LSG Vs CSK Playing XI: ಸಿಎಸ್ಕೆ ತಂಡಕ್ಕೆ ಸ್ಟಾರ್ ಆಟಗಾರ ಕಂಬ್ಯಾಕ್: ಉಭಯ ತಂಡಗಳ ಪ್ಲೇಯಿಂಗ್ 11
IPL 2022 LSG Vs CSK Playing XI: ಮೊದಲ ಪಂದ್ಯದಲ್ಲಿ ಲಕ್ನೋ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ವಿಫಲವಾಗಿದ್ದು, ಹಾಗೆಯೇ ವೇಗದ ಬೌಲರ್‌ಗಳು ನಿರಾಸೆ ಮೂಡಿಸಿದರು.

ಐಪಿಎಲ್ 15ನೇ ಸೀಸನ್ ನ ಏಳನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದೆ. ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಉಭಯ ತಂಡಗಳು ಗೆಲುವಿನ ಖಾತೆ ತೆರೆಯಬೇಕಿದೆ. ಏಕೆಂದರೆ ಮೊದಲ ಪಂದ್ಯದಲ್ಲಿ ಸಿಎಸ್ಕೆ ತಂಡವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಸೋಲಿಸಿತ್ತು. ಹಾಗೆಯೇ ಲಕ್ನೋ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಸೋತಿತ್ತು. ಹೀಗಾಗಿ ಉಭಯ ತಂಡಗಳಿಗೂ ಗೆಲುವು ಅನಿವಾರ್ಯ. ಅದಕ್ಕಾಗಿ ಎರಡೂ ತಂಡಗಳು ಬಲಿಷ್ಠ ಪ್ಲೇಯಿಂಗ್ 11 ಅನ್ನು ಕಣಕ್ಕಿಳಿಸಲಿದೆ.
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಈ ಬಾರಿ ಕೂಡ ಗಾಯಗೊಂಡಿರುವ ವೇಗದ ಬೌಲರ್ ದೀಪಕ್ ಚಹಾರ್ ಆಡುವುದಿಲ್ಲ. ಕಳೆದ ಪಂದ್ಯದಲ್ಲಿ ಆಡದ ಮೊಯೀನ್ ಅಲಿ ವಾಪಸಾಗುವುದು ಖಚಿತವಾಗಿದೆ. ಹೀಗಾಗಿ ಮಿಚೆಲ್ ಸ್ಯಾಂಟ್ನರ್ ಬದಲಿಗೆ ಮೊಯೀನ್ ಅಲಿಗೆ ಅವಕಾಶ ಸಿಗಬಹುದು. ಏಕೆಂದರೆ ಎಡಗೈ ಸ್ಪಿನ್ನರ್ ಸ್ಯಾಂಟ್ನರ್ ಬದಲಿಗೆ ಮೊಯೀನ್ ಅಲಿ ಅವರನ್ನು ತಂಡಕ್ಕೆ ಸೇರಿಸಿಕೊಂಡರೆ, ತಂಡವು ಒಬ್ಬ ಎಡಗೈ ಮತ್ತು ಬಲಗೈ ಸ್ಪಿನ್ನರ್ ಅನ್ನು ಹೊಂದಿರಲಿದೆ. ಹೀಗಾಗಿ ಮೊಯೀನ್ ಅಲಿ ಪ್ಲೇಯಿಂಗ್ 11 ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದೇ ಹೇಳಬಹುದು.
ಮತ್ತೊಂದೆಡೆ ಮೊದಲ ಪಂದ್ಯದಲ್ಲಿ ಲಕ್ನೋ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ವಿಫಲವಾಗಿದ್ದು, ಹಾಗೆಯೇ ವೇಗದ ಬೌಲರ್‌ಗಳು ನಿರಾಸೆ ಮೂಡಿಸಿದರು. ಲಕ್ನೋದ ಇಬ್ಬರು ಪ್ರಮುಖ ವಿದೇಶಿ ಆಟಗಾರರಾದ ಮಾರ್ಕಸ್ ಸ್ಟೋನಿಸ್ ಮತ್ತು ಜೇಸನ್ ಹೋಲ್ಡರ್ ಇನ್ನೂ ತಂಡ ಸೇರಿಕೊಂಡಿಲ್ಲ. ಸ್ಟೊಯಿನಿಸ್ ಪ್ರಸ್ತುತ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಸೀಮಿತ ಓವರ್‌ಗಳ ಸರಣಿಯಲ್ಲಿ ಆಡುತ್ತಿದ್ದಾರೆ. ಅದೇ ಸಮಯದಲ್ಲಿ, ಹೋಲ್ಡರ್ ಇನ್ನೂ ಬಯೋ-ಬಬಲ್ ಅನ್ನು ಪ್ರವೇಶಿಸಿಲ್ಲ.
ಸ್ಟೊಯಿನಿಸ್ ಮತ್ತು ಹೋಲ್ಡರ್ ಹೊರತುಪಡಿಸಿ, ಮಾರ್ಕ್ ವುಡ್ ಬದಲಿಗೆ ತಂಡಕ್ಕೆ ಸೇರ್ಪಡೆಗೊಂಡಿರುವ ಆಂಡ್ರ್ಯೂ ಟೈ ಅವರ ಲಭ್ಯತೆ ಸ್ಪಷ್ಟವಾಗಿಲ್ಲ. ಟೈ ಆಡಲು ಲಭ್ಯವಿದ್ದರೆ, ತಂಡ ಖಂಡಿತವಾಗಿಯೂ ಅವರನ್ನು ಪ್ಲೇಯಿಂಗ್-11 ರಲ್ಲಿ ಕಾಣಿಸಿಕೊಳ್ಳಬಹುದು. ಕ್ವಿಂಟನ್ ಡಿ ಕಾಕ್, ದುಷ್ಮಂತ ಚಮೀರ ಮತ್ತು ಎವಿನ್ ಲೂಯಿಸ್ ಕಳೆದ ಪಂದ್ಯದಲ್ಲಿ ಮೂವರು ವಿದೇಶಿ ಆಟಗಾರರನ್ನು ಆಡಿದ್ದರು. ಟೈ ಹಿಂತಿರುಗಿದ ಮೇಲೆ ಮೊಹ್ಸಿನ್ ಖಾನ್ ಹೊರಗುಳಿಯಬೇಕಾಗಬಹುದು. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿರಲಿದೆ.
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ಪ್ಲೇಯಿಂಗ್ 11: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಮೊಯೀನ್ ಅಲಿ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ರವೀಂದ್ರ ಜಡೇಜಾ (ನಾಯಕ), ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್), ಶಿವಂ ದುಬೆ, ಡ್ವೇನ್ ಬ್ರಾವೋ, ಆಡಮ್ ಮಿಲ್ನೆ ಮತ್ತು ತುಷಾರ್ ದೇಶಪಾಂಡೆ.
ಲಕ್ನೋ ಸೂಪರ್ ಜೈಂಟ್ಸ್ ಸಂಭಾವ್ಯ ಪ್ಲೇಯಿಂಗ್ 11: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಎವಿನ್ ಲೂಯಿಸ್, ಮನೀಶ್ ಪಾಂಡೆ, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಮೊಹ್ಸಿನ್ ಖಾನ್, ರವಿ ಬಿಷ್ಣೋಯ್, ಅವೇಶ್ ಖಾನ್, ದುಷ್ಮಂತ ಚಮೀರಾ.
ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?
ಇದನ್ನೂ ಓದಿ: IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು




