IPL 2022: ಎಲ್ಲರಂಥಲ್ಲ ನಾನು, ನಾಯಕನಾಗಿ ಹಾರ್ದಿಕ್ ಪಾಂಡ್ಯ ಮಹತ್ವದ ನಿರ್ಧಾರ..!

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ(ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಶಮಿ

IPL 2022: ಎಲ್ಲರಂಥಲ್ಲ ನಾನು, ನಾಯಕನಾಗಿ ಹಾರ್ದಿಕ್ ಪಾಂಡ್ಯ ಮಹತ್ವದ ನಿರ್ಧಾರ..!
Hardik Pandya
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 23, 2022 | 4:33 PM

IPL 2022: ಐಪಿಎಲ್ ಸೀಸನ್ 15 ನಲ್ಲಿ 34 ಪಂದ್ಯಗಳು ಮುಗಿದಿವೆ. ಇದೀಗ 35ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (GT vs KKR) ತಂಡಗಳು ಮುಖಾಮುಖಿಯಾಗಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇದರೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪಾಂಡ್ಯ ಪಾತ್ರರಾಗಿದ್ದಾರೆ. ಅಂದರೆ ಕಳೆದ 34 ಪಂದ್ಯಗಳಲ್ಲಿ ಯಾವುದೇ ನಾಯಕ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿರಲಿಲ್ಲ. ಎಲ್ಲಾ ಪಂದ್ಯಗಳಲ್ಲೂ ಟಾಸ್ ಗೆದ್ದ ಕ್ಯಾಪ್ಟನ್​ಗಳು ಮೊದಲು ಬೌಲಿಂಗ್ ಮಾಡಿದ್ದರು.

ಇದೀಗ ಐಪಿಎಲ್​ನ 35ನೇ ಪಂದ್ಯದಲ್ಲಿ ನಾಯಕನೊಬ್ಬ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ. ಈ ಮೂಲಕ ಹಾರ್ದಿಕ್ ಪಾಂಡ್ಯ ಈ ಬಾರಿಯ ಐಪಿಎಲ್​ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಮೊದಲ ನಾಯಕ ಎನಿಸಿಕೊಂಡಿದ್ದಾರೆ. ಜೊತೆಗೆ ಈ ಬಾರಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ತಂಡ ಎಂಬ ಹೆಗ್ಗಳಿಕೆಗೂ ಗುಜರಾತ್ ಟೈಟನ್ಸ್ ಪಾಲಾಗಿದೆ.

ಇನ್ನು ಈ ಪಂದ್ಯವು ಮಧ್ಯಾಹ್ನ 3.30 ಕ್ಕೆ ಶುರುವಾಗಿರುವ ಕಾರಣ ಪಾಂಡ್ಯ ಮೊದಲು ಬ್ಯಾಟಿಂಗ್​ ಆಯ್ದುಕೊಂಡಿದ್ದಾರೆ. ಏಕೆಂದರೆ ಪಿಚ್ ಮೇಲ್ಮೈ ಫುಲ್ ಡ್ರೈ ಆಗಿದ್ದು, ಇದರಿಂದ ಬ್ಯಾಟಿಂಗ್​ಗೆ ಹೆಚ್ಚಿನ ಅನುಕೂಲವಾಗುವ ನಿರೀಕ್ಷೆಯಲ್ಲಿದ್ದಾರೆ ಪಾಂಡ್ಯ. ಅಲ್ಲದೆ ಉರಿಬಿಸಿಲಿನಲ್ಲಿ ಬೌಲಿಂಗ್ ಮಾಡುವುದರಿಂದ ಆಟಗಾರರು ಆಯಾಸಗೊಳ್ಳುತ್ತಾರೆ. ಹೀಗಾಗಿ ಗುಜರಾತ್ ಟೈಟನ್ಸ್ ಹೊಸ ಪ್ಲ್ಯಾನ್​ನೊಂದಿಗೆ ಕಣಕ್ಕಿಳಿದಿದೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್:

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ರಿಂಕು ಸಿಂಗ್, ಆಂಡ್ರೆ ರಸೆಲ್, ಟಿಮ್ ಸೌಥಿ, ಶಿವಂ ಮಾವಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ(ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಶಮಿ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು