AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 KKR vs GT Live Streaming: ಎರಡು ಬಲಿಷ್ಠ ತಂಡಗಳ ಮುಖಾಮುಖಿ; ಪಂದ್ಯದ ಬಗ್ಗೆ ಇಲ್ಲಿದೆ ವಿವರ

IPL 2022 KKR vs GT Live Streaming: ಕೆಕೆಆರ್ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೋತಿದೆ. ವ್ಯತಿರಿಕ್ತವಾಗಿ, ಲೀಗ್‌ನ ಅಗ್ರ ತಂಡವು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಗೆದ್ದು ಬೀಗಿದೆ.

IPL 2022 KKR vs GT Live Streaming: ಎರಡು ಬಲಿಷ್ಠ ತಂಡಗಳ ಮುಖಾಮುಖಿ; ಪಂದ್ಯದ ಬಗ್ಗೆ ಇಲ್ಲಿದೆ ವಿವರ
TV9 Web
| Edited By: |

Updated on: Apr 22, 2022 | 5:16 PM

Share

ಶನಿವಾರ IPL 2022 ರಲ್ಲಿ ಡಬಲ್ ಹೆಡರ್ ದಿನವಾಗಿದೆ. ಅಭಿಮಾನಿಗಳು ಒಂದು ದಿನದಲ್ಲಿ ಎರಡು ಥ್ರಿಲ್ಲರ್‌ ಮ್ಯಾಚ್​ಗಳನ್ನು ನೋಡುವ ಅವಕಾಶವನ್ನು ಪಡೆಯುತ್ತಾರೆ. ಏಪ್ರಿಲ್ 23 ರಂದು, ಮೊದಲ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ಮತ್ತು ಗುಜರಾತ್ ಜೈಂಟ್ಸ್ (Gujarat Giants) ನಡುವೆ ನಡೆಯಲಿದ್ದು, ಎರಡನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ. ಕೆಕೆಆರ್ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೋತಿದೆ. ವ್ಯತಿರಿಕ್ತವಾಗಿ, ಲೀಗ್‌ನ ಅಗ್ರ ತಂಡವು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ಕೊನೆಯ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧವಾಗಿತ್ತು. ಈ ಪಂದ್ಯದಲ್ಲಿ ಡೇವಿಡ್ ಮಿಲ್ಲರ್ 94 ರನ್‌ಗಳ ಇನಿಂಗ್ಸ್ ಆಡಿದರು ಮತ್ತು ರಶೀದ್ ಖಾನ್ (40 ರನ್) ಜೊತೆಗೂಡಿ ಪ್ರಮುಖ ಜೊತೆಯಾಟವನ್ನು ಮಾಡುವ ಮೂಲಕ ತಮ್ಮ ತಂಡಕ್ಕೆ ಜಯ ತಂದುಕೊಟ್ಟರು. ಈ ತಂಡ ಇದುವರೆಗೆ ಆರು ಪಂದ್ಯಗಳನ್ನು ಆಡಿದ್ದು, ಐದರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ರಾಜಸ್ಥಾನ ವಿರುದ್ಧ ಸೋತಿತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲನುಭವಿಸಬೇಕಾಯಿತು. ತಂಡದ ಪರ ಆರೋನ್ ಫಿಂಚ್ 58 ಮತ್ತು ನಾಯಕ ಶ್ರೇಯಸ್ ಅಯ್ಯರ್ 85 ರನ್ ಗಳಿಸಿದರು. ಆದರೆ ಕೆಕೆಆರ್​ಗೆ 217 ರನ್‌ಗಳ ಗುರಿಯನ್ನು ಸಾಧಿಸಲು ಸಾಧ್ಯವಾಗಲಿಲ್ಲ. ಈ ಮೂಲಕ ಎರಡು ಎಸೆತಗಳಿರುವಂತೆ ಆಲೌಟ್ ಆದರು. ಹ್ಯಾಟ್ರಿಕ್ ಸೋಲಿನಿಂದ ಪಾರಾಗಲು ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅತೀ ಮುಖ್ಯವಾಗಿದೆ.

ಪಂದ್ಯದ ಬಗೆಗಿನ ಪೂರ್ಣ ಮಾಹಿತಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ 35 ನೇ ಪಂದ್ಯ ಯಾವಾಗ ನಡೆಯಲಿದೆ? 35 ನೇ ಪಂದ್ಯವು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಶನಿವಾರ, ಏಪ್ರಿಲ್ 23 ರಂದು ನಡೆಯಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯವನ್ನು ಎಲ್ಲಿ ಆಡಲಾಗುತ್ತದೆ? ಮುಂಬೈನ ಡಾ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ನಡೆಯಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ? ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದ ಟಾಸ್ ಮಧ್ಯಾಹ್ನ 3 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ ಮಧ್ಯಾಹ್ನ 03:30 ಕ್ಕೆ ಆರಂಭವಾಗಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು? ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಲೈವ್ ಸ್ಟ್ರೀಮಿಂಗ್ ಅನ್ನು ನಾನು ಆನ್‌ಲೈನ್‌ನಲ್ಲಿ ಎಲ್ಲಿ ವೀಕ್ಷಿಸಬಹುದು? ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯವನ್ನು ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಮೂಲಕ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು.

ಇದನ್ನೂ ಓದಿ:Asian Wrestling Championships 2022: ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್​ನಲ್ಲಿ ಫೈನಲ್‌ ಪ್ರವೇಶಿಸಿದ ಅನ್ಶು ಮಲಿಕ್..!

Follow Us
TV9 Web
TV9 Web

TV9 Kannada

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!