AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಪೊಲಾರ್ಡ್​ ಬರ್ತ್​ಡೇ: ಮುಂಬೈ ಸೋಲಲ್ಲ ಎಂದ ಅಭಿಮಾನಿಗಳು

IPL 2022: ಐಪಿಎಲ್​ನಲ್ಲಿ ಮುಂಬೈನ ಪ್ರದರ್ಶನವು ತುಂಬಾ ನಿರಾಶಾದಾಯಕವಾಗಿದೆ. ತಂಡವು ಈಗಾಗಲೇ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿದೆ. ಈ ಸೀಸನ್​ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಸತತ 8 ಪಂದ್ಯಗಳಲ್ಲಿ ಸೋತಿತ್ತು.

IPL 2022: ಪೊಲಾರ್ಡ್​ ಬರ್ತ್​ಡೇ: ಮುಂಬೈ ಸೋಲಲ್ಲ ಎಂದ ಅಭಿಮಾನಿಗಳು
Kieron pollard
TV9 Web
| Updated By: ಝಾಹಿರ್ ಯೂಸುಫ್|

Updated on: May 12, 2022 | 5:07 PM

Share

ವೆಸ್ಟ್ ಇಂಡೀಸ್ ನ ಮಾಜಿ ಕ್ರಿಕೆಟಿಗ ಕೀರನ್ ಪೊಲಾರ್ಡ್ (Kieron pollard) ಇಂದು ತಮ್ಮ 35ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಐಪಿಎಲ್​ ಪಂದ್ಯದ ವೇಳೆ ಪೊಲಾರ್ಡ್​ ನಾಲ್ಕನೇ ಬಾರಿ ಕಣಕ್ಕಿಳಿಯುತ್ತಿದ್ದಾರೆ. ವಿಶೇಷ ಎಂದರೆ ಪೊಲಾರ್ಡ್​ ಅವರ ಹುಟ್ಟುಹಬ್ಬದ ದಿನದಂದು ಮುಂಬೈ ಇಂಡಿಯನ್ಸ್ ತಂಡ ಇದುವರೆಗೆ ಸೋತಿಲ್ಲ. 2010 ರಿಂದ ಮುಂಬೈ ಪರ ಆಲ್ ರೌಂಡರ್ ಆಗಿ ಕಣಕ್ಕಿಳಿಯುತ್ತಿರುವ ಪೊಲಾರ್ಡ್ ಬ್ಯಾಟಿಂಗ್ ಮತ್ತು ಬೌಲಿಂಗ್ ಹೊರತುಪಡಿಸಿ, ಪ್ರಚಂಡ ಫೀಲ್ಡರ್ ಕೂಡ ಗಮನ ಸೆಳೆದಿದ್ದಾರೆ. ಇದೀಗ ತಮ್ಮ 35ನೇ ಬರ್ತ್ ಡೇ ದಿನದಂದು ಮುಂಬೈ ಇಂಡಿಯನ್ಸ್​ ಸಿಎಸ್​ಕೆ ವಿರುದ್ದ ಆಡುತ್ತಿದೆ. ಹೀಗಾಗಿಯೇ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲ್ಲಲಿದೆ ಎಂಬ ವಿಶ್ವಾಸದಲ್ಲಿದ್ದಾರೆ ಅಭಿಮಾನಿಗಳು. ಏಕೆಂದರೆ ಪೊಲಾರ್ಡ್ ಹುಟ್ಟುಹಬ್ಬದಂದು ಇದುವರೆಗೆ ಮುಂಬೈ ಇಂಡಿಯನ್ಸ್ ಸೋತಿಲ್ಲ. ಒಂದು ವೇಳೆ ಇಂದು ಸಿಎಸ್​ಕೆ ಸೋತರೆ ಪ್ಲೇಆಫ್ ರೇಸ್​ನಿಂದ ಬುಹುತೇಕ ಹೊರಬೀಳಲಿದೆ.

ಇದಾಗ್ಯೂ ಇತ್ತ ಪೊಲಾರ್ಡ್ ಅವರಿಂದ ಈ ಬಾರಿ ಉತ್ತಮ ಪ್ರದರ್ಶನ ಮೂಡಿಬಂದಿಲ್ಲ. ಐಪಿಎಲ್​ನಲ್ಲಿ ಅದ್ಭುತ ಆಲ್​ರೌಂಡರ್ ಪ್ರದರ್ಶನ ನೀಡುತ್ತಾ ಬಂದಿರುವ ಪೊಲಾರ್ಡ್ ಈ ಹಿಂದೆ ಬ್ಯಾಟಿಂಗ್ ಜೊತೆ ಬೌಲಿಂಗ್​ನಲ್ಲೂ ಮಿಂಚಿದ್ದರು. ಎಂಎಸ್ ಧೋನಿ, ವಿರಾಟ್ ಕೊಹ್ಲಿ, ರಾಬಿನ್ ಉತ್ತಪ್ಪ ಮತ್ತು ಎಬಿ ಡಿವಿಲಿಯರ್ಸ್ ಅವರಂತಹ ಸ್ಟಾರ್ ಬ್ಯಾಟ್ಸ್​ಮನ್​ಗಳ ವಿಕೆಟ್ ಪಡೆದು ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.

