IPL 2022: ಲಕ್ನೋ ಸೂಪರ್ ಜೈಂಟ್ಸ್​ ತಂಡದಿಂದ ಸ್ಟಾರ್ ಆಟಗಾರ ಔಟ್..?

| Updated By: ಝಾಹಿರ್ ಯೂಸುಫ್

Updated on: Mar 13, 2022 | 3:02 PM

IPL 2022: ಲಕ್ನೋ ಸೂಪರ್ ಜೈಂಟ್ಸ್ ತಂಡ ಹೀಗಿದೆ (Lucknow Super Giants Squad): ಕೆಎಲ್ ರಾಹುಲ್, ಮಾರ್ಕಸ್ ಸ್ಟೋಯಿನಿಸ್, ರವಿ ಬಿಷ್ಣೋಯ್, ಕ್ವಿಂಟನ್ ಡಿ ಕಾಕ್, ದೀಪಕ್ ಹೂಡಾ, ಮನೀಶ್ ಪಾಂಡೆ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್.

IPL 2022: ಲಕ್ನೋ ಸೂಪರ್ ಜೈಂಟ್ಸ್​ ತಂಡದಿಂದ ಸ್ಟಾರ್ ಆಟಗಾರ ಔಟ್..?
Lucknow Super Giants
Follow us on

ಐಪಿಎಲ್ (IPL 2022) ಆರಂಭಕ್ಕೂ ಮುನ್ನ ಆಟಗಾರರು ಟೂರ್ನಿಯಿಂದ ಹಿಂದೆ ಸರಿಯುವ ಪ್ರವೃತ್ತಿ ಈ ಬಾರಿ ಕೂಡ ಮುಂದುವರೆದಿದೆ. ಈಗಾಗಲೇ ಇಂಗ್ಲೆಂಡ್​ ಆಟಗಾರರಾದ ಜೇಸನ್ ರಾಯ್ (Jason Roy) ಹಾಗೂ ಅಲೆಕ್ಸ್ ಹೇಲ್ಸ್ (Alex Hales) ಬಯೋಬಬಲ್​ನಲ್ಲಿ ಆಡುವುದು ಕಷ್ಟ ಎಂದು ಐಪಿಎಲ್ ಸೀಸನ್ 15 ನಿಂದ ಹೊರಗುಳಿದಿದ್ದಾರೆ. ಅದರಂತೆ ಇದೀಗ ಜೇಸನ್ ರಾಯ್ ಬದಲಿಗೆ ಗುಜರಾತ್ ಟೈಟನ್ಸ್ ತಂಡಕ್ಕೆ ಅಫ್ಘಾನಿಸ್ತಾನ್ ಆಟಗಾರ ರಹಮಾನುಲ್ಲಾ ಗುರ್ಬಾಜ್ ಆಯ್ಕೆಯಾಗಿದ್ದಾರೆ. ಹಾಗೆಯೇ ಅಲೆಕ್ಸ್ ಹೇಲ್ಸ್ ಬದಲಿಗೆ ಕೆಕೆಆರ್ ತಂಡಕ್ಕೆ ಆಸ್ಟ್ರೇಲಿಯಾದ ಆರೋನ್ ಫಿಂಚ್ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ತಂಡದಿಂದ ಕೂಡ ಇಂಗ್ಲೆಂಡ್ ಆಟಗಾರ ಹಿಂದೆ ಸರಿಯಲಿದ್ದಾರೆ ಎಂದು ವರದಿಯಾಗಿದೆ.

LSG ತಂಡದಲ್ಲಿ ಸ್ಥಾನ ಪಡೆದಿರುವ ಇಂಗ್ಲೆಂಡ್ ಆಲ್​ರೌಂಡರ್ ಮಾರ್ಕ್ ​ವುಡ್ (Mark Wood)​ ಗಾಯಗೊಂಡಿದ್ದಾರೆ. ಹೀಗಾಗಿ ಐಪಿಎಲ್​ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಗಾಯದ ಕಾರಣ ಈಗಾಗಲೇ ಮಾರ್ಕ್ ​ವುಡ್ ವೆಸ್ಟ್ ಇಂಡೀಸ್ ವಿರುದ್ದದ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಮಾರ್ಕ್​ವುಡ್​ ಐಪಿಎಲ್​ನಲ್ಲೂ ಆಡುವುದಿಲ್ಲ ಎಂದು ಇಂಗ್ಲೆಂಡ್​ನ ಮಾಧ್ಯಮಗಳು ವರದಿ ಮಾಡಿವೆ.

ಅತ್ತ ಈಗಾಗಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆರಂಭಿಕ ಪಂದ್ಯಗಳಿಗೆ ಆಸ್ಟ್ರೇಲಿಯಾ ಆಲ್​ರೌಂಡರ್ ಮಾರ್ಕಸ್ ಸ್ಟೋಯಿನಿಸ್ ಅಲಭ್ಯರಾಗಲಿದ್ದಾರೆ. ಪಾಕಿಸ್ತಾನ್ ವಿರುದ್ದದ ಸರಣಿ ಆಡುತ್ತಿರುವ ಸ್ಟೋಯಿನಿಸ್ ಏಪ್ರಿಲ್ 6 ರ ಬಳಿಕವಷ್ಟೇ ಲಕ್ನೋ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇದೀಗ ತಂಡದಲ್ಲಿದ್ದ ಮತ್ತೋರ್ವ ಸ್ಟಾರ್ ಆಲ್​ರೌಂಡರ್ ಮಾರ್ಕ್ ​ವುಡ್ ಕೂಡ ಹಿಂದೆ ಸರಿಯಲು ನಿರ್ಧರಿಸಿರುವುದು ಲಕ್ನೋ ಸೂಪರ್ ಜೈಂಟ್ಸ್ ತಂಡದ ಚಿಂತೆಯನ್ನು ಹೆಚ್ಚಿಸಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡ ಹೀಗಿದೆ (Lucknow Super Giants Squad): ಕೆಎಲ್ ರಾಹುಲ್, ಮಾರ್ಕಸ್ ಸ್ಟೋಯಿನಿಸ್, ರವಿ ಬಿಷ್ಣೋಯ್, ಕ್ವಿಂಟನ್ ಡಿ ಕಾಕ್, ದೀಪಕ್ ಹೂಡಾ, ಮನೀಶ್ ಪಾಂಡೆ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಮಾರ್ಕ್ ವುಡ್, ಅವೇಶ್ ಖಾನ್, ಅಂಕಿತ್ ರಜಪೂತ್, ಕೆ ಗೌತಮ್, ದುಷ್ಮಂತ ಚಮೀರಾ, ಶಹಬಾಜ್ ನದೀಮ್, ಮನನ್ ವೋಹ್ರಾ, ಮೊಹ್ಸಿನ್ ಖಾನ್ ಬದೋನಿ, ಕರಣ್ ಶರ್ಮಾ, ಎವಿನ್ ಲೂಯಿಸ್, ಮಯಾಂಕ್ ಯಾದವ್, ಕೈಲ್ ಮೇಯರ್ಸ್.

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(IPL 2022: Lucknow Super Giants’s Mark Wood set to pull out of IPL)