Ishan Kishan: ಇಶಾನ್ ಕಿಶನ್ ಅಬ್ಬರಿಸಿದ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ಗೆ ಆಘಾತ..!
IPL 2022 : ಮುಂಬೈ ಇಂಡಿಯನ್ಸ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೆವಿಸ್, ಕೀರಾನ್ ಪೊಲಾರ್ಡ್, ಜಸ್ಪ್ರೀತ್ ಬುಮ್ರಾ, ಮುರುಗನ್ ಅಶ್ವಿನ್, ಬಾಸಿಲ್ ಥಂಪಿ, ಜಯದೇವ್ ಉನದ್ಕತ್, ಮಯಾಂಕ್ ಮಾರ್ಕಂಡೆ
ಐಪಿಎಲ್ ಸೀಸನ್ 15 ರ (IPL 2022) ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (MI vs DC) ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡಕ್ಕೆ ನಾಯಕ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 67 ರನ್ಗಳ ಜೊತೆಯಾಟವಾಡಿದ ಬಳಿಕ ರೋಹಿತ್ ಶರ್ಮಾ (41) ಕ್ಯಾಚ್ ನೀಡಿ ನಿರ್ಗಮಿಸಿದರು. ಆ ಬಳಿಕ ಬಂದ ಅನ್ಮೋಲ್ ಪ್ರೀತ್ ಸಿಂಗ್ (8) ಹಾಗೂ ತಿಲಕ್ ವರ್ಮಾ (22), ಕೀರನ್ ಪೊಲಾರ್ಡ್ (3) ಬೇಗನೆ ವಿಕೆಟ್ ಒಪ್ಪಿಸಿದ್ದರು. ಆದರೆ ಮತ್ತೊಂದೆಡೆ ಅಬ್ಬರಿಸುವ ಮೂಲಕ ಇಶಾನ್ ಕಿಶನ್ (Ishan Kishan) ಮುಂಬೈ ತಂಡಕ್ಕೆ ಆಸರೆಯಾಗಿ ನಿಂತರು.
ಅದರಂತೆ ಸಿಕ್ಸ್ ಫೋರ್ಗಳ ಸುರಿಮಳೆಗೈಯ್ಯುತ್ತಾ ಕಿಶನ್ ಅರ್ಧಶತಕ ಪೂರೈಸಿದ್ದರು. ಅಲ್ಲದೆ 48 ಎಸೆತಗಳಲ್ಲಿ 2 ಭರ್ಜರಿ ಸಿಕ್ಸರ್ ಹಾಗೂ 11 ಬೌಂಡರಿಗಳೊಂದಿಗೆ ಅಜೇಯ 81 ರನ್ಗಳಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡದ ಮೊತ್ತವನ್ನು 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 177 ಕ್ಕೆ ತಂದು ನಿಲ್ಲಿಸಿದರು. ಆದರೆ ಬ್ಯಾಟಿಂಗ್ ಮುಗಿದ ಬಳಿಕ ಇಶಾನ್ ಕಿಶನ್ ಫೀಲ್ಡಿಂಗ್ಗೆ ಮೈದಾನಕ್ಕಿಳಿದಿಲ್ಲ. ಮುಂಬೈ ಇಂಡಿಯನ್ಸ್ ತಂಡದ ವಿಕೆಟ್ ಕೀಪರ್ ಆಗಿರುವ ಕಿಶನ್ ಅವರ ಬದಲಿಗೆ ಯುವ ಆಟಗಾರ ಆರ್ಯನ್ ಜುರೆಲ್ ಗ್ಲೌಸ್ನೊಂದಿಗೆ ಮೈದಾನಕ್ಕಿಳಿದಿದ್ದರು.
ಇಶಾನ್ ಕಿಶನ್ ಗಾಯಗೊಂಡಿರುವ ಕಾರಣ ಬದಲಿ ವಿಕೆಟ್ ಕೀಪರ್ ಅನ್ನು ಕಣಕ್ಕಿಳಿಸಲಾಗಿದೆ. ಪಂದ್ಯದ 18ನೇ ಓವರ್ನಲ್ಲಿ ಶಾರ್ದೂಲ್ ಠಾಕೂರ್ ಎಸೆದ ಎಸೆತದಲ್ಲಿ ಕಿಶನ್ ಗಾಯಗೊಂಡಿದ್ದರು. ಇದಾಗ್ಯೂ ನೋವಿನೊಂದಿಗೆ ಯುವ ಆಟಗಾರರ ಅಂತಿಮ ಓವರ್ಗಳನ್ನು ಎದುರಿಸಿದ್ದರು. ಆದರೆ ಪೆವಿಲಿಯನ್‌ಗೆ ಮರಳಿದ ಬಳಿಕ ನೋವಿನ ಕಾರಣ ಮೈದಾನಕ್ಕೆ ಮರಳಲಿಲ್ಲ. ಅಲ್ಲದೆ ಇದೀಗ ಇಶಾನ್ ಕಿಶನ್ ಅವರ ಕಾಲಿನ ಪಾದಗಳ ಭಾಗದ ಸ್ಕ್ಯಾನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸ್ಕ್ಯಾನಿಂಗ್ ರಿಪೋರ್ಟ್ ಬಳಿಕ ಗಾಯದ ಗಂಭೀರತೆ ತಿಳಿಯಲಿದ್ದು, ಹೀಗಾಗಿ ಇಶಾನ್ ಕಿಶನ್ ಮುಂದಿನ ಪಂದ್ಯದಲ್ಲಿ ಆಡಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.
ಮುಂಬೈ ಇಂಡಿಯನ್ಸ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೆವಿಸ್, ಕೀರಾನ್ ಪೊಲಾರ್ಡ್, ಜಸ್ಪ್ರೀತ್ ಬುಮ್ರಾ, ಮುರುಗನ್ ಅಶ್ವಿನ್, ಬಾಸಿಲ್ ಥಂಪಿ, ಜಯದೇವ್ ಉನದ್ಕತ್, ಮಯಾಂಕ್ ಮಾರ್ಕಂಡೆ, ಸಂಜಯ್ ಯಾದವ್, ರಮಣ್‌ದೀಪ್ ಸಿಂಗ್, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ತಿಲಕ್ ವರ್ಮಾ, ರಾಹುಲ್ ಬುಮ್ರಾ, ಹೃತಿಕ್ ಶೋಕೀನ್ , ಅರ್ಷದ್ ಖಾನ್, ಟೈಮಲ್ ಮಿಲ್ಸ್, ಜೋಫ್ರಾ ಆರ್ಚರ್, ಫ್ಯಾಬಿಯನ್ ಅಲೆನ್, ಡೇನಿಯಲ್ ಸ್ಯಾಮ್ಸ್, ಅನ್ಮೋಲ್ಪ್ರೀತ್ ಸಿಂಗ್, ಟಿಮ್ ಡೇವಿಡ್, ರಿಲೆ ಮೆರೆಡಿತ್.
ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?
ಇದನ್ನೂ ಓದಿ: IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು