IPL 2022: ಟಿ20 ವಿಶ್ವಕಪ್ ತಂಡದಲ್ಲಿ DK ಗೆ ಸ್ಥಾನ ಸಿಗೋದು ಡೌಟ್..!
IPL 2022: ಈ ಬಾರಿಯ ಐಪಿಎಲ್‌ನಲ್ಲಿ ದಿನೇಶ್ ಕಾರ್ತಿಕ್ ಇದುವರೆಗೆ ಎಂಟು ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 200 ರ ಪ್ರಚಂಡ ಸ್ಟ್ರೈಕ್ ರೇಟ್‌ನಲ್ಲಿ 210 ರನ್ ಗಳಿಸಿದ್ದಾರೆ. ಅಲ್ಲದೆ ಆರ್ಸಿಬಿ ತಂಡದ ಐದು ವಿಜಯಗಳಲ್ಲಿ 2 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಪಡೆದಿದ್ದಾರೆ.
IPL 2022: ಐಪಿಎಲ್ ಸೀಸನ್ 15 ನಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿರುವ ದಿನೇಶ್ ಕಾರ್ತಿಕ್ ಅಲಿಯಾಸ್ ಡಿಕೆ ಇದೀಗ ಟೀಮ್ ಇಂಡಿಯಾದಲ್ಲಿ ಅವಕಾಶ ಎದುರು ನೋಡುತ್ತಿದ್ದಾರೆ. ಏಕೆಂದರೆ ಇದೇ ವರ್ಷ ಟಿ20 ವಿಶ್ವಕಪ್ ನಡೆಯಲಿದ್ದು, ಇದಕ್ಕಾಗಿ ಹೊಸ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಿದೆ. ಇದೀಗ ಆರ್ಸಿಬಿ ಪರ ಅಬ್ಬರಿಸುವ ಮೂಲಕ ಹೊಸ ಫಿನಿಶರ್ ಆಗಿ ಗಮನ ಸೆಳೆದಿರುವ ದಿನೇಶ್ ಕಾರ್ತಿಕ್ ಟೀಮ್ ಇಂಡಿಯಾಗೆ ಮರಳುವ ವಿಶ್ವಾಸದಲ್ಲಿದ್ದಾರೆ. ಆದರೆ ದಿನೇಶ್ ಕಾರ್ತಿಕ್ಗೆ ಭಾರತ ಟಿ20 ತಂಡದಲ್ಲಿ ಅವಕಾಶ ಸಿಗುವುದು ಅನುಮಾನ ಎಂದಿದ್ದಾರೆ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್.
ಈ ಬಾರಿಯ ಐಪಿಎಲ್‌ನಲ್ಲಿ ದಿನೇಶ್ ಕಾರ್ತಿಕ್ ಇದುವರೆಗೆ ಎಂಟು ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 200 ರ ಪ್ರಚಂಡ ಸ್ಟ್ರೈಕ್ ರೇಟ್‌ನಲ್ಲಿ 210 ರನ್ ಗಳಿಸಿದ್ದಾರೆ. ಅಲ್ಲದೆ ಆರ್ಸಿಬಿ ತಂಡದ ಐದು ವಿಜಯಗಳಲ್ಲಿ 2 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇನ್ನು 8 ಇನ್ನಿಂಗ್ಸ್‌ಗಳಲ್ಲಿ ಆರು ಬಾರಿ ಅಜೇಯರಾಗಿ