IPL 2022: 15ನೇ ಆವೃತ್ತಿಯ ಐಪಿಎಲ್​ಗಾಗಿ ತಂಡದ ನೂತನ ನಾಯಕನನ್ನು ಅಧಿಕೃತವಾಗಿ ಘೋಷಿಸಿದ ಕೆಕೆಆರ್!

IPL 2022: ಕೆಕೆಆರ್​ ಭಾರತದ ಬ್ಯಾಟ್ಸ್‌ಮನ್ ಮತ್ತು ಮಾಜಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್‌ಗೆ ತಂಡದ ನಾಯಕತ್ವವನ್ನು ಹಸ್ತಾಂತರಿಸಿದೆ.

IPL 2022: 15ನೇ ಆವೃತ್ತಿಯ ಐಪಿಎಲ್​ಗಾಗಿ ತಂಡದ ನೂತನ ನಾಯಕನನ್ನು ಅಧಿಕೃತವಾಗಿ ಘೋಷಿಸಿದ ಕೆಕೆಆರ್!
ಕೆಕೆಆರ್ ತಂಡ
Follow us
TV9 Web
| Updated By: ಪೃಥ್ವಿಶಂಕರ

Updated on: Feb 16, 2022 | 5:17 PM

ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ಐಪಿಎಲ್ 2022 ಸೀಸನ್‌ಗೆ ತನ್ನ ಹೊಸ ನಾಯಕನನ್ನು ಘೋಷಿಸಿದೆ. ಕೆಕೆಆರ್​ ಭಾರತದ ಬ್ಯಾಟ್ಸ್‌ಮನ್ ಮತ್ತು ಮಾಜಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್‌ (Shreyas Iyer)ಗೆ ತಂಡದ ನಾಯಕತ್ವವನ್ನು ಹಸ್ತಾಂತರಿಸಿದೆ. ಮೆಗಾ ಹರಾಜಿನಲ್ಲಿ (IPL 2022 Auction) 12.25 ಕೋಟಿಗೆ ಕೆಕೆಆರ್ ಶ್ರೇಯಸ್ ಅವರನ್ನು ಖರೀದಿಸಿತು. ಫೆಬ್ರವರಿ 16 ರಂದು ಬುಧವಾರ ಟ್ವೀಟ್ ಮೂಲಕ ಶ್ರೇಯಸ್ ಅಯ್ಯರ್ ನೇಮಕವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಘೋಷಿಸಿತು. ಕಳೆದ ಋತುವಿನಲ್ಲಿ ತಂಡವನ್ನು ಫೈನಲ್‌ಗೆ ಮುನ್ನಡೆಸಿದ್ದ ಇಯಾನ್ ಮಾರ್ಗನ್ ಅವರ ಸ್ಥಾನವನ್ನು ಅಯ್ಯರ್ ನಿರ್ವಹಿಸಲಿದ್ದಾರೆ. ಆದಾಗ್ಯೂ, ಬ್ಯಾಟಿಂಗ್ ವೈಫಲ್ಯದಿಂದಾಗಿ, ಕೋಲ್ಕತ್ತಾ ಮಾರ್ಗನ್ ಅವರನ್ನು ಉಳಿಸಿಕೊಳ್ಳಲಿಲ್ಲ. ನಂತರ ಈ ಬಾರಿ ಹರಾಜಿನಲ್ಲಿ ಮತ್ತೆ ಖರೀದಿಸಲಿಲ್ಲ.

ಶ್ರೇಯಸ್ ಅಯ್ಯರ್ ಕಳೆದ ಋತುವಿನವರೆಗೆ ಡೆಲ್ಲಿ ಕ್ಯಾಪಿಟಲ್ಸ್‌ನ ಭಾಗವಾಗಿದ್ದರು. 2018 ರ ಋತುವಿನ ಮಧ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅವರನ್ನು ನಾಯಕನನ್ನಾಗಿ ಮಾಡಿತು. ನಂತರ 2020 ರ ಋತುವಿನಲ್ಲಿ, ಅವರು ತಂಡವನ್ನು ಫೈನಲ್‌ಗೆ ಕೊಂಡೊಯ್ದರು. ಶ್ರೇಯಸ್ ನಾಯಕತ್ವದಲ್ಲಿ ದೆಹಲಿ ತಂಡವು ಮೊದಲ ಬಾರಿಗೆ ಐಪಿಎಲ್‌ನ ಫೈನಲ್ ತಲುಪಿತು, ಅಲ್ಲಿ ಮುಂಬೈನಿಂದ ಸೋಲನ್ನು ಎದುರಿಸಬೇಕಾಯಿತು.

ದೆಹಲಿಯಿಂದ ಕೋಲ್ಕತ್ತಾಗೆ

ಆದಾಗ್ಯೂ, ಶ್ರೇಯಸ್ 2021 ರ ಋತುವಿನ ಮುಂಚೆಯೇ ಗಾಯದಿಂದ ಬಳಲುತ್ತಿದ್ದರು, ಇದರಿಂದಾಗಿ ಅವರು ಪಂದ್ಯಾವಳಿಯ ಆರಂಭಿಕ ಭಾಗಕ್ಕೆ ಲಭ್ಯವಿರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ದೆಹಲಿಯು ರಿಷಬ್ ಪಂತ್ ಅವರನ್ನು ನಾಯಕನನ್ನಾಗಿ ಮಾಡಿತು. ಪಂತ್ ನಾಯಕತ್ವದಲ್ಲಿ ತಂಡವು ಪ್ಲೇಆಫ್ ತಲುಪಿತು. ನಂತರ ಪಂತ್ ಅವರನ್ನು ನಾಯಕನಾಗಿ ಇರಿಸಿಕೊಳ್ಳಲು ಡೆಲ್ಲಿ ನಿರ್ಧರಿಸಿತು. ಅಂತಹ ಪರಿಸ್ಥಿತಿಯಲ್ಲಿ, ಶ್ರೇಯಸ್ ದೆಹಲಿಯಿಂದ ಬೇರ್ಪಡಲು ನಿರ್ಧರಿಸಿದರು. IPL 2022 ಹರಾಜಿನಲ್ಲಿ ಅವರ ಮೇಲೆ ಬಲವಾದ ಬಿಡ್ ಮಾಡಲಾಯಿತ್ತು, ಆದರೆ KKR ಅಂತಿಮವಾಗಿ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಯಿತು.

ಟೈಟಲ್‌ಗಾಗಿ ಕಾಯುವಿಕೆ ಕೊನೆಗೊಳ್ಳುತ್ತದೆಯೇ?

ಕೆಕೆಆರ್‌ನ 14 ವರ್ಷಗಳ ಇತಿಹಾಸದಲ್ಲಿ ಶ್ರೇಯಸ್ ಅಯ್ಯರ್ ಆರನೇ ನಾಯಕನಾಗಲಿದ್ದಾರೆ. ಫ್ರಾಂಚೈಸಿಯ ಮೊದಲ ನಾಯಕ ಸೌರವ್ ಗಂಗೂಲಿ, ನಂತರ ಬ್ರೆಂಡನ್ ಮೆಕಲಮ್ ಅವರಿಗೆ ಜವಾಬ್ದಾರಿಯನ್ನು ನೀಡಲಾಯಿತು. ಆದಾಗ್ಯೂ, ಅವರು ಕೂಡ ವಿಫಲರಾದರು. ಗೌತಮ್ ಗಂಭೀರ್ ಅವರಿಗೆ ನಾಯಕತ್ವ ನೀಡಲಾಯಿತು, ಅವರು ದೀರ್ಘಕಾಲದವರೆಗೆ ತಂಡದ ನಾಯಕರಾಗಿದ್ದರು. ಗಂಭೀರ್ ನಾಯಕತ್ವದಲ್ಲಿ ಕೋಲ್ಕತ್ತಾ ತಂಡ 2012 ಮತ್ತು 2014ರಲ್ಲಿ ಪ್ರಶಸ್ತಿ ಗೆದ್ದುಕೊಂಡಿತ್ತು. ನಂತರ ದಿನೇಶ್ ಕಾರ್ತಿಕ್ ಮತ್ತು ಇಯಾನ್ ಮಾರ್ಗನ್ ಅವರಿಗೆ ಜವಾಬ್ದಾರಿ ನೀಡಲಾಯಿತು, ಆದರೆ ಕೆಕೆಆರ್‌ಗೆ ಪ್ರಶಸ್ತಿ ಸಿಗಲಿಲ್ಲ. ಹೀಗಿರುವಾಗ 8 ವರ್ಷಗಳಿಂದ ಕಾಯುತ್ತಿರುವ ಪ್ರಶಸ್ತಿಯನ್ನು ಶ್ರೇಯಸ್‌ ಗೆಲ್ಲಲಿದ್ದಾರೆ ಎಂಬುದು ಫ್ರಾಂಚೈಸಿಯ ನಂಬಿಕೆಯಾಗಿದೆ.

ಇದನ್ನೂ ಓದಿ:ICC T20 Rankings: ಟಿ20 ಶ್ರೇಯಾಂಕದಲ್ಲಿ 2ನೇ ಸ್ಥಾನಕ್ಕೇರಿದ ಆರ್​ಸಿಬಿ ಬೌಲರ್! ಟಾಪ್ 10ರಲ್ಲಿ ಕೊಹ್ಲಿ

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು