ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ (IPL 2022 Mega Auction) ಮುನ್ನ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದೆ. ಈ ಬಾರಿ ಹಳೆಯ ಫ್ರಾಂಚೈಸಿಗಳ ಜೊತೆ ಎರಡು ಹೊಸ ಫ್ರಾಂಚೈಸಿ ಕೂಡ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ. ಆದರೆ ಹಳೆಯ 8 ತಂಡಗಳಿಗೆ ರಿಟೈನ್ ಅವಕಾಶ ನೀಡಿರುವ ಕಾರಣ, ಹೊಸ ತಂಡಗಳಾದ ಲಕ್ನೋ ಹಾಗೂ ಅಹಮದಾಬಾದ್ ತಂಡಗಳಿಗೆ ಬಿಸಿಸಿಐ ಸ್ಪೇಷಲ್ ಪಿಕ್ ಆಯ್ಕೆ ನೀಡಿದೆ. ಅಂದರೆ 8 ಫ್ರಾಂಚೈಸಿಗಳು ಬಿಡುಗಡೆ ಮಾಡಿದ ಆಟಗಾರರನ್ನು ನೇರವಾಗಿ ಆಯ್ಕೆ ಮಾಡುವ ಅವಕಾಶ ಈ ಎರಡು ಹೊಸ ತಂಡಗಳಿಗೆ ಇರಲಿದೆ. ಅದರಂತೆ ಇದೀಗ ರಿಲೀಸ್ ಆಗಿರುವ ಯಾವುದೇ ಆಟಗಾರರನ್ನು ಬೇಕಿದ್ದರೂ ಹೊಸ ಫ್ರಾಂಚೈಸಿಗಳು ಸಂಪರ್ಕಿಸಬಹುದು. ಆ ಮೂಲಕ ಮೆಗಾ ಹರಾಜಿಗಿಂತ ಮೊದಲೇ ಒಪ್ಪಂದ ಮಾಡಿಕೊಳ್ಳಬಹುದು. ಆದರೆ ಇಲ್ಲೂ ಕೂಡ ಕೆಲ ನಿಯಮಗಳು ಅನ್ವಯವಾಗಲಿದೆ.
ಅಂದರೆ ಈ ಬಾರಿಯ ಮೆಗಾ ಹರಾಜು ಮೊತ್ತವನ್ನು 90 ಕೋಟಿ ಎಂದು ನಿಗದಿಪಡಿಸಲಾಗಿದೆ. ಈ ಮೊತ್ತದಿಂದ ರಿಟೈನ್ ಮಾಡಿಕೊಳ್ಳಲು 4 ಆಟಗಾರರಿಗೆ 42 ಕೋಟಿ, 3 ಆಟಗಾರರಿಗೆ 32 ಕೋಟಿ, 2 ಆಟಗಾರರಿಗೆ 24 ಕೋಟಿ ಹಾಗೂ ಒಬ್ಬ ಆಟಗಾರನಿಗೆ 14 ಕೋಟಿ ನಿಗದಿ ಮಾಡಲಾಗಿತ್ತು. ಅದರಂತೆ ಈ ಮೊತ್ತದೊಳಗೆ ಬಹುತೇಕ ಫ್ರಾಂಚೈಸಿಗಳು 4 ಮತ್ತು 3 ಆಟಗಾರರನ್ನು ಉಳಿಸಿಕೊಂಡಿದೆ. ಇದೀಗ ಹೊಸ ಫ್ರಾಂಚೈಸಿಗಳಿಗೂ ವಿಶೇಷ ಆಯ್ಕೆಗೂ ಮೊತ್ತ ನಿಗದಿ ಮಾಡಲಾಗಿದೆ.
ಅದರಂತೆ ಹೊಸ ಫ್ರಾಂಚೈಸಿಗಳು 33 ಕೋಟಿಯೊಳಗೆ ಮೂವರು ಆಟಗಾರರನ್ನು ಆಯ್ಕೆ ಮಾಡಬಹುದು. ಈ ಮೂಲಕ ಇಬ್ಬರು ಭಾರತೀಯ ಆಟಗಾರರು+ ಒಬ್ಬ ವಿದೇಶಿ ಆಟಗಾರನನ್ನು ಮೆಗಾ ಹರಾಜು ಪಟ್ಟಿಯಿಂದ ಆಯ್ಕೆ ಮಾಡಿಕೊಳ್ಳಬಹುದು. ಇಲ್ಲಿ ಫ್ರಾಂಚೈಸಿ ಮೊದಲ ಆಟಗಾರನಿಗೆ 15 ಕೋಟಿ, 2ನೇ ಆಟಗಾರನಿಗೆ 11 ಕೋಟಿ ಹಾಗೂ 3ನೇ ಆಟಗಾರನಿಗೆ 7 ಕೋಟಿ ವ್ಯಯಿಸಬೇಕಾಗುತ್ತದೆ. ಈ ಮೊತ್ತ ನೀಡಿ ಮೂವರು ಆಟಗಾರರನ್ನು ನೇರವಾಗಿ ಆಯ್ಕೆ ಮಾಡಬಹುದು.
ಹೊಸ ಫ್ರಾಂಚೈಸಿಗಳು ಜನವರಿ 31 ರೊಳಗೆ 3 ಆಟಗಾರರನ್ನು ಆಯ್ಕೆ ಮಾಡಬೇಕೆಂದು ಬಿಸಿಸಿಐ ತಿಳಿಸಿದೆ. ಅದರಂತೆ ಈ ತಿಂಗಳೊಳಗೆ ಅಹಮದಾಬಾದ್ ಹಾಗೂ ಲಕ್ನೋ ಫ್ರಾಂಚೈಸಿಗಳು ತಮ್ಮ ತಂಡಕ್ಕೆ ಆಯ್ಕೆ ಮಾಡಲಾದ ಮೂವರು ಆಟಗಾರರ ಜೊತೆ ಒಪ್ಪಂದ ಮಾಡಿಕೊಳ್ಳಲು ಗಡುವು ನೀಡಿದೆ. ಅಂದರೆ ಜನವರಿ 31 ರ ಬಳಿಕ ಸ್ಪೆಷಲ್ ಪಿಕ್ ಮೂಲಕ ತಲಾ ಮೂವರು ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ಹೊಸ ಫ್ರಾಂಚೈಸಿಗಳಿಗೆ ಇರುವುದಿಲ್ಲ.
ಇದೀಗ ಜನವರಿ 31 ಕ್ಕೆ ಗಡುವು ವಿಧಿಸಿರುವ ಪರಿಣಾಮ ಹೊಸ ಫ್ರಾಂಚೈಸಿಗಳು ಅಂದೇ ತಾವು ಆಯ್ಕೆ ಮಾಡಿರುವ ಆಟಗಾರರ ಪಟ್ಟಿಯನ್ನು ಪ್ರಕಟಿಸಲಿದೆ. ಸದ್ಯ ಲಕ್ನೋ ಫ್ರಾಂಚೈಸಿ ಕೆಎಲ್ ರಾಹುಲ್ ಅವರನ್ನು ನಾಯಕನಾಗಿ ಆಯ್ಕೆ ಮಾಡಿಕೊಂಡಿದೆ ಎಂದು ವರದಿಯಾಗಿದ್ದು, ಅದೇ ರೀತಿ ಶ್ರೇಯಸ್ ಅಯ್ಯರ್ ಅಹಮದಾಬಾದ್ ತಂಡ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಅದರಂತೆ ಹೊಸ ತಂಡಗಳು ಆಯ್ಕೆ ಮಾಡಿರುವ ಆಟಗಾರರು ಯಾರೆಲ್ಲಾ ಎಂಬುದು ಜನವರಿ 31 ರಂದು ಅಧಿಕೃತವಾಗಿ ಪ್ರಕಟಗೊಳ್ಳುವ ಸಾಧ್ಯತೆಯಿದೆ.
ಈ ವಿಶೇಷ ಆಯ್ಕೆ ಇದೀಗ ಹೊಸ ಫ್ರಾಂಚೈಸಿಗಳಿಗೆ ವರದಾನವಾಗಿದೆ. ಏಕೆಂದರೆ ಇದೀಗ ಹರಾಜು ಪಟ್ಟಿಯಲ್ಲಿ ಸ್ಟಾರ್ ಆಟಗಾರರೇ ತುಂಬಿದ್ದಾರೆ. ಅವರಲ್ಲಿ ಮೂವರು ಆಟಗಾರರನ್ನು ಒಪ್ಪಿಸಿ ತಂಡಕ್ಕೆ ಸೇರಿಸಿಕೊಳ್ಳಬಹುದು. ಇದರಿಂದ ಮೆಗಾ ಹರಾಜು ಪಟ್ಟಿಯಲ್ಲಿ 6 ಪ್ರಮುಖ ಆಟಗಾರರು ಲಕ್ನೋ ಹಾಗೂ ಅಹಮದಾಬಾದ್ ತಂಡಗಳ ಪಾಲಾಗುವುದರಲ್ಲಿ ಡೌಟೇ ಇಲ್ಲ ಎನ್ನಬಹುದು.
ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್
ಇದನ್ನೂ ಓದಿ: Sachin Tendulkar: ಆಲ್ ಟೈಮ್ ಬೆಸ್ಟ್ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ
ಇದನ್ನೂ ಓದಿ: Steve Smith: 11 ಶತಕ, 11 ಅರ್ಧಶತಕ: ವಿಶೇಷ ದಾಖಲೆ ಬರೆದ ಸ್ಟೀವ್ ಸ್ಮಿತ್
ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!
(IPL 2022: Lucknow, Ahmedabad franchises set to get time till 31st January to finalize 3 signings)