IPL 2022: ಮುಂಬೈ ಇಂಡಿಯನ್ಸ್ ಪಾಲಿಗೆ ವರವಾದ ಸ್ಟೇಡಿಯಂನಲ್ಲಿನ ಪವರ್ ಕಟ್..!
IPL 2022: ಮೊಯೀನ್ ಅಲಿ ಕೂಡ ಕ್ಯಾಚ್ ನೀಡಿ ಶೂನ್ಯಕ್ಕೆ ಔಟಾದರು. ಆ ಬಳಿಕ ಬಂದ ರಾಬಿನ್ ಉತ್ತಪ್ಪ ಜಸ್ಪ್ರೀತ್ ಬುಮ್ರಾ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆದರು.
IPL 2022: ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಐಪಿಎಲ್ನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಐಪಿಎಲ್ನ 59ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಸಿಎಸ್ಕೆ ಮೊದಲ ಓವರ್ನ 2ನೇ ಎಸೆತದಲ್ಲೇ ವಿಕೆಟ್ ಕಳೆದುಕೊಂಡಿತು. ಡೇನಿಯಲ್ ಸ್ಯಾಮ್ಸ್ ಎಸೆದ ಎಸೆತವನ್ನು ಗುರುತಿಸುವಲ್ಲಿ ಎಡವಿದ ಡೆವೊನ್ ಕಾನ್ವೆ ಎಲ್ಬಿಡಬ್ಲ್ಯೂ ಆಗಿದ್ದರು. ಇತ್ತ ಫೀಲ್ಡ್ ಅಂಪೈರ್ ಔಟ್ ನೀಡಿದ್ದರು. ಆದರೆ ಮೂರನೇ ಅಂಪೈರ್ಗೆ ಮನವಿ ಸಲ್ಲಿಸಲು DRS ಅವಕಾಶ ಇರಲಿಲ್ಲ. ಹೀಗಾಗಿ ಡೆವೊನ್ ಕಾನ್ವೆ ಶೂನ್ಯದೊಂದಿಗೆ ಪೆವಿಲಿಯನ್ ಕಡೆ ಹಿಂತಿರುಗಿದರು.
ಇದರ ಬೆನ್ನಲ್ಲೇ ಮೊಯೀನ್ ಅಲಿ ಕೂಡ ಕ್ಯಾಚ್ ನೀಡಿ ಶೂನ್ಯಕ್ಕೆ ಔಟಾದರು. ಆ ಬಳಿಕ ಬಂದ ರಾಬಿನ್ ಉತ್ತಪ್ಪ ಜಸ್ಪ್ರೀತ್ ಬುಮ್ರಾ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆದರು. ಇತ್ತ ಅಂಪೈರ್ ಔಟ್ ನೀಡಿದ ಪರಿಣಾಮ ಪೆವಿಲಿಯನ್ ಕಡೆ ಮುಖ ಮಾಡಿದರು. ದುರಾದೃಷ್ಟ, ಈ ವೇಳೆ ಕೂಡ ಮೂರನೇ ಅಂಪೈರ್ಗೆ ಮನವಿ ಸಲ್ಲಿಸಲು DRS ಅವಕಾಶ ಇರಲಿಲ್ಲ.
ವಾಂಖೆಡೆ ಸ್ಟೇಡಿಯಂನಲ್ಲಿ ವಿದ್ಯುತ್ ಕಡಿತದ ಕಾರಣ DRS ತಂತ್ರಜ್ಞಾನ ಬಳಸಲು ಸಾಧ್ಯವಿರಲಿಲ್ಲ. ಹೀಗಾಗಿ ಡೆವೊನ್ ಕಾನ್ವೆ ಹಾಗೂ ರಾಬಿನ್ ಉತ್ತಪ್ಪ ಫೀಲ್ಡ್ ಅಂಪೈರ್ ನೀಡಿದ ತೀರ್ಪಿನಿಂದಾಗಿ ಪೆವಿಲಿಯನ್ ಕಡೆ ಮುಖ ಮಾಡಬೇಕಾಯಿತು. ಇತ್ತ ಎರಡು ಎಲ್ಬಿಡಬ್ಲ್ಯೂ ವಿಕೆಟ್ ಪಡೆಯುವ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಆರಂಭದಲ್ಲೇ ಡಿಆರ್ಎಸ್ ಅಲಭ್ಯತೆಯ ಸಂಪೂರ್ಣ ಲಾಭ ಪಡೆದರು. ಅಲ್ಲದೆ ಪವರ್ಪ್ಲೇನಲ್ಲಿ ಕೇವಲ 29 ರನ್ ನೀಡಿ 5 ವಿಕೆಟ್ ಉರುಳಿಸುವ ಮೂಲಕ ಮುಂಬೈ ಇಂಡಿಯನ್ಸ್ ಆರಂಭಿಕ ಮೇಲುಗೈ ಸಾಧಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು , ಮೊಯಿನ್ ಅಲಿ , ಶಿವಂ ದುಬೆ, ಎಂಎಸ್ ಧೋನಿ (ನಾಯಕ), ಡ್ವೇನ್ ಬ್ರಾವೋ , ಮಹೇಶ್ ತೀಕ್ಷಣ, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ತಿಲಕ್ ವರ್ಮಾ, ಟ್ರಿಸ್ಟಾನ್ ಸ್ಟಬ್ಸ್, ರಮಣದೀಪ್ ಸಿಂಗ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜಸ್ಪ್ರೀತ್ ಬುಮ್ರಾ , ರಿಲೆ ಮೆರೆಡಿತ್
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:24 pm, Thu, 12 May 22