AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಗೆದ್ದರೆ, CSK ಔಟ್..!

IPL 2022: 10 ಪಾಯಿಂಟ್ಸ್ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್​ ತಂಡಗಳಿವೆ. ಈ ತಂಡಗಳಿಗೆ ಇನ್ನು ಮೂರು ಪಂದ್ಯಗಳು ಬಾಕಿಯಿದ್ದು, ಈ ಮೂರಲ್ಲಿ ಗೆದ್ದು 16 ಪಾಯಿಂಟ್ಸ್ ಪಡೆಯಬಹುದು.

IPL 2022: RCB ಗೆದ್ದರೆ, CSK ಔಟ್..!
Dhoni-Kohli
TV9 Web
| Edited By: |

Updated on:May 09, 2022 | 10:56 PM

Share

IPL 2022: ಐಪಿಎಲ್ ಸೀಸನ್ 15ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಎಲ್ಲಾ ತಂಡಗಳು 11 ಪಂದ್ಯಗಳನ್ನು ಆಡಿದ್ದು, ಇನ್ನುಳಿದಿರುವುದು ಕೆಲವೇ ಕೆಲವು ಪಂದ್ಯಗಳು ಮಾತ್ರ. ಇದಾಗ್ಯೂ ಯಾವುದೇ ತಂಡ ಇನ್ನೂ ಕೂಡ ಪ್ಲೇಆಫ್ ಅನ್ನು ಖಚಿತಪಡಿಸಿಕೊಂಡಿಲ್ಲ ಎಂಬುದು ವಿಶೇಷ. ಏಕೆಂದರೆ ಪಾಯಿಂಟ್ಸ್​​ ಟೇಬಲ್​​ನಲ್ಲಿ ಅಗ್ರಸ್ಥಾನ ಪಡೆದಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ 2ನೇ ಸ್ಥಾನದಲ್ಲಿರುವ ಗುಜರಾತ್ ಟೈಟನ್ಸ್ ತಂಡಗಳು 16 ಅಂಕ ಪಡೆದುಕೊಂಡಿದೆ. ಈ ಎರಡು ತಂಡಗಳು ಇನ್ನು ಒಂದು ಮ್ಯಾಚ್ ಗೆದ್ದರೆ ಪ್ಲೇಆಫ್ ಆಡುವುದು ಖಚಿತವಾಗಲಿದೆ. ಮತ್ತೊಂದೆಡೆ 3ನೇ ಸ್ಥಾನದಲ್ಲಿ 14 ಪಾಯಿಂಟ್ ಪಡೆದಿರುವ ರಾಜಸ್ಥಾನ್ ರಾಯಲ್ಸ್ ಇದ್ದರೆ, 4ನೇ ಸ್ಥಾನದಲ್ಲಿ 14 ಅಂಕಗಳೊಂದಿಗೆ ಆರ್​ಸಿಬಿ ತಂಡವಿದೆ.

ಇನ್ನು 10 ಪಾಯಿಂಟ್ಸ್ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್​ ತಂಡಗಳಿವೆ. ಈ ತಂಡಗಳಿಗೆ ಇನ್ನು ಮೂರು ಪಂದ್ಯಗಳು ಬಾಕಿಯಿದ್ದು, ಈ ಮೂರಲ್ಲಿ ಗೆದ್ದು 16 ಪಾಯಿಂಟ್ಸ್ ಪಡೆಯಬಹುದು. ಆದರೆ ಅತ್ತ ಆರ್​ಸಿಬಿ ತಂಡಕ್ಕೆ ಇನ್ನೆರೆಡು ಪಂದ್ಯವಿದ್ದು ಆ ಎರಡೂ ಮ್ಯಾಚ್​ನಲ್ಲಿ ಗೆದ್ದರೆ ಪ್ಲೇಆಫ್​ ಖಚಿತವಾಗಲಿದೆ. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ತಂಡ ಮುಂದಿನ 3 ಪಂದ್ಯಗಳಲ್ಲಿ 2 ರಲ್ಲಿ ಗೆದ್ದರೆ ಪ್ಲೇಆಫ್ ಆಡುವುದು ಕನ್​​ಫರ್ಮ್ ಆಗಲಿದೆ.

ಆದರೆ ಇತ್ತ 11 ಮ್ಯಾಚ್​ಗಳಲ್ಲಿ ಕೆಕೆಆರ್ ಹಾಗೂ ಸಿಎಸ್​ಕೆ ತಂಡಗಳು 4 ಗೆಲುವು ದಾಖಲಿಸಿ 8 ಪಾಯಿಂಟ್ಸ್ ಪಡೆದುಕೊಂಡಿದೆ. ಈ ಎರಡೂ ತಂಡಗಳು ಮುಂದಿನ 3 ಮ್ಯಾಚ್​ನಲ್ಲಿ ಗೆದ್ದರೂ ಪ್ಲೇಆಫ್ ಪ್ರವೇಶಿಸುವುದು ಅನುಮಾನ. ಏಕೆಂದರೆ ಮುಂದಿನ ಮೂರು ಮ್ಯಾಚ್​ಗಳನ್ನು ಈ ಎರಡೂ ತಂಡಗಳು ಗೆದ್ದರೂ ಒಟ್ಟು 14 ಪಾಯಿಂಟ್ಸ್ ಆಗಲಿದೆ. ಒಂದು ವೇಳೆ ಆರ್​ಸಿಬಿ ತಂಡವು ಮುಂದಿನ 2 ಮ್ಯಾಚ್​ನಲ್ಲಿ ಗೆದ್ದರೆ 18 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ. ಹಾಗೆಯೇ ರಾಜಸ್ಥಾನ್ ರಾಯಲ್ಸ್ ಕೂಡ ಎರಡು ಪಂದ್ಯ ಗೆಲ್ಲುವ ಮೂಲಕ ಪ್ಲೇಆಫ್​ ಅನ್ನು ಖಚಿತಪಡಿಸಿಕೊಳ್ಳಬಹುದು.

ಅಂದರೆ ರಾಜಸ್ಥಾನ್ ರಾಯಲ್ಸ್ ಹಾಗೂ ಆರ್​ಸಿಬಿ ಮುಂದಿನ ಒಂದು ಪಂದ್ಯ ಗೆದ್ದರೆ ಒಟ್ಟು 16 ಪಾಯಿಂಟ್ಸ್ ಆಗಲಿದೆ. ಇದರೊಂದಿಗೆ ಪಾಯಿಂಟ್ಸ್ ಟೇಬಲ್​​ನಲ್ಲಿನ ಅಗ್ರ ನಾಲ್ಕು ತಂಡಗಳ ಪಾಯಿಂಟ್ಸ್​ 16 ಆಗಲಿದೆ. ಇತ್ತ ಮುಂದಿನ ಮೂರು ಮ್ಯಾಚ್​ಗಳನ್ನು ಗೆದ್ದರೂ ಕೆಕೆಆರ್ ಹಾಗೂ ಸಿಎಸ್​ಕೆ ತಂಡಗಳ ಒಟ್ಟು ಪಾಯಿಂಟ್ಸ್​ ಆಗುವುದು ಕೇವಲ 14 ಮಾತ್ರ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ಹಾಗೂ ಆರ್​ಸಿಬಿ ತಂಡಗಳು ಮುಂದಿನ ಪಂದ್ಯ ಗೆದ್ದರೆ ಪ್ಲೇಆಫ್ ರೇಸ್​ನಿಂದ ಸಿಎಸ್​ಕೆ ಹಾಗೂ ಕೆಕೆಆರ್​ ತಂಡಗಳು ಅಧಿಕೃತವಾಗಿ ಹೊರಬೀಳಲಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:29 pm, Mon, 9 May 22

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್