IPL 2022: SRH ತಂಡದಿಂದ ಹೊರನಡೆದ ನಾಯಕ ಕೇನ್ ವಿಲಿಯಮ್ಸನ್

IPL 2022: ಸನ್ ರೈಸರ್ಸ್ ಹೈದರಾಬಾದ್ (SRH): ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್, ಐಡೆನ್ ಮಾರ್ಕ್ರಾಮ್, ಪ್ರಿಯಮ್ ಗರ್ಗ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್.

IPL 2022: SRH ತಂಡದಿಂದ ಹೊರನಡೆದ ನಾಯಕ ಕೇನ್ ವಿಲಿಯಮ್ಸನ್
Kane williamson
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 18, 2022 | 2:31 PM

ಮುಂಬೈ ಇಂಡಿಯನ್ಸ್​ ವಿರುದ್ದದ ರೋಚಕ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ತಂಡ ಗೆದ್ದ ಬೆನ್ನಲ್ಲೇ ಇದೀಗ ತಂಡದ ನಾಯಕ ಕೇನ್ ವಿಲಿಯಮ್ಸನ್ (Kane williamson)  ಬಯೋಬಬಲ್ ತೊರೆದಿದ್ದಾರೆ. ಕೇನ್ ವಿಲಿಯಮ್ಸನ್ ಎರಡನೇ ಬಾರಿಗೆ ತಂದೆಯಾಗುತ್ತಿದ್ದು, ಈ ಕಾರಣದಿಂದಾಗಿ ಅವರು ನ್ಯೂಜಿಲೆಂಡ್​ಗೆ ಮರಳಿದ್ದಾರೆ ಎಂದು ಎಸ್​ಆರ್​ಹೆಚ್ ಫ್ರಾಂಚೈಸ್ ತಿಳಿಸಿದೆ. ಮಂಗಳವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ 3 ರನ್​ಗಳಿಂದ ರೋಚಕ ಗೆಲುವು ಸಾಧಿಸಿತ್ತು. ಈ ಗೆಲುವಿನ ಬೆನ್ನಲ್ಲೇ ವಿಲಿಯಮ್ಸನ್ ತಾಯ್ನಾಡಿಗೆ ಮರಳಲು ನಿರ್ಧರಿಸಿದ್ದಾರೆ. ಹೀಗಾಗಿ ಮೇ 22ರಂದು ​ ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಎಸ್​ಆರ್​ಹೆಚ್​ ತಂಡವನ್ನು ಭುವನೇಶ್ವರ್ ಕುಮಾರ್ ಮುನ್ನಡೆಸುವ ಸಾಧ್ಯತೆಯಿದೆ.

ಪ್ಲೇಆಫ್ ಹಾದಿ ಕಠಿಣ: ಮೇ 17 ರಂದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ 3 ರನ್‌ಗಳಿಂದ ಗೆದ್ದಿತು. ಈ ಗೆಲುವಿನೊಂದಿಗೆ ತಂಡವು ಪ್ಲೇ ಆಫ್‌ ಹಂತಕ್ಕೇರುವ ಭರವಸೆಯನ್ನು ಉಳಿಸಿಕೊಂಡಿದೆ. ಆದರೆ ಸನ್‌ರೈಸರ್ಸ್‌ಗೆ ಕೊನೆಯ ನಾಲ್ಕರ ಘಟ್ಟ ತಲುಪುವ ಹಾದಿ ತುಂಬಾ ಕಷ್ಟಕರವಾಗಿದೆ. ಏಕೆಂದರೆ ನೆಟ್​ ರನ್ ರೇಟ್‌ನಲ್ಲಿ ತಂಡವು ಇತರ ತಂಡಗಳಿಗಿಂತ ಬಹಳ ಹಿಂದುಳಿದಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದರೂ ಹೊರಗುಳಿಯಬೇಕಾಗುತ್ತದೆ.

ಇದನ್ನೂ ಓದಿ: IPL 2022: ಏನಿದು RCB ಹಾಲ್ ಆಫ್ ಫೇಮ್ ಪ್ರಶಸ್ತಿ?

ಇದನ್ನೂ ಓದಿ
Image
IPL 2022: ಎಬಿಡಿ, ಕ್ರಿಸ್ ಗೇಲ್​ಗೆ RCB ಯ ಹಾಲ್ ಆಫ್ ಫೇಮ್ ಗೌರವ
Image
IPL 2022: ಇಬ್ಬರು ಯುವ ಆಟಗಾರರ ಪ್ರದರ್ಶನಕ್ಕೆ ಗಂಗೂಲಿ ಫಿದಾ..!
Image
Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ
Image
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!

ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ ಸನ್ ರೈಸರ್ಸ್ 13 ಪಂದ್ಯಗಳನ್ನು ಆಡಿದ್ದು, ಈ ವೇಳೆ 6 ರಲ್ಲಿ ಗೆದ್ದು, 7ರಲ್ಲಿ ಸೋತಿದೆ. ಸದ್ಯ 12 ಅಂಕಗಳೊಂದಿಗೆ ತಂಡ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಒಂದು ವೇಳೆ ಪಾಯಿಂಟ್ಸ್​ ಟೇಬಲ್​ನಲ್ಲಿ ನಾಲ್ಕನೇ ಸ್ಥಾನ ಪಡೆಯುವ ತಂಡ 14 ಪಾಯಿಂಟ್ಸ್​ ಗಳಿಸಿದರೆ, ಎಸ್​ಆರ್​ಹೆಚ್ ತಂಡಕ್ಕೆ ನೆಟ್ ರನ್​ ರೇಟ್ ಮೂಲಕ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ. ಇದಾಗ್ಯೂ ಆರ್​ಸಿಬಿ ಅಥವಾ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂದಿನ ಪಂದ್ಯದಲ್ಲಿ ಗೆದ್ದರೆ ಎಸ್​ಆರ್​​ಹೆಚ್​ ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ.

ವಿಲಿಯಮ್ಸನ್ ಸತತ ವೈಫಲ್ಯ: ಐಪಿಎಲ್ 2022 ರಲ್ಲಿ ಕೇನ್ ವಿಲಿಯಮ್ಸನ್ ಅವರಿಂದ ನಿರೀಕ್ಷಿತ ಆಟ ಮೂಡಿಬಂದಿಲ್ಲ. ಆಡಿದ 13 ಪಂದ್ಯಗಳಲ್ಲಿ ಗಳಿಸಿದ್ದು ಕೇವಲ 216 ರನ್ ಮಾತ್ರ. ಈ ವೇಳೆ ಅವರು ಕೇವಲ ಒಂದು ಅರ್ಧಶತಕ ಮಾತ್ರ ಗಳಿಸಿದ್ದರು. ಅವರ ಕಳಪೆ ಪ್ರದರ್ಶನ ತಂಡದ ಮೇಲೂ ಪರಿಣಾಮ ಬೀರಿತು. ಇದರಿಂದಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಪ್ಲೇಆಫ್​ ಸ್ಥಾನದಿಂದ ದೂರ ಉಳಿದಿದೆ.

ಸನ್ ರೈಸರ್ಸ್ ಹೈದರಾಬಾದ್ (SRH): ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್, ಐಡೆನ್ ಮಾರ್ಕ್ರಾಮ್, ಪ್ರಿಯಮ್ ಗರ್ಗ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಜೆ ಸುಚಿತ್, ಶ್ರೇಯಸ್ ಗೋಪಾಲ್, ಕಾರ್ತಿಕ್ ತ್ಯಾಗಿ, ಟಿ ನಟರಾಜನ್, ಉಮ್ರಾನ್ ಮಲಿಕ್, ಸೌರಭ್ ದುಬೆ, ಸೀನ್ ಅಬಾಟ್, ಆರ್ ಸಮರ್ಥ್, ಜೆ ಸುಚಿತ್, ರೊಮಾರಿಯೋ ಶೆಫರ್ಡ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.