AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಈ ಒಂದು ಕಾರಣಕ್ಕಾಗಿ ನಾನು ಐಪಿಎಲ್ ಪ್ರಶಸ್ತಿಗಳನ್ನು ಗೆಲ್ಲಬೇಕಿದೆ ಎಂದ ರಾಹುಲ್..!

KL Rahul: ನಿಧಾನಗತಿಯ ಓವರ್ ರೇಟ್‌ಗಾಗಿ ರಾಹುಲ್ ಮತ್ತು ಲಕ್ನೋ ತಂಡಕ್ಕೆ ಐಪಿಎಲ್ ಆಡಳಿತ ಮಂಡಳಿ ದಂಡ ವಿಧಿಸಿದೆ. ಹೀಗಾಗುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮುನ್ನ ಮುಂಬೈ ವಿರುದ್ಧದ ಪಂದ್ಯದಲ್ಲಿ ರಾಹುಲ್ ಮತ್ತು ಲಕ್ನೋ ತಂಡಕ್ಕೆ ನಿಧಾನಗತಿಯ ಓವರ್ ರೇಟ್‌ಗಾಗಿ ದಂಡ ವಿಧಿಸಲಾಗಿತ್ತು

IPL 2022: ಈ ಒಂದು ಕಾರಣಕ್ಕಾಗಿ ನಾನು ಐಪಿಎಲ್ ಪ್ರಶಸ್ತಿಗಳನ್ನು ಗೆಲ್ಲಬೇಕಿದೆ ಎಂದ ರಾಹುಲ್..!
ಕೆ ಎಲ್ ರಾಹುಲ್
TV9 Web
| Edited By: |

Updated on: Apr 25, 2022 | 4:18 PM

Share

15ನೇ ಅವೃತ್ತಿಯ(IPL 2022) ಐಪಿಎಲ್​ನ ಭಾನುವಾರ ನಡೆದ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್ ಈ ಆವೃತ್ತಿಯ ಮತ್ತೊಂದು ಸೋಲನ್ನು ಎದುರಿಸಬೇಕಾಗಿಯಿತು. ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) 36 ರನ್‌ಗಳಿಂದ ರೋಹಿತ್ ಬಳಗವನ್ನು ಸೋಲಿಸಿತು. ಈ ಸೀಸನ್​ನಲ್ಲಿ ಮುಂಬೈಗೆ ಇದು ಸತತ ಎಂಟನೇ ಸೋಲು. ಲಕ್ನೋ ನಾಯಕ ಕೆಎಲ್ ರಾಹುಲ್ (KL Rahul) ಅವರ ಶತಕ ಇನಿಂಗ್ಸ್ ಮುಂಬೈ ತಂಡವನ್ನು ಸೋಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ರಾಹುಲ್ ಅಜೇಯ 103 ರನ್ ಗಳಿಸಿ, ಒಂದು ತುದಿಯಲ್ಲಿ ಭದ್ರವಾಗಿ ನಿಂತು ಲಕ್ನೋ ಗೌರವಾನ್ವಿತ ಸ್ಕೋರ್ (168 ರನ್) ಗಳಿಸುವಂತೆ ಮಾಡಿದರು. ರಾಹುಲ್ ತಮ್ಮ ಇನ್ನಿಂಗ್ಸ್‌ಗಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಅದರೆ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ಯಶಸ್ವಿಯಾದ ರಾಹುಲ್​ಗೆ ಪಂದ್ಯ ಮುಗಿದ ಬಳಿಕ ಐಪಿಎಲ್ ಮಂಡಳಿ ಬರೋಬ್ಬರಿ 24 ಲಕ್ಷ ರೂ. ದಂಡ ವಿಧಿಸಿದೆ.

ನಿಧಾನಗತಿಯ ಓವರ್ ರೇಟ್‌ಗಾಗಿ ರಾಹುಲ್ ಮತ್ತು ಲಕ್ನೋ ತಂಡಕ್ಕೆ ಐಪಿಎಲ್ ಆಡಳಿತ ಮಂಡಳಿ ದಂಡ ವಿಧಿಸಿದೆ. ಹೀಗಾಗುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮುನ್ನ ಮುಂಬೈ ವಿರುದ್ಧ ನಡೆದ ಪಂದ್ಯದಲ್ಲಿ ರಾಹುಲ್ ಮತ್ತು ಲಕ್ನೋ ತಂಡಕ್ಕೆ ನಿಧಾನಗತಿಯ ಓವರ್ ರೇಟ್‌ಗಾಗಿ ದಂಡ ವಿಧಿಸಲಾಗಿತ್ತು. ಪಂದ್ಯದ ನಂತರ ರಾಹುಲ್ ಈ ಬಗ್ಗೆ ತಮ್ಮ ನೋವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿದರು.

ಫೈನ್ ಕಟ್ಟಲು ಈ ಪ್ರಶಸ್ತಿಗಳನ್ನು ಗೆಲ್ಲಬೇಕಿದೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ನಂತರ ಮಾತನಾಡಿದ ರಾಹುಲ್, ನಿಧಾನಗತಿಯ ಓವರ್ ರೇಟ್‌ನಿಂದ ವಿಧಿಸಲಾದ ದಂಡವನ್ನು ಕಟ್ಟಲು ನಾನು ಈ ರೀತಿಯ ಪ್ರಶಸ್ತಿಗಳನ್ನು ಗೆಲ್ಲಬೇಕು. ನನ್ನ ಪ್ರಶಸ್ತಿಗಳೊಂದಿಗೆ ನನಗೆ ವಿಧಿಸಿರುವ ದಂಡವನ್ನು ಸರಿದೂಗಿಸಬೇಕಾಗಿದೆ ಎಂದರು.

ಬ್ಯಾಟಿಂಗ್ ಕುರಿತು ಮಾತನಾಡಿದ ರಾಹುಲ್, ನಾನು ಸಂದರ್ಭಕ್ಕೆ ತಕ್ಕಂತೆ ಆಡಲು ಬಯಸಿದೆ. ನಾನು ಆಟವನ್ನು ಹಾಗೂ ನನಗೆ ನೀಡಿರುವ ಜವಾಬ್ದಾರಿಯಲ್ಲಿ ಎಂಜಾಯ್ ಮಾಡುತ್ತೇನೆ. ಪಿಚ್​ನ ಪರಿಸ್ಥಿತಿ ಅರಿತು ತಂಡಕ್ಕೆ ಏನು ಕೊಡುಗೆ ನೀಡಬೇಕು ಅದನ್ನು ಕೊಟ್ಟೆ. ನಮ್ಮ ಬ್ಯಾಟಿಂಗ್ ವಿಭಾಗ ಕೊನೆಯ ಹಂತದ ವರೆಗಿದೆ. ಹೀಗಾಗಿ ಒತ್ತಡವಿಲ್ಲದೆ ಕೊಂಚ ಆರಾಮವಾಗಿ ಆಡಲು ಸಾಧ್ಯವಾಗುತ್ತದೆ. ಈ ಪಂದ್ಯದ ಪವರ್ ಪ್ಲೇನಲ್ಲಿ ಮಧ್ಯಮ ಓವರ್ ಮತ್ತು ಡೆತ್ ಓವರ್​ನಲ್ಲಿ ನಮ್ಮ ಬೌಲರ್​ಗಳು ಅತ್ಯುತ್ತಮ ಪ್ರದರ್ಶನ ತೋರಿದರು, ಎಂದು ರಾಹುಲ್ ಹೇಳಿದರು.

ಪಂದ್ಯ ಹೀಗಿತ್ತು ಮುಂಬೈ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮುಂಬೈ ತಂಡವು ಉತ್ತಮವಾಗಿ ಬೌಲಿಂಗ್ ಮಾಡಿದರೂ ರಾಹುಲ್ ಒಂದು ತುದಿಯಲ್ಲಿ ಭದ್ರವಾಗಿ ಬೇರೂರಿ, ಕೊನೆಯ ಓವರ್‌ನಲ್ಲಿ ಸಿಕ್ಸರ್‌ನೊಂದಿಗೆ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ, ರಾಹುಲ್ 62 ಎಸೆತಗಳನ್ನು ಎದುರಿಸಿ 12 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದರು. ಇವರನ್ನು ಬಿಟ್ಟರೆ ಬೇರೆ ಯಾವುದೇ ಬ್ಯಾಟ್ಸ್‌ಮನ್‌ಗಳು ತಂಡಕ್ಕೆ ಗಣನೀಯ ಕೊಡುಗೆ ನೀಡಲು ಸಾಧ್ಯವಾಗಲಿಲ್ಲ. 22 ರನ್ ಗಳಿಸಿದ ಮನೀಶ್ ಪಾಂಡೆ ತಂಡದ ಪರ ಎರಡನೇ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ದೀಪಕ್ ಹೂಡಾ 10 ಮತ್ತು ಆಯುಷ್ ಬಡೋನಿ 14 ರನ್ ಗಳಿಸಿದರು.

ಆದರೆ ಮುಂಬೈ ತಂಡ ಉತ್ತಮ ಆರಂಭದ ಹೊರತಾಗಿತಯೂ ಈ ಗುರಿ ಸಾಧಿಸಲು ಸಾಧ್ಯವಾಗಲಿಲ್ಲ. ಪೂರ್ಣ 20 ಓವರ್‌ಗಳನ್ನು ಆಡಿದ ನಂತರವೂ ಮುಂಬೈಗೆ ಗೆಲುವು ಸಿಗಲಿಲ್ಲ. ರೋಹಿತ್ ಶರ್ಮಾ ತಂಡದ ಪರವಾಗಿ ಹೆಚ್ಚು ರನ್ ಗಳಿಸಿದ ಆಟಗಾರನೆನಿಸಿಕೊಂಡರು. ರೋಹಿತ್ 31 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 39 ರನ್ ಗಳಿಸಿದರು. ತಿಲಕ್ ವರ್ಮಾ 38 ರನ್ ಗಳಿಸಿದರು. ಕೀರಾನ್ ಪೊಲಾರ್ಡ್ 19 ರನ್ ಗಳಿಸಿದರು.

ಇದನ್ನೂ ಓದಿ:Highest Earners in IPL: ಧೋನಿಯಿಂದ ರೋಹಿತ್​ವರೆಗೆ; ಐಪಿಎಲ್​ನಲ್ಲಿ ಅತಿ ಹೆಚ್ಚು ಆದಾಯ ಗಳಿಸಿದ ಆಟಗಾರರಿವರು

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು