IPL 2022 Points Table: ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ ರಾಹುಲ್ ಪಡೆ: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ?

| Updated By: Vinay Bhat

Updated on: Apr 08, 2022 | 9:14 AM

IPL 2022 Orange and Purple Cap List: ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

IPL 2022 Points Table: ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ ರಾಹುಲ್ ಪಡೆ: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ?
IPL 2022 Points Table
Follow us on

15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) ಟೂರ್ನಿ ದಿನದಿಂದ ದಿನಕ್ಕೆ ರೋಚಕತೆ ಪಡೆಯುತ್ತಿದೆ. ಹಿಂದಿನ ಸೀಸನ್​ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಈ ಬಾರಿ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಗೆಲುವಿಗಾಗಿ ಹಾತೊರೆಯುತ್ತಿದೆ. ಕಳೆದ ಬಾರಿಯ ವಿನ್ನರ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮಾಜಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಆಡಿದ ಮೂರೂ ಪಂದ್ಯಗಳಲ್ಲಿ ಸೋಲುಂಡು ಕಟ್ಟ ದಾಖಲೆ ಬರೆದಿದೆ. ಎರಡು ಹೊಸ ತಂಡಗಳಾದ ಲಖನೌ ಸೂಪರ್ ಜೇಂಟ್ಸ್ ಮತ್ತು ಗುಜರಾತ್ ಟೈಟನ್ಸ್ ಟೀಮ್ ಕೂಡ ನಿರೀಕ್ಷೆಗೆ ತಕ್ಕ ಆಟವಾಡುತ್ತಿದೆ. ಲೀಗ್ ಪಂದ್ಯಗಳು ಮುಕ್ತಾಯಗೊಂಡ ಬಳಿಕ ಪಾಯಿಂಟ್ ಪಟ್ಟಿಯಲ್ಲಿರುವ ಮೊದಲ ನಾಲ್ಕು ತಂಡಗಳು ಟೂರ್ನಿಯ ಪ್ಲೇ-ಆಫ್‌ನಲ್ಲಿ ಆಡುವ ಅವಕಾಶವನ್ನು ಪಡೆಯುತ್ತವೆ. ಅದರ ನಂತರ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯ ಇರುತ್ತದೆ. ವಿಜೇತ ತಂಡವು ಪ್ರತಿ ಪಂದ್ಯದಲ್ಲಿ 2 ಅಂಕಗಳನ್ನು ಪಡೆಯುತ್ತದೆ. ಇದರ ಜೊತೆಗೆ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

ಪಾಯಿಂಟ್ ಟೇಬಲ್:

  • ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮೊದಲ ಸ್ಥಾನದಲ್ಲಿ ಭದ್ರವಾಗಿದೆ. ಆಡಿದ ನಾಲ್ಕು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು, ಒಂದರಲ್ಲಿ ಸೋಲು ಕಂಡು ಒಟ್ಟು 6 ಅಂಕದೊಂದಿಗೆ +1.102 ರನ್​​ರೇಟ್​ನೊಂದಿಗೆ ಟಾಪ್​ನಲ್ಲಿದೆ.
  • ಐದನೇ ಸ್ಥಾನದಲ್ಲಿ ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ತಂಡ ಎರಡನೇ ಸ್ಥಾನಕ್ಕೆ ಜಿಗಿದಿದೆ. ಒಟ್ಟು 6 ಅಂಕದೊಂದಿಗೆ ಲಖನೌದ ನಿವ್ವಳ ರನ್ ರೇಟ್ -0.256.
  • ಎರಡನೇ ಸ್ಥಾನದಲ್ಲಿದ್ದ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಇದೀಗ ಮೂರನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಮೂರು ಪಂದ್ಯಗಳ ಪೈಕಿ ಎರಡರಲ್ಲೂ ಗೆಲುವು ಸಾಧಿಸಿ ಒಟ್ಟು 4 ಅಂಕದೊಂದಿಗೆ +1.218 ರನ್​​ರೇಟ್​ನೊಂದಿಗೆ ಎರಡನೇ ಸ್ಥಾನದಲ್ಲಿದೆ.
  • ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಆಡಿದ ಎರಡು ಪಂದ್ಯದಲ್ಲಿ ಎರಡರಲ್ಲೂ ಗೆದ್ದು ಬೀಗಿದೆ. ಗುಜರಾತ್ ನಿವ್ವಳ ರನ್ ರೇಟ್ +0.495.
  • ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಐದನೇನೇ ಸ್ಥಾನದಲ್ಲಿದೆ. ಪಂಜಾಬ್ ನಿವ್ವಳ ರನ್ ರೇಟ್ 0.238 ಆಗಿದೆ.
  • ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಳನೇ ಸ್ಥಾನದಲ್ಲಿದೆ. ನಾಲ್ಕು ಅಂಕದೊಂದಿಗೆ RCB ನಿವ್ವಳ ರನ್ ರೇಟ್ 0.159.
  • ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಎಂಟನೇ ಸ್ಥಾನಕ್ಕೆ ಕುಸಿದಿದೆ. ಡೆಲ್ಲಿಯ ನಿವ್ವಳ ರನ್ ರೇಟ್ -0.116 ಆಗಿದೆ.
  • ಇತ್ತ ಆಡಿದ ಮೂರೂ ಪಂದ್ಯಗಳಲ್ಲಿ ಸೋಲು ಕಂಡು ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ -1.251 ರನ್​ರೇಟ್​​ನೊಂದಿಗೆ ಎಂಟನೇ ಸ್ಥಾನದಲ್ಲಿದೆ.
  • ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ ಮೂರೂ ಪಂದ್ಯದಲ್ಲಿ ಸೋಲುಂಡಿದೆ. ಮುಂಬೈ ನಿವ್ವಳ ರನ್ ರೇಟ್ -1.362.
  • ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ಸದ್ಯಕ್ಕೆ ಲೀಗ್ ಟೇಬಲ್‌ನಲ್ಲಿ ಕೊನೆಯ ಸ್ಥಾನದಲ್ಲಿದೆ. ಆಡಿದ ಎರಡೂ ಪಂದ್ಯದಲ್ಲಿ ಸೋಲುಂಡಿರುವ ಹೈದರಾಬಾದ್ ನಿವ್ವಳ ರನ್ ರೇಟ್ – 1.825.

