆಳೆಯನಿಗೆ ಪ್ರೇಮ ನಿವೇದನೆ ಮಾಡಿದ ಯುವತಿ- ವಿಡಿಯೋ ಇಲ್ಲಿದೆ
Image
‘ಬೀಸ್ಟ್​’ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್​ ಸಿನಿಮಾದಲ್ಲಿ ಶಿವರಾಜ್​ಕುಮಾರ್​-ರಜನಿಕಾಂತ್​ ನಟನೆ?

ಗುಜರಾತ್ ಟೈಟಾನ್ಸ್ ವಿಡಿಯೋ ಹಂಚಿಕೊಂಡಿದ್ದು, ‘‘ಕೇವಲ ಮೂರೇ ಪದಗಳು, ಅತ್ಯಂತ ಮುದ್ದಾದ ವಿಡಿಯೋವಿದು’’ ಎಂದು ಕ್ಯಾಪ್ಶನ್ ನೀಡಿದೆ. ಸದ್ಯ ಈ ವಿಡಿಯೋ ಅಭಿಮಾನಿಗಳ ಮನಗೆದ್ದಿದ್ದು, ನಾನಾ ವಿಧವಾಗಿ ಕಾಮೆಂಟ್ ಮಾಡುತ್ತಿದ್ದಾರೆ.

ಗುಜರಾತ್ ಟೈಟಾನ್ಸ್ ಹಂಚಿಕೊಂಡ ವಿಡಿಯೋ ಇಲ್ಲಿದೆ:

ಗುಜರಾತ್ ಟೈಟಾನ್ಸ್ ತಂಡ ಸದ್ಯ ಆಡಿರುವ 10 ಪಂದ್ಯಗಳಲ್ಲಿ 8 ಗೆಲುವು ಸಾಧಿಸಿದ್ದು, 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಮೇ 6ರಂದು ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈ ತಂಡವನ್ನು ಗುಜರಾತ್ ಎದುರಿಸಲಿದೆ. ಗುಜರಾತ್ ತನ್ನ ಕೊನೆಯ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಶರಣಾಗಿತ್ತು.

ಮೇ 10ರಂದು ಗುಜರಾತ್ ಟೈಟಾನ್ಸ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಮೇ 15ರಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದ್ದು, ಮೇ 19ರ ಗುರುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಮುಂದಿನ ಪಂದ್ಯಗಳನ್ನು ಗೆದ್ದು ಅಗ್ರ ಸ್ಥಾನದಲ್ಲಿ ಲೀಗ್ ಹಂತ ಮುಕ್ತಾಯಗೊಳಿಸುವ ಯೋಚನೆಯಲ್ಲಿದೆ ಗುಜರಾತ್. ಆದರೆ ಗುಜರಾತ್ ಎದುರಿಸಲಿರುವ ಎಲ್ಲಾ ತಂಡಗಳು ಪ್ಲೇ ಆಫ್ ಪ್ರವೇಶಿಸಬೇಕಾದರೆ ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿವೆ. ಹೀಗಾಗಿ ಐಪಿಎಲ್​ನಲ್ಲಿ ದಿನದಿಂದ ದಿನಕ್ಕೆ ಪೈಪೋಟಿ ಕಾವೇರುತ್ತಿದೆ.

ಕ್ರೀಡಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