AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಅಭಿಮಾನಿಗಳಿಗೆ ಬಿಗ್ ಶಾಕ್: ಐಪಿಎಲ್​ನಿಂದ ಹಿಂದೆ ಸರಿದ ಮಾಜಿ RCB ಬೌಲರ್

IPL 2022 Mega Auction: ಇಂಗ್ಲೆಂಡ್ ಆಲ್​ರೌಂಡರ್ ಬೆನ್​ ಸ್ಟೋಕ್ಸ್​ ಅವರನ್ನು ಈ ಬಾರಿ ರಾಜಸ್ಥಾನ್ ರಾಯಲ್ಸ್ ಬಿಡುಗಡೆ ಮಾಡಿತ್ತು. ಇನ್ನು ಆ್ಯಶಸ್ ಸರಣಿ ಮೂಲಕ ಕಂಬ್ಯಾಕ್ ಮಾಡಿದ್ದ ಸ್ಟೋಕ್ಸ್​ ಇದೀಗ ಟೆಸ್ಟ್​ ಕ್ರಿಕೆಟ್​ನತ್ತ ಹೆಚ್ಚಿನ ಗಮನ ಕೇಂದ್ರೀಕರಿಸಲು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

IPL 2022: ಅಭಿಮಾನಿಗಳಿಗೆ ಬಿಗ್ ಶಾಕ್: ಐಪಿಎಲ್​ನಿಂದ ಹಿಂದೆ ಸರಿದ ಮಾಜಿ RCB ಬೌಲರ್
Kyle Jamieson
Follow us
TV9 Web
| Updated By: ಝಾಹಿರ್ ಯೂಸುಫ್

Updated on:Feb 01, 2022 | 4:00 PM

ಐಪಿಎಲ್ ಮೆಗಾ ಹರಾಜಿನ ಅಂತಿಮ ಪಟ್ಟಿ ಬಿಡುಗಡೆಯಾಗಿದೆ. ಈ ಹಿಂದೆ ಹೆಸರು ನೋಂದಾಯಿಸಿಕೊಂಡಿದ್ದ 1214 ಆಟಗಾರರ ಶಾರ್ಟ್​ ಲೀಸ್ಟ್ ಮಾಡಲಾಗಿದ್ದು, ಅದರಂತೆ ಮೆಗಾ ಹರಾಜಿನಲ್ಲಿ ಕೇವಲ 590 ಆಟಗಾರರು ಮಾತ್ರ ಇರಲಿದ್ದಾರೆ. ಈ ಪಟ್ಟಿಯಲ್ಲಿ 370 ಭಾರತೀಯ ಕ್ರಿಕೆಟಿಗರಿದ್ದರೆ, 220 ವಿದೇಶಿ ಆಟಗಾರರಿಗೆ ಅವಕಾಶ ನೀಡಲಾಗಿದೆ. ಇದರಲ್ಲಿ ನ್ಯೂಜಿಲೆಂಡ್​ನ 24 ಆಟಗಾರರು ಸ್ಥಾನ ಪಡೆದಿದ್ದಾರೆ. ಆದರೆ ಈ ಪಟ್ಟಿಯಲ್ಲಿ ಮಾಜಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಕೈಲ್ ಜೇಮಿಸನ್ ಹೆಸರು ಇಲ್ಲ ಎಂಬುದೇ ವಿಶೇಷ.

ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ 15 ಕೋಟಿ ರೂ.ಗೆ ಆಡಿದ್ದ ಕೈಲ್ ಜೇಮಿಸನ್ ಈ ಬಾರಿ ಹೆಸರು ನೀಡಿಲ್ಲ ಎಂಬುದೇ ಅಚ್ಚರಿ. ಏಕೆಂದರೆ ನ್ಯೂಜಿಲೆಂಡ್​ನಿಂದ ಒಟ್ಟು 24 ಆಟಗಾರರು ಆಯ್ಕೆಯಾಗಿದ್ದು, ಆದರೆ ಈ ಪಟ್ಟಿಯಲ್ಲಿ ಜೇಮಿಸನ್ ಹೆಸರು ಕಾಣಿಸುತ್ತಿಲ್ಲ. ಹೀಗಾಗಿ ಜೇಮಿಸನ್ ಈ ಸಲ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

ಹಾಗೆಯೇ ಮುಂಬರುವ ಮೆಗಾ ಹರಾಜಿಗೆ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಕೂಡ ಹೆಸರು ನೀಡಿಲ್ಲ. ಇದರೊಂದಿಗೆ ಗೇಲ್ ಅವರ ಐಪಿಎಲ್ ಯುಗಾಂತ್ಯವಾಗಿದೆ. ಈ ಹಿಂದೆ ಕೋಲ್ಕತ್ತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ಪರ ಆಡಿರುವ ಗೇಲ್ ಕಳೆದ 14 ಸೀಸನ್​ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದರು ಎಂಬುದು ವಿಶೇಷ.

ಗಾಯದ ಕಾರಣ ಕಳೆದ ಸೀಸನ್ ಐಪಿಎಲ್​ನಿಂದ ಹೊರಗುಳಿದಿದ್ದ ಇಂಗ್ಲೆಂಡ್ ಆಲ್​ರೌಂಡರ್ ಬೆನ್​ ಸ್ಟೋಕ್ಸ್​ ಅವರನ್ನು ಈ ಬಾರಿ ರಾಜಸ್ಥಾನ್ ರಾಯಲ್ಸ್ ಬಿಡುಗಡೆ ಮಾಡಿತ್ತು. ಇನ್ನು ಆ್ಯಶಸ್ ಸರಣಿ ಮೂಲಕ ಕಂಬ್ಯಾಕ್ ಮಾಡಿದ್ದ ಸ್ಟೋಕ್ಸ್​ ಇದೀಗ ಟೆಸ್ಟ್​ ಕ್ರಿಕೆಟ್​ನತ್ತ ಹೆಚ್ಚಿನ ಗಮನ ಕೇಂದ್ರೀಕರಿಸಲು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಜೊತೆಗೆ 2021ರ ಐಪಿಎಲ್​ನಲ್ಲಿ ಸಿಎಸ್​ಕೆ ತಂಡದ ಆಲ್​ರೌಂಡರ್ ಆಗಿ ಗುರುತಿಸಿಕೊಂಡಿದ್ದ ಇಂಗ್ಲೆಂಡ್ ಆಟಗಾರ ಸ್ಯಾಮ್ ಕರನ್ ಕೂಡ ಫಿಟ್​ನೆಸ್ ಸಮಸ್ಯೆಯಿಂದಾಗಿ ಮುಂದಿನ ಸೀಸನ್​ ಐಪಿಎಲ್​ನಿಂದ ಹೊರಗುಳಿದಿದ್ದಾರೆ.

ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್​ ಕೂಡ ಈ ಬಾರಿ ಹೆಸರು ನೋಂದಣಿ ಮಾಡಿಕೊಂಡಿಲ್ಲ. 2018 ರ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಸ್ಟಾರ್ಕ್​ ಅವರನ್ನು ಕೆಕೆಆರ್ ಖರೀದಿಸಿತ್ತು. ಆದರೆ ಗಾಯದ ಕಾರಣ ಐಪಿಎಲ್​ನಿಂದ ಹಿಂದೆ ಸರಿದಿದ್ದರು. ಇದಾದ ಬಳಿಕ ಸ್ಟಾರ್ಕ್ ಐಪಿಎಲ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಾಗ್ಯೂ ಈ ಬಾರಿ ಹೆಸರು ನೀಡಲಿದ್ದಾರೆ ಎನ್ನಲಾಗಿತ್ತು. ಆದರೀಗ ಈ ಬಾರಿ ಕೂಡ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಇಂಗ್ಲೆಂಡ್ ಆಲ್​ರೌಂಡರ್ ಕ್ರಿಸ್ ವೋಕ್ಸ್ ಈ ಹಿಂದೆ ಆರ್​ಸಿಬಿ, ಕೆಕೆಆರ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದರು. ಆದರೆ ಗಾಯದ ಕಾರಣ ವೋಕ್ಸ್ ಕಳೆದ ಕೆಲ ಸೀಸನ್​ಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಾಗ್ಯೂ ಈ ಬಾರಿ ಕ್ರಿಸ್ ವೋಕ್ಸ್ ಹೆಸರು ನೀಡಲಿದ್ದಾರೆ ಎನ್ನಲಾಗಿತ್ತು. ಆದರೆ ಅಂತಿಮ ಕ್ಷಣದಲ್ಲಿ ಕ್ರಿಸ್ ವೋಕ್ಸ್ ಕೂಡ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

ಇದನ್ನೂ ಓದಿ: IPL 2022: ಮೆಗಾ ಹರಾಜಿನಲ್ಲಿ 590 ಆಟಗಾರರು: ಯಾವ ದೇಶದಿಂದ ಎಷ್ಟು ಆಟಗಾರರು? ಇಲ್ಲಿದೆ ಸಂಪೂರ್ಣ ಪಟ್ಟಿ

ಇದನ್ನೂ ಓದಿ: Jason Holder: ಡಬಲ್ ಹ್ಯಾಟ್ರಿಕ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಜೇಸನ್ ಹೋಲ್ಡರ್

(IPL 2022: Kyle Jamieson pulled out of ipl mega auction)

Published On - 3:59 pm, Tue, 1 February 22

ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು