ಐಪಿಎಲ್ 2022 (IPL 2022) ನಲ್ಲಿ, ಸತತ ಎರಡು ಗೆಲುವುಗಳನ್ನು ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಗುರುವಾರ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಕೆಎಲ್ ರಾಹುಲ್ (KL Rahul) ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ತನ್ನ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಆದಾಗ್ಯೂ, ಇದರ ನಂತರ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ನಂತರ ಸನ್ ರೈಸರ್ಸ್ ಹೈದರಾಬಾದ್ ಮಣಿಸಿ ಆತ್ಮವಿಶ್ವಾಸದಲ್ಲಿ ಬೀಗುತ್ತಿದೆ. ಮತ್ತೊಂದೆಡೆ, ರಿಷಬ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸುವ ಮೂಲಕ ಅಭಿಯಾನವನ್ನು ಪ್ರಾರಂಭಿಸಿತು. ಆದರೆ ಕೊನೆಯ ಪಂದ್ಯದಲ್ಲಿ ಗುಜರಾತ್ ಎದುರು ಅವರು ಸೋಲನ್ನು ಎದುರಿಸಬೇಕಾಯಿತು.
ಗುಜರಾತ್ ಟೈಟಾನ್ಸ್ ವಿರುದ್ಧ 14 ರನ್‌ಗಳ ಸೋಲಿಗೆ ಬ್ಯಾಟ್ಸ್‌ಮನ್‌ಗಳನ್ನು ದೂಷಿಸಿದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್, ಪಿಚ್ ಅನ್ನು ಪರಿಗಣಿಸಿ ನಾವು ಗೆಲುವನ್ನು ಸಾಧಿಸಬಹುದಿತ್ತು ಎಂದು ಹೇಳಿದರು. ಟೈಟಾನ್ಸ್‌ಗೆ 172 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ತಂಡ ಫರ್ಗುಸನ್ (28ಕ್ಕೆ 4) ಮತ್ತು ಮೊಹಮ್ಮದ್ ಶಮಿ (30ಕ್ಕೆ 2) ಅವರ ತೀಕ್ಷ್ಣ ಬೌಲಿಂಗ್‌ನ ಮುಂದೆ 9 ವಿಕೆಟ್‌ಗೆ 157 ರನ್ ಗಳಿಸಲಷ್ಟೇ ಶಕ್ತವಾಯಿತು. ಡೆಲ್ಲಿ ಪರ ಪಂತ್ 43 ರನ್ ಗಳಿಸಿದರು.
ಹೈದರಾಬಾದ್ಗೂ ಸೋಲಿನ ರುಚಿ ನಾಯಕ ಲೋಕೇಶ್ ರಾಹುಲ್ (68) ಮತ್ತು ದೀಪಕ್ ಹೂಡಾ (51) ಅವರ ಅರ್ಧಶತಕಗಳ ನೆರವಿನಿಂದ ಸೋಮವಾರ ಲಕ್ನೋ ಸೂಪರ್ ಜೈಂಟ್ಸ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 12 ರನ್ ಗಳಿಂದ ಸತತ ಎರಡನೇ ಗೆಲುವು ದಾಖಲಿಸಿತು. ಹಿಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದ್ದ ಲಕ್ನೋ ಸೂಪರ್ ಜೈಂಟ್ಸ್, ನಾಯಕ ರಾಹುಲ್ (50 ಎಸೆತಗಳಲ್ಲಿ ಆರು ಬೌಂಡರಿ, ಒಂದು ಸಿಕ್ಸರ್) ಮತ್ತು ಹೂಡಾ (33 ಎಸೆತಗಳಲ್ಲಿ ಮೂರು ಬೌಂಡರಿ, ಮೂರು ಸಿಕ್ಸರ್) ನಡುವಿನ ನಾಲ್ಕನೇ ವಿಕೆಟ್‌ಗೆ 87 ರನ್‌ಗಳ ಜೊತೆಯಾಟದಿಂದ ಚೇತರಿಸಿಕೊಂಡು ಏಳು ವಿಕೆಟ್‌ಗೆ 169 ರನ್ ಗಳಿಸಿತು. ಇದಾದ ನಂತರ ಹೈದರಾಬಾದ್ ತಂಡವನ್ನು 157 ರನ್ಗಳಿಗೆ ಕಟ್ಟಿಹಾಕಿತು .
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ? ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ 2022 ಪಂದ್ಯವು ಏಪ್ರಿಲ್ 7 ರಂದು (ಗುರುವಾರ) ನಡೆಯಲಿದೆ.
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ? ಮುಂಬೈನ ಡಾ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪಂದ್ಯ ನಡೆಯಲಿದೆ.
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ? ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ. ಸಂಜೆ 7 ಗಂಟೆಗೆ ಟಾಸ್ ನಡೆಯಲಿದೆ.
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು? ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ, ಸ್ಟಾರ್ ಸ್ಪೋರ್ಟ್ಸ್ 3 ಮತ್ತು ಸ್ಟಾರ್ ಸ್ಪೋರ್ಟ್ಸ್ 3 ಎಚ್‌ಡಿಯಲ್ಲಿ ವೀಕ್ಷಿಸಬಹುದಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು? ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ + ಹಾಟ್‌ಸ್ಟಾರ್, ಜಿಯೋ ಟಿವಿ ಮತ್ತು ಏರ್‌ಟೆಲ್ ಟಿವಿಯಲ್ಲಿ ನೋಡಬಹುದು.
ಇದನ್ನೂ ಓದಿ:LSG vs DC Playing XI IPL 2022: ಡೆಲ್ಲಿ ಸೇರಿದ ವಾರ್ನರ್! ಉಭಯ ತಂಡಗಳ್ಳಲ್ಲಾಗುವ ಬದಲಾವಣೆಗಳಿವು