ಮುಂಬೈ ಇಂಡಿಯನ್ಸ್ ವಿರುದ್ದ ಐಪಿಎಲ್ನ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಇಬ್ಬರೇ ಇಬ್ಬರು ವಿದೇಶಿ ಆಟಗಾರರು ಕಾಣಿಸಿಕೊಂಡಿದ್ದರು. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಬಹುತೇಕ ಆಟಗಾರರು ರಾಷ್ಟ್ರೀಯ ತಂಡದಲ್ಲಿ ಆಡುತ್ತಿದ್ದರು. ಅದರಂತೆ ಮೊದಲ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದಲ್ಲಿದ್ದ ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್ ಅಲಭ್ಯರಾಗಿದ್ದರು. ಇದೀಗ ಆಲ್ರೌಂಡರ್ ಮಿಚೆಲ್ ಮಾರ್ಷ್ ಆಸ್ಟ್ರೇಲಿಯಾ ತಂಡದಿಂದ ಹೊರಬಿದ್ದಿದ್ದಾರೆ. ಗಾಯದ ಕಾರಣ ಮಾರ್ಷ್ ಪಾಕಿಸ್ತಾನ್ ವಿರುದ್ದ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ. ಆದರೆ ಅತ್ತ ಮಿಚೆಲ್ ಮಾರ್ಷ್ ಆಸ್ಟ್ರೇಲಿಯಾ ತಂಡದಿಂದ ಹೊರಬೀಳುತ್ತಿದ್ದಂತೆ ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಫುಲ್ ಖುಷಿಯಾಗಿದೆ.
ಏಕೆಂದರೆ ಗಾಯದ ಕಾರಣ ತಂಡದಿಂದ ಹೊರಬಿದ್ದಿರುವ ಮಿಚೆಲ್ ಮಾರ್ಷ್ ಐಪಿಎಲ್ಗಾಗಿ ಭಾರತಕ್ಕೆ ತೆರಳುವುದಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಗಾಯದಿಂದ ಚೇತರಿಸಿಕೊಳ್ಳುವ ಸಮಯದಲ್ಲಿ ಕ್ವಾರಂಟೈನ್ ಮುಗಿಸಿ ಶೀಘ್ರದಲ್ಲೇ ಡೆಲ್ಲಿ ಬಳಗವನ್ನು ಸೇರಲು ಪ್ಲ್ಯಾನ್ ರೂಪಿಸಿದ್ದಾರೆ.
ಅಲ್ಲದೆ ಫಿಸಿಯೋಥೆರಪಿಸ್ಟ್ ಪ್ಯಾಟ್ರಿಕ್ ಫರ್ಹಾರ್ಟ್ ಅವರ ಮಾರ್ಗದರ್ಶನದಲ್ಲಿ ಮಿಚೆಲ್ ಮಾರ್ಷ್ ತಮ್ಮ ಚೇತರಿಕೆಯ ಪ್ರಕ್ರಿಯೆಯನ್ನು ಮುಂದುವರೆಸಲಿದ್ದಾರೆ. ಫರ್ಹಾರ್ಟ್ ಐಪಿಎಲ್ 2020 ರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡಲ್ಲಿದ್ದಾರೆ.
ಮಾರ್ಷ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಲು ಭಾರತಕ್ಕೆ ಪ್ರಯಾಣಿಸಲಿದ್ದಾರೆ. ಅಲ್ಲಿ ಅವರು ಮೂರು ದಿನಗಳ ಕಾಲ ಕ್ವಾರಂಟೈನ್‌ನಲ್ಲಿರುತ್ತಾರೆ. ನಂತರ ಆಸ್ಟ್ರೇಲಿಯಾದ ಮಾಜಿ ಮತ್ತು ಪ್ರಸ್ತುತ ನ್ಯೂ ಸೌತ್ ವೇಲ್ಸ್ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್ ಅವರ ಚೇತರಿಕೆಯ ಪ್ರಕ್ರಿಯೆಯನ್ನು ನೋಡಿಕೊಳ್ಳಲಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ. ಹೀಗಾಗಿ ಮಿಚೆಲ್ ಮಾರ್ಷ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೂರನೇ ಅಥವಾ ನಾಲ್ಕನೇ ಪಂದ್ಯದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
T20 ವಿಶ್ವಕಪ್‌ನಲ್ಲಿ ಮಾರ್ಷ್ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದರು. ಇತ್ತೀಚಿನ ದಿನಗಳಲ್ಲಿ ಆಸ್ಟ್ರೇಲಿಯಾ ಪರ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಮಾರ್ಷ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅಲ್ಲದೆ ಕಳೆದ ವರ್ಷ ಆಸ್ಟ್ರೇಲಿಯಾದ T20 ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದರು, ನ್ಯೂಜಿಲೆಂಡ್ ವಿರುದ್ಧದ ಫೈನಲ್‌ನಲ್ಲಿ ಅಜೇಯ 77 ರನ್ ಗಳಿಸಿ ಆಸ್ಟ್ರೇಲಿಯಾ ತಂಡ ಚೊಚ್ಚಲ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ:
ರಿಷಭ್ ಪಂತ್ (ನಾಯಕ), ಡೇವಿಡ್ ವಾರ್ನರ್, ಪೃಥ್ವಿ ಶಾ, ಮಿಚೆಲ್ ಮಾರ್ಷ್, ಸರ್ಫರಾಜ್ ಖಾನ್, ಕೆಎಸ್ ಭರತ್, ಮನದೀಪ್ ಸಿಂಗ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ, ಕಮಲೇಶ್ ನಾಗರಕೋಟಿ, ಮುಸ್ತಾಫಿಜುರ್ ರೆಹಮಾನ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್, ಅಶ್ವಿನ್ ಹೆಬ್ಬಾರ್, ಅಶ್ವಿನ್ ಹೆಬ್ಬಾರ್ , ಯಶ್ ಧುಲ್, ವಿಕ್ಕಿ ಓಸ್ಟ್ವಾಲ್, ಲುಂಗಿ ಎನ್‌ಗಿಡಿ, ಟಿಮ್ ಸೀಫರ್ಟ್, ಪ್ರವೀಣ್ ದುಬೆ, ರೋವ್‌ಮನ್ ಪೊವೆಲ್, ಲಲಿತ್ ಯಾದವ್.
ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?
ಇದನ್ನೂ ಓದಿ: IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು
Published On - 6:21 pm, Wed, 30 March 22