ಆರೆಂಜ್ ಕ್ಯಾಪ್:

ಅತಿ ಹೆಚ್ಚು ರನ್ ಗಳಿಸಿದವರ ಮೊದಲ ಸ್ಥಾನದಲ್ಲಿ ಆರ್​ ಆರ್​ ತಂಡದ ಜೋಸ್ ಬಟ್ಲರ್ ಇದ್ದು ಇವರು ಮೂರು ಪಂದ್ಯಗಳಿಂದ 205 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಕೆಳ ಕ್ರಮಾಂಕದಲ್ಲಿದ್ದ ಲಖನೌ ತಂಡದ ಕ್ವಿಂಟನ್ ಡಿಕಾಕ್ ದಿಢೀರ್ ಎರಡನೇ ಸ್ಥಾನಕ್ಕೇರಿದ್ದು 149 ರನ್ ಸಿಡಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್ ಬ್ಯಾಟರ್ ಇಶಾನ್ ಕಿಶನ್ ಇದ್ದು ಇವರು ಕೂಡ ಒಟ್ಟು 149 ರನ್ ಬಾರಿಸಿದ್ದಾರೆ. ಕೆಎಲ್ ರಾಹುಲ್ ನಾಲ್ಕನೇ ಸ್ಥಾನಕ್ಕೇರಿದ್ದು 132 ರನ್ ಗಳಿಸಿದ್ದಾರೆ. ಐದನೇ ಸ್ಥಾನದಲ್ಲಿ ದೀಪ್ ಹೂಡ ಅವರಿದ್ದು 130 ರನ್ ತಮ್ಮ ಖಾತೆಯಲ್ಲಿ ಸೇರಿಸಿಕೊಂಡಿದ್ದಾರೆ.

ಪರ್ಪಲ್ ಕ್ಯಾಪ್:

ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಉಮೇಶ್ ಯಾದವ್ ಅಗ್ರಸ್ಥಾನದಲ್ಲಿ ಭದ್ರವಾಗಿದ್ದಾರೆ. ಆಡಿದ ಮೂರು ಪಂದ್ಯಗಳಲ್ಲಿ ಇವರು ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 9 ವಿಕೆಟ್ ಕಬಳಿಸಿದ್ದಾರೆ. ರಾಜಸ್ಥಾನ್ ತಂಡದ ಯುಜ್ವೇಂದ್ರ ಚಹಲ್ 3 ಪಂದದ್ಯಗಳಿಂದ 7 ವಿಕೆಟ್ ಕಿತ್ತು ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಲಖನೌ ತಂಡದ ಆವೇಶ್ ಖಾನ್ ಅವರಿದ್ದು 3 ಪಂದ್ಯಗಳಿಂದ ಇವರು ಕೂಡ 7 ವಿಕೆಟ್ ಕಿತ್ತಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ರಾಹುಲ್ ಚಹಾರ್ ನಾಲ್ಕನೇ ಸ್ಥಾನದಲ್ಲಿದ್ದು ಮೂರು ಪಂದ್ಯಗಳಿಂದ 6 ವಿಕೆಟ್ ಕಬಳಿಸಿದ್ದಾರೆ. 6 ವಿಕೆಟ್ ಕಿತ್ತ ಕುಲ್ದೀಪ್ ಯಾದವ್ ಐದನೇ ಸ್ಥಾನದಲ್ಲಿದ್ದಾರೆ.

PBKS vs GT: ಐಪಿಎಲ್​​ನಲ್ಲಿಂದು ಮಯಾಂಕ್ vs ಹಾರ್ದಿಕ್: ಗೆಲುವಿನ ಓಟ ಮುಂದುವರೆಸುತ್ತಾ ಗುಜರಾತ್?

LSG vs DC: ಸಿಕ್ಸ್​ ಸಿಡಿಸಿ ಲಖನೌಗೆ ರೋಚಕ ಜಯ ತಂದುಕೊಟ್ಟ ಜೂನಿಯರ್ ಎಬಿಡಿ ಬದೋನಿ