AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಒಂದು ಸೋಲು…ಐಪಿಎಲ್ ಕನಸು ಕೂಡ ಭಗ್ನ..!

Joe Root: ಈ ಹಿಂದೆ ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರರಾದ ಅಲೆಸ್ಟೇರ್ ಕುಕ್, ಜೇಮ್ಸ್ ಆಂಡರ್ಸನ್ ಮತ್ತು ಸ್ಟುವರ್ಟ್ ಬ್ರಾಡ್ ಸೇರಿದಂತೆ ಹಲವಾರು ಇಂಗ್ಲೆಂಡ್ ಕ್ರಿಕೆಟಿಗರು ಐಪಿಎಲ್​​ನಿಂದ ಹಿಂದೆ ಸರಿದಿದ್ದರು.

IPL 2022: ಒಂದು ಸೋಲು...ಐಪಿಎಲ್ ಕನಸು ಕೂಡ ಭಗ್ನ..!
Joe Root
TV9 Web
| Updated By: ಝಾಹಿರ್ ಯೂಸುಫ್|

Updated on: Jan 17, 2022 | 4:17 PM

Share

ಜೋ ರೂಟ್…ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಜೋ ರೂಟ್ (Joe Root) ಸ್ಥಿರ ಪ್ರದರ್ಶನ ನೀಡುವ ಆಟಗಾರರಲ್ಲಿ ಒಬ್ಬರು. ಈ ಹಿಂದೆ ಇಂಗ್ಲೆಂಡ್ ಸೀಮಿತ ಓವರ್​ಗಳ ತಂಡದಲ್ಲಿ ಕಾಣಿಸಿಕೊಂಡಿದ್ದರೂ ಆ ಬಳಿಕ ರೂಟ್ ಟೆಸ್ಟ್ ಕ್ರಿಕೆಟ್​ನತ್ತ ಮಾತ್ರ ವಾಲಿದರು. ಪರಿಣಾಮ ಪ್ರಸ್ತುತ ಕ್ರಿಕೆಟ್​ನ ಫ್ಯಾಬ್ ಫೋರ್​ನಲ್ಲಿ ಈಗಲೂ ಜೋ ರೂಟ್ ಹೆಸರು ರಾರಾಜಿಸುತ್ತಿದೆ. ಅದರಲ್ಲೂ ಕಳೆದ ವರ್ಷ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ಗಳಿಸಿದ ಆಟಗಾರರಲ್ಲಿ ರೂಟ್ ಅಗ್ರಸ್ಥಾನದಲ್ಲಿದ್ದಾರೆ. ಇದಾಗ್ಯೂ ಪ್ರತಿ ಬಾರಿ ಐಪಿಎಲ್ ಹರಾಜು ನಡೆಯುವ ವೇಳೆ ರೂಟ್ ಹೆಸರು ಚರ್ಚೆಯಲ್ಲಿರುತ್ತದೆ. ಏಕೆಂದರೆ ಜೋ ರೂಟ್ ಒಂದೇ ಒಂದು ಬಾರಿ ಐಪಿಎಲ್​ಗಾಗಿ ಹೆಸರು ನೋಂದಣಿ ಮಾಡಿಕೊಂಡಿದ್ದರು. ಅಂದರೆ 2018 ರಲ್ಲಿ ಹೆಸರು ನೀಡಿದ್ದ ರೂಟ್​ ರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

ಆದರೆ ಈ ಬಾರಿ ಮೆಗಾ ಹರಾಜು ನಡೆಯಲಿದೆ. ಬಹುತೇಕ ತಂಡಗಳು ನಾಯಕನ ಹುಡುಕಾಟದಲ್ಲಿದೆ. ಅದರಲ್ಲೂ ಇಂಗ್ಲೆಂಡ್ ತಂಡದ ಯಶಸ್ವಿ ನಾಯಕರಲ್ಲಿ ಒಬ್ಬರೆನಿಸಿಕೊಂಡಿರುವ ಜೋ ರೂಟ್ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಅಷ್ಟೇ ಅಲ್ಲದೆ ಈ ಬಾರಿ ಹೆಸರು ನೀಡುವ ಬಗ್ಗೆ ಕೂಡ ರೂಟ್ ಸುಳಿವು ನೀಡಿದ್ದರು. ಆದರೀಗ ಆ್ಯಶಸ್ ಸರಣಿಯಲ್ಲಿನ ಇಂಗ್ಲೆಂಡ್ ತಂಡದ ಹೀನಾಯ ಸೋಲಿನ ಬಳಿಕ ಜೋ ರೂಟ್ ನಿರ್ಧಾರ ಬದಲಿಸಿದ್ದಾರೆ.

ಪ್ರತಿಷ್ಠಿತ ಆ್ಯಶಸ್ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ದ ಇಂಗ್ಲೆಂಡ್ 4-0 ಅಂತರದಿಂದ ಹೀನಾಯವಾಗಿ ಸೋಲನುಭವಿಸಿದೆ. ಇಂತಹ ಸಂದರ್ಭದಲ್ಲಿ ಜೋ ರೂಟ್ ಅವರು ಐಪಿಎಲ್​ನತ್ತ ಮುಖ ಮಾಡಿದರೆ ಇಂಗ್ಲೆಂಡ್ ಕ್ರಿಕೆಟ್ ಸಂಕಷ್ಟಕ್ಕೆ ಸಿಲುಕಬಹುದು. ಹೀಗಾಗಿಯೇ ರೂಟ್ ಕೂಡ ಐಪಿಎಲ್ ತ್ಯಾಗಕ್ಕೆ ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ ಮತ್ತೊಮ್ಮೆ ಇಂಗ್ಲೆಂಡ್ ಟೆಸ್ಟ್ ತಂಡವನ್ನು ಉತ್ತುಂಗಕ್ಕೇರಿಸುವ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಮುಂಬರುವ ಮೆಗಾ ಹರಾಜಿಗಾಗಿ ಜೋ ರೂಟ್ ಹೆಸರು ನೀಡಿಲ್ಲ ಎಂಬುದು ಖಚಿತವಾಗಿದೆ.

ಆ್ಯಶಸ್ ಸರಣಿಯ ಕೊನೆಯ ಟೆಸ್ಟ್ ಪಂದ್ಯದಲ್ಲಿನ ಹೀನಾಯ ಸೋಲಿನ ಬಳಿಕ ಮಾತನಾಡಿರುವ ಜೋ ರೂಟ್ ಈ ಬಾರಿ ಐಪಿಎಲ್​ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ. ಇಂಗ್ಲೆಂಡ್ ತಂಡವನ್ನು ಕಟ್ಟಿ ಬೆಳೆಸಲು ನಾವು ಸಾಕಷ್ಟು ಕೆಲಸ ಮಾಡಬೇಕಿದೆ. ಅದಕ್ಕೆ ನನ್ನೆಲ್ಲ ಶಕ್ತಿ ನೀಡಬೇಕಾಗುತ್ತದೆ. ನಾನು ನಮ್ಮ ದೇಶದಲ್ಲಿ ಟೆಸ್ಟ್ ಕ್ರಿಕೆಟ್‌ನ ಭವಿಷ್ಯವನ್ನು ಯೋಚಿಸುತ್ತೇನೆ. ಇದಕ್ಕಾಗಿ ನಾನು ಸತತ ಪ್ರಯತ್ನಿಸುತ್ತೇನೆ. ಹೀಗಾಗಿ ಐಪಿಎಲ್​ನಂತಹ ಟೂರ್ನಿಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ. ಈ ಮೂಲಕ ಮತ್ತೊಮ್ಮೆ 31 ವರ್ಷದ ಜೋ ರೂಟ್ ತಮ್ಮ ರಾಷ್ಟ್ರೀಯ ತಂಡಕ್ಕಾಗಿ ಐಪಿಎಲ್​ ಅನ್ನು ತ್ಯಾಗ ಮಾಡಿದ್ದಾರೆ.

ಈ ಹಿಂದೆ ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರರಾದ ಅಲೆಸ್ಟೇರ್ ಕುಕ್, ಜೇಮ್ಸ್ ಆಂಡರ್ಸನ್ ಮತ್ತು ಸ್ಟುವರ್ಟ್ ಬ್ರಾಡ್ ಸೇರಿದಂತೆ ಹಲವಾರು ಇಂಗ್ಲೆಂಡ್ ಕ್ರಿಕೆಟಿಗರು ಐಪಿಎಲ್​​ನಿಂದ ಹಿಂದೆ ಸರಿದಿದ್ದರು. ಅಷ್ಟೇ ಅಲ್ಲದೆ ಈ ಆಟಗಾರರು ಇಂಗ್ಲೆಂಡ್ ಟೆಸ್ಟ್ ತಂಡಕ್ಕಾಗಿ ಹೆಚ್ಚಿನ ಸಮಯ ಮೀಸಲಿರಿಸಿ ತಂಡವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದ್ದರು. ಇದೀಗ ಜೋ ರೂಟ್ ಕೂಡ ಅಂತಹದ್ದೇ ನಿರ್ಧಾರ ಮಾಡುವ ಮೂಲಕ ರಾಷ್ಟ್ರೀಯ ತಂಡದ ಪ್ರತಿಷ್ಠಿತೆ ಮುಖ್ಯವೇ ಹೊರತು ಹಣವಲ್ಲ ಎಂಬುದನ್ನು ಸಾರಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದಿಂದ ಐರ್ಲೆಂಡ್‌ಗೆ: 8 ಸಾವಿರ ಕಿ.ಮೀ ನಡೆದು ಕ್ರಿಕೆಟ್​ಗೆ ಎಂಟ್ರಿ ಕೊಟ್ಟ ಯುವ ಬೌಲರ್..!

ಇದನ್ನೂ ಓದಿ:  ಈ ಫೋಟೋದಲ್ಲಿರುವ ಇಬ್ಬರು ಸ್ಟಾರ್ ಆಟಗಾರರನ್ನು ಗುರುತಿಸಬಲ್ಲಿರಾ?

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(IPL 2022: Joe Root passes on opportunity to enter mega IPL auction)

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?