ಐಪಿಎಲ್ ಮೆಗಾ ಹರಾಜಿನ ಅಂತಿಮ ಪಟ್ಟಿ ಬಿಡುಗಡೆಯಾಗಿದೆ. ಈ ಹಿಂದೆ ಹೆಸರು ನೋಂದಾಯಿಸಿಕೊಂಡಿದ್ದ 1214 ಆಟಗಾರರ ಶಾರ್ಟ್ ಲೀಸ್ಟ್ ಮಾಡಲಾಗಿದ್ದು, ಅದರಂತೆ ಮೆಗಾ ಹರಾಜಿನಲ್ಲಿ ಕೇವಲ 590 ಆಟಗಾರರು ಮಾತ್ರ ಇರಲಿದ್ದಾರೆ. ಈ ಪಟ್ಟಿಯಲ್ಲಿ 370 ಭಾರತೀಯ ಕ್ರಿಕೆಟಿಗರಿದ್ದರೆ, 220 ವಿದೇಶಿ ಆಟಗಾರರಿಗೆ ಅವಕಾಶ ನೀಡಲಾಗಿದೆ. ಇದರಲ್ಲಿ ನ್ಯೂಜಿಲೆಂಡ್ನ 24 ಆಟಗಾರರು ಸ್ಥಾನ ಪಡೆದಿದ್ದಾರೆ. ಆದರೆ ಈ ಪಟ್ಟಿಯಲ್ಲಿ ಮಾಜಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಕೈಲ್ ಜೇಮಿಸನ್ ಹೆಸರು ಇಲ್ಲ ಎಂಬುದೇ ವಿಶೇಷ.
ಕಳೆದ ಸೀಸನ್ನಲ್ಲಿ ಆರ್ಸಿಬಿ ಪರ 15 ಕೋಟಿ ರೂ.ಗೆ ಆಡಿದ್ದ ಕೈಲ್ ಜೇಮಿಸನ್ ಈ ಬಾರಿ ಹೆಸರು ನೀಡಿಲ್ಲ ಎಂಬುದೇ ಅಚ್ಚರಿ. ಏಕೆಂದರೆ ನ್ಯೂಜಿಲೆಂಡ್ನಿಂದ ಒಟ್ಟು 24 ಆಟಗಾರರು ಆಯ್ಕೆಯಾಗಿದ್ದು, ಆದರೆ ಈ ಪಟ್ಟಿಯಲ್ಲಿ ಜೇಮಿಸನ್ ಹೆಸರು ಕಾಣಿಸುತ್ತಿಲ್ಲ. ಹೀಗಾಗಿ ಜೇಮಿಸನ್ ಈ ಸಲ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.
ಹಾಗೆಯೇ ಮುಂಬರುವ ಮೆಗಾ ಹರಾಜಿಗೆ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಕೂಡ ಹೆಸರು ನೀಡಿಲ್ಲ. ಇದರೊಂದಿಗೆ ಗೇಲ್ ಅವರ ಐಪಿಎಲ್ ಯುಗಾಂತ್ಯವಾಗಿದೆ. ಈ ಹಿಂದೆ ಕೋಲ್ಕತ್ತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ಪರ ಆಡಿರುವ ಗೇಲ್ ಕಳೆದ 14 ಸೀಸನ್ ಐಪಿಎಲ್ನಲ್ಲಿ ಕಾಣಿಸಿಕೊಂಡಿದ್ದರು ಎಂಬುದು ವಿಶೇಷ.
ಗಾಯದ ಕಾರಣ ಕಳೆದ ಸೀಸನ್ ಐಪಿಎಲ್ನಿಂದ ಹೊರಗುಳಿದಿದ್ದ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು ಈ ಬಾರಿ ರಾಜಸ್ಥಾನ್ ರಾಯಲ್ಸ್ ಬಿಡುಗಡೆ ಮಾಡಿತ್ತು. ಇನ್ನು ಆ್ಯಶಸ್ ಸರಣಿ ಮೂಲಕ ಕಂಬ್ಯಾಕ್ ಮಾಡಿದ್ದ ಸ್ಟೋಕ್ಸ್ ಇದೀಗ ಟೆಸ್ಟ್ ಕ್ರಿಕೆಟ್ನತ್ತ ಹೆಚ್ಚಿನ ಗಮನ ಕೇಂದ್ರೀಕರಿಸಲು ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ. ಜೊತೆಗೆ 2021ರ ಐಪಿಎಲ್ನಲ್ಲಿ ಸಿಎಸ್ಕೆ ತಂಡದ ಆಲ್ರೌಂಡರ್ ಆಗಿ ಗುರುತಿಸಿಕೊಂಡಿದ್ದ ಇಂಗ್ಲೆಂಡ್ ಆಟಗಾರ ಸ್ಯಾಮ್ ಕರನ್ ಕೂಡ ಫಿಟ್ನೆಸ್ ಸಮಸ್ಯೆಯಿಂದಾಗಿ ಮುಂದಿನ ಸೀಸನ್ ಐಪಿಎಲ್ನಿಂದ ಹೊರಗುಳಿದಿದ್ದಾರೆ.
ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಕೂಡ ಈ ಬಾರಿ ಹೆಸರು ನೋಂದಣಿ ಮಾಡಿಕೊಂಡಿಲ್ಲ. 2018 ರ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಸ್ಟಾರ್ಕ್ ಅವರನ್ನು ಕೆಕೆಆರ್ ಖರೀದಿಸಿತ್ತು. ಆದರೆ ಗಾಯದ ಕಾರಣ ಐಪಿಎಲ್ನಿಂದ ಹಿಂದೆ ಸರಿದಿದ್ದರು. ಇದಾದ ಬಳಿಕ ಸ್ಟಾರ್ಕ್ ಐಪಿಎಲ್ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಾಗ್ಯೂ ಈ ಬಾರಿ ಹೆಸರು ನೀಡಲಿದ್ದಾರೆ ಎನ್ನಲಾಗಿತ್ತು. ಆದರೀಗ ಈ ಬಾರಿ ಕೂಡ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.
ಇಂಗ್ಲೆಂಡ್ ಆಲ್ರೌಂಡರ್ ಕ್ರಿಸ್ ವೋಕ್ಸ್ ಈ ಹಿಂದೆ ಆರ್ಸಿಬಿ, ಕೆಕೆಆರ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದರು. ಆದರೆ ಗಾಯದ ಕಾರಣ ವೋಕ್ಸ್ ಕಳೆದ ಕೆಲ ಸೀಸನ್ಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಾಗ್ಯೂ ಈ ಬಾರಿ ಕ್ರಿಸ್ ವೋಕ್ಸ್ ಹೆಸರು ನೀಡಲಿದ್ದಾರೆ ಎನ್ನಲಾಗಿತ್ತು. ಆದರೆ ಅಂತಿಮ ಕ್ಷಣದಲ್ಲಿ ಕ್ರಿಸ್ ವೋಕ್ಸ್ ಕೂಡ ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ.
ಇದನ್ನೂ ಓದಿ: IPL 2022: ಮೆಗಾ ಹರಾಜಿನಲ್ಲಿ 590 ಆಟಗಾರರು: ಯಾವ ದೇಶದಿಂದ ಎಷ್ಟು ಆಟಗಾರರು? ಇಲ್ಲಿದೆ ಸಂಪೂರ್ಣ ಪಟ್ಟಿ
ಇದನ್ನೂ ಓದಿ: Jason Holder: ಡಬಲ್ ಹ್ಯಾಟ್ರಿಕ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಜೇಸನ್ ಹೋಲ್ಡರ್
(IPL 2022: Kyle Jamieson pulled out of ipl mega auction)
Published On - 3:59 pm, Tue, 1 February 22