ಕೀರನ್ ಪೊಲಾರ್ಡ್ ಅವರ ಮಧ್ಯಮ ವೇಗದ ಬೌಲಿಂಗ್‌ನಿಂದಾಗಿ ಅನೇಕ ಕ್ರಿಕೆಟ್ ದಂತಕಥೆಗಳನ್ನು ಹಲವು ಬಾರಿ ವಜಾ ಮಾಡಿದ್ದಾರೆ. ಎಂಎಸ್ ಧೋನಿ, ಎಬಿ ಡಿವಿಲಿಯರ್ಸ್, ರಾಬಿನ್ ಉತ್ತಪ್ಪ ಮತ್ತು ವಿರಾಟ್ ಕೊಹ್ಲಿ ಅವರ ಎಸೆತಗಳಲ್ಲಿ ಅತಿ ಹೆಚ್ಚು ಬಾರಿ ಔಟಾಗಿದ್ದಾರೆ. ಐಪಿಎಲ್‌ನಲ್ಲಿ ಪೊಲಾರ್ಡ್ ಈ ನಾಲ್ವರು ದಿಗ್ಗಜರಿಗೆ ತಲಾ 3 ಬಾರಿ ಪೆವಿಲಿಯನ್ ಹಾದಿ ತೋರಿಸಿದ್ದಾರೆ. ಇದು ಪೊಲಾರ್ಡ್ ಅವರ ಬೌಲಿಂಗ್ ಮಟ್ಟವನ್ನು ತೋರಿಸುತ್ತದೆ. ಐಪಿಎಲ್‌ನಲ್ಲಿ ಅವರ ಒಟ್ಟಾರೆ ದಾಖಲೆಯನ್ನು ಗಮನಿಸಿದರೆ, ಪೊಲಾರ್ಡ್ 189 ಪಂದ್ಯಗಳಲ್ಲಿ 171 ಇನ್ನಿಂಗ್ಸ್‌ಗಳಲ್ಲಿ 3412 ರನ್ ಗಳಿಸಿದ್ದಾರೆ. ಇದಲ್ಲದೆ ಒಟ್ಟು 69 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಇದನ್ನೂ ಓದಿ
Image
MS Dhoni: ಸೂಪರ್ ಬೆಡಗಿ ಜೊತೆ ಸಿನಿಮಾ ನಿರ್ಮಿಸಲು ಮುಂದಾದ ಧೋನಿ..!
Image
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
Image
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!
Image
AB De Villiers: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

ಆದರೆ ಪ್ರಸ್ತುತ ಐಪಿಎಲ್​ನಲ್ಲಿ ಮುಂಬೈನ ಪ್ರದರ್ಶನವು ತುಂಬಾ ನಿರಾಶಾದಾಯಕವಾಗಿದೆ. ತಂಡವು ಈಗಾಗಲೇ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿದೆ. ಈ ಸೀಸನ್​ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಸತತ 8 ಪಂದ್ಯಗಳಲ್ಲಿ ಸೋತಿತ್ತು. ಸದ್ಯ ಅಂಕಪಟ್ಟಿಯಲ್ಲಿ ಮುಂಬೈ ತಂಡ 4 ಅಂಕಗಳೊಂದಿಗೆ 10ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ಐಪಿಎಲ್ 2022 ರಲ್ಲಿ ಇದುವರೆಗೆ 11 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 2 ಗೆಲುವು ಮತ್ತು 9 ರಲ್ಲಿ ಸೋತಿದೆ. ಇದೀಗ ಸಿಎಸ್​ಕೆ ತಂಡದ ನಿರ್ಣಾಯಕ ಪಂದ್ಯವು ಪೊಲಾರ್ಡ್ ಅವರ ಹುಟ್ಟುಹಬ್ಬದಂದು ನಡೆಯುತ್ತಿರುವ ಕಾರಣ, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಮುಂಬೈ ಅಭಿಮಾನಿಗಳು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್