IPL 2022: 2 ವರ್ಷಗಳ ಬ್ಯಾನ್ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡ ಯುವ ವೇಗಿ

IPL 2022: ಟೂರ್ನಿಯ 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಜಯ ಸಾಧಿಸಿತ್ತು. ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಪ್ಯಾಟ್ ಕಮಿನ್ಸ್ ಗೆಲುವಿನ ರೂವಾರಿ ಎನಿಸಿಕೊಂಡಿದ್ದರು.

IPL 2022: 2 ವರ್ಷಗಳ ಬ್ಯಾನ್ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡ ಯುವ ವೇಗಿ
rasikh salam
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 07, 2022 | 3:43 PM

ಐಪಿಎಲ್​ ಸೀಸನ್ 15 ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಉತ್ತಮ ಪ್ರದರ್ಶನ ಮುಂದುವರೆಸಿದೆ. ಇದುವರೆಗೆ 3 ಪಂದ್ಯಗಳಲ್ಲಿ 2ರಲ್ಲಿ ಗೆಲುವು ದಾಖಲಿಸಿ ಗಮನ ಸೆಳೆದಿದ್ದಾರೆ. ಅದರಲ್ಲೂ ಟೂರ್ನಿಯ 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಜಯ ಸಾಧಿಸಿತ್ತು. ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಪ್ಯಾಟ್ ಕಮಿನ್ಸ್ ಗೆಲುವಿನ ರೂವಾರಿ ಎನಿಸಿಕೊಂಡಿದ್ದರು. ಇದಲ್ಲದೆ ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ ರಾಸಿಖ್ ಸಲಾಮ್ ದಾರ್ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ರಾಸಿಖ್ ಈ ಬಾರಿ ಕೆಕೆಆರ್ ತಂಡದಲ್ಲಿದ್ದಾರೆ. ವಿಶೇಷ ಎಂದರೆ 22 ವರ್ಷ ರಾಸಿಖ್ ಬರೋಬ್ಬರಿ 3 ವರ್ಷಗಳ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಜಮ್ಮು-ಕಾಶ್ಮೀರದ ಯುವ ವೇಗಿ ಈ ಹಿಂದೆ ಬ್ಯಾನ್ ಆಗಿದ್ದರು.

2019 ರಲ್ಲಿ ಜನನ ಪ್ರಮಾಣಪತ್ರದಲ್ಲಿ ಮೋಸ ಮಾಡಿದ ಪ್ರಕರಣದಲ್ಲಿ ಬಿಸಿಸಿಐ ರಾಸಿಖ್ ಸಲಾಮ್ ದಾರ್ ಅವರನ್ನು 2 ವರ್ಷಗಳ ಕಾಲ ನಿಷೇಧಿಸಿತ್ತು. ಅಲ್ಲದೆ ಅಂಡರ್-19 ಭಾರತೀಯ ತಂಡದಲ್ಲಿ ಸ್ಥಾನ ಪಡೆದಿದ್ದ ಯುವ ವೇಗಿಯನ್ನು ಆ ಬಳಿಕ ತಂಡದಿಂದ ಕೈಬಿಡಲಾಗಿತ್ತು. ಬಿಸಿಸಿಐ ನಿಷೇಧದ ಕಾರಣ ರಾಸಿಖ್ ಆ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡಿರಲಿಲ್ಲ.

3 ವರ್ಷಗಳ ನಂತರ ಇದೀಗ ರಾಸಿಖ್ ದಾರ್ ಮುಂಬೈ ಇಂಡಿಯನ್ಸ್​ ವಿರುದ್ದ ಪಂದ್ಯ ಆಡಿದ್ದಾರೆ. ಈ ಹಿಂದೆ 2019 ರಲ್ಲಿ ರಾಸಿಖ್ ಅವರನ್ನು ಮುಂಬೈ ಇಂಡಿಯನ್ಸ್ ತಂಡ ಖರೀದಿಸಿತ್ತು. ಈ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪದಾರ್ಪಣೆ ಮಾಡಿದ್ದ ಯುವ ವೇಗಿ 4 ಓವರ್‌ಗಳಲ್ಲಿ 42 ರನ್‌ಗಳನ್ನು ನೀಡಿದ್ದರು. ಈ ಬಾರಿ ಕೆಕೆಆರ್ ತಂಡವು 20 ಲಕ್ಷ ರೂ. ಮೂಲಬೆಲೆಗೆ ರಾಸಿಖ್​ರನ್ನು ಖರೀದಿಸಿದೆ.

ಪ್ರಥಮ ದರ್ಜೆಯ 2 ಪಂದ್ಯಗಳಲ್ಲಿ 7 ವಿಕೆಟ್ ಹಾಗೂ ಲಿಸ್ಟ್-ಎ 2 ಪಂದ್ಯಗಳಲ್ಲಿ 3 ವಿಕೆಟ್ ಪಡೆದಿರುವ ರಾಸಿಖ್ ಈ ಹಿಂದೆ ಉದಯೋನ್ಮುಖ ಯುವ ವೇಗಿಯಾಗಿ ಗುರುತಿಸಿಕೊಂಡಿದ್ದರು. ಇದರ ನಡುವೆ 2 ವರ್ಷಗಳ ಬ್ಯಾನ್ ಕಾರಣ ಕ್ರಿಕೆಟ್ ಮೈದಾನದಿಂದ ದೂರ ಉಳಿದಿದ್ದರು. ಇದೀಗ ಹೊಸ ಇನಿಂಗ್ಸ್ ಆರಂಭಿಸಿರುವ ರಾಸಿಖ್ ಮುಂಬೈ ಇಂಡಿಯನ್ಸ್ ವಿರುದ್ದ 3 ಓವರ್​ ಬೌಲಿಂಗ್ ಮಾಡಿ ಕೇವಲ 18 ರನ್​ ನೀಡಿ ಮಿಂಚಿದ್ದಾರೆ.

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