TATA IPL 2022: ಕೆಕೆಆರ್ ಗೆಲುವಿನ ಬಳಿಕ ಪಾಯಿಂಟ್ ಟೇಬಲ್, ಆರೆಂಜ್, ಪರ್ಪಲ್ ಕ್ಯಾಪ್​​ನಲ್ಲಿ ದೊಡ್ಡ ಬದಲಾವಣೆ

| Updated By: Vinay Bhat

Updated on: Apr 02, 2022 | 9:35 AM

IPL 2022 Points Table Update, Orange Cap, Purple Cap List: ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

TATA IPL 2022: ಕೆಕೆಆರ್ ಗೆಲುವಿನ ಬಳಿಕ ಪಾಯಿಂಟ್ ಟೇಬಲ್, ಆರೆಂಜ್, ಪರ್ಪಲ್ ಕ್ಯಾಪ್​​ನಲ್ಲಿ ದೊಡ್ಡ ಬದಲಾವಣೆ
Andre Russel and Umesh Yadav
Follow us on

15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) ಆರಂಭವಾಗಿ ಒಂದು ವಾರ ಆಗಿದ್ದು ಟೂರ್ನಿ ರೋಚಕತೆ ಪಡೆಯುತ್ತಿದೆ. ದುರ್ಬಲ ಅಂದುಕೊಂಡಿದ್ದ ತಂಡವೆಲ್ಲ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ಆಡಿದ ತಂಡಗಳು ಮೊದಲ ಪಂದ್ಯದಲ್ಲೇ ಸೋಲಿನ ರುಚಿ ಕಂಡಿದೆ. ಮುಂಬೈ ಇಂಡಿಯನ್ಸ್ ಇಂದು ಮತ್ತೊಂದು ಅಗ್ನಿ ಪರೀಕ್ಷೆಗೆ ಸಜ್ಜಾಗಿದೆ. ಎರಡು ಹೊಸ ತಂಡಗಳಾದ ಲಖನೌ ಸೂಪರ್ ಜೇಂಟ್ಸ್ ಮತ್ತು ಗುಜರಾತ್ ಟೈಟನ್ಸ್ ಟೀಮ್ ಕೂಡ ನಿರೀಕ್ಷೆಗೆ ತಕ್ಕ ಆಟವಾಡುತ್ತಿದೆ. ಲೀಗ್ ಪಂದ್ಯಗಳು ಮುಕ್ತಾಯಗೊಂಡ ಬಳಿಕ ಪಾಯಿಂಟ್ ಪಟ್ಟಿಯಲ್ಲಿರುವ ಮೊದಲ ನಾಲ್ಕು ತಂಡಗಳು ಟೂರ್ನಿಯ ಪ್ಲೇ-ಆಫ್‌ನಲ್ಲಿ ಆಡುವ ಅವಕಾಶವನ್ನು ಪಡೆಯುತ್ತವೆ. ಅದರ ನಂತರ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯ ಇರುತ್ತದೆ. ವಿಜೇತ ತಂಡವು ಪ್ರತಿ ಪಂದ್ಯದಲ್ಲಿ 2 ಅಂಕಗಳನ್ನು ಪಡೆಯುತ್ತದೆ. ಇದರ ಜೊತೆಗೆ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

ಪಾಯಿಂಟ್ ಟೇಬಲ್:

  • ಐದನೇ ಸ್ಥಾನದಲ್ಲಿದ್ದ ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಪಂಜಾಬ್ ವಿರುದ್ಧದ ಅಮೋಘ ಗೆಲುವಿನ ಬಳಿಕ ಇದೀಗ ನಂಬರ್ ಒನ್ ಸ್ಥಾನಕ್ಕೇರಿದೆ. ಆಡಿದ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಗೆಲುವು, ಒಂದರಲ್ಲಿ ಸೋಲು ಕಂಡು ಒಟ್ಟು 4 ಅಂಕದೊಂದಿಗೆ +0.843 ರನ್​​ರೇಟ್​ನೊಂದಿಗೆ ಟಾಪ್​ನಲ್ಲಿದೆ.
  • ಎರಡನೇ ಸ್ಥಾನದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡವಿದೆ. ಇವರು ಆಡಿರುವ ಒಂದು ಪಂದ್ಯದಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಿ 2 ಅಂಕದೊಂದಿಗೆ ನಿವ್ವಳ ರನ್ ರೇಟ್ +3.050 ಹೊಂದಿದೆ.
  • ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಲೀಗ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ದೆಹಲಿಯ ನಿವ್ವಳ ರನ್ ರೇಟ್ +0.914 ಆಗಿದೆ.
  • ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಗುಜರಾತ್ ನಿವ್ವಳ ರನ್ ರೇಟ್ +0.286.
  • ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ಲೀಗ್ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಲಖನೌದ ನಿವ್ವಳ ರನ್ ರೇಟ್ -0.011.
  • ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರನೇ ಸ್ಥಾನದಲ್ಲಿದೆ. ಎರಡು ಅಂಕದೊಂದಿಗೆ RCB ನಿವ್ವಳ ರನ್ ರೇಟ್ -0.048.
  • ಕೆಕೆಆರ್ ವಿರುದ್ಧದ ಸೋಲಿನ ಬಳಿಕ ಮೂರನೇ ಸ್ಥಾನದಲ್ಲಿದ್ದ ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಏಳನೇ ಸ್ಥಾನಕ್ಕೆ ಕುಸಿದಿದೆ. ಪಂಜಾಬ್ ನಿವ್ವಳ ರನ್ ರೇಟ್ -1.183 ಆಗಿದೆ.
  • ಎಂಟನೇ ಸ್ಥಾನದಲ್ಲಿ ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಇದೆ. ಆಡಿದ ಎರಡೂ ಪಂದ್ಯಗಳಲ್ಲಿ ಸೋಲುಂಡಿರುವ CSK ನಿವ್ವಳ ರನ್ ರೇಟ್ -0.528.
  • ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಮುಂಬೈ ನಿವ್ವಳ ರನ್ ರೇಟ್ -0.914.
  • ಕೆನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ಸದ್ಯಕ್ಕೆ ಲೀಗ್ ಟೇಬಲ್‌ನಲ್ಲಿ ಕೊನೆಯ ಸ್ಥಾನದಲ್ಲಿದೆ. ಹೈದರಾಬಾದ್ ನಿವ್ವಳ ರನ್ ರೇಟ್ – 3.050.

ಆರೆಂಜ್ ಕ್ಯಾಪ್:

ಆಡಿದ ಮೂರು ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ತೋರಿರುವ ಆಂಡ್ರೆ ರಸೆಲ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಒಟ್ಟು 95 ರನ್ ಸಿಡಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಇದ್ದು ಇವರು ಒಟ್ಟು 93 ರನ್ ಸಿಡಿಸಿದ್ದಾರೆ. ಮೂರನೇ ಸ್ಥಾನದಲ್ಲಿರುವ ಇಶಾನ್ ಕಿಶನ್ 81 ರನ್‌ಗಳಿಸಿದ್ದು ಮುಂದಿನ ಪಂದ್ಯದಲ್ಲಿ ಆರೆಂಜ್ ಕ್ಯಾಪ್ ಮೇಲೆ ಕಣ್ಣಿಟ್ಟಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ರಾಬಿನ್ ಉತ್ತಪ್ಪ (78 ರನ್), ಐದನೇ ಸ್ಥಾನದಲ್ಲಿ ಭಹುನಕಾ ರಾಜಪಕ್ಷ (74 ರನ್) ಇದ್ದಾರೆ.

ಪರ್ಪಲ್ ಕ್ಯಾಪ್:

ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಉಮೇಶ್ ಯಾದವ್ ಅಗ್ರಸ್ಥಾನ ಸಂಪಾದಿಸಿದ್ದಾರೆ. ಆಡಿದ ಮೂರು ಪಂದ್ಯಗಳಲ್ಲಿ ಇವರು ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 8 ವಿಕೆಟ್ ಕಬಳಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಕೆಕೆಆರ್ ತಂಡದ ಟಿಮ್ ಸೌಥೀ ಇದ್ದು ಇವರು 5 ವಿಕೆಟ್ ಪಡೆದಿದ್ದಾರೆ. ಹಾಗೆಯೆ ಆರ್‌ಸಿಬಿ ತಂಡದ ಪ್ರಮುಖ ಆಲ್‌ರೌಂಡರ್ ವನಿಂದು ಹಸರಂಗ ಕೂಡ 5 ವಿಕೆಟ್ ಕಿತ್ತು ಮೂರನೇ ಸ್ಥಾನದಲ್ಲಿದ್ದಾರೆ. ಡ್ವೇನ್ ಬ್ರಾವೋ ಹಾಗೂ ಆಕಾಶ್ ದೀಪ್ ನಾಲ್ಕನೇ ಮತ್ತು ಐದನೇ ಸ್ಥಾನದಲ್ಲಿದ್ದಾರೆ.

IPL 2022: ಐಪಿಎಲ್​ನಲ್ಲಿಂದು ಡಬಲ್ ಧಮಾಕ: ಮುಂಬೈ vs ರಾಜಸ್ಥಾನ್, ಗುಜರಾತ್ vs ಡೆಲ್ಲಿ ನಡುವೆ ಕದನ

Andre Russell: ಸಿಕ್ಸರ್ ಮ್ಯಾನ್ ರಸೆಲ್ ಅವರ ಒಂದೊಂದು ಸಿಕ್ಸ್​​ ಹೇಗಿತ್ತು ಗೊತ್ತೇ?: ಇಲ್ಲಿದೆ ನೋಡಿ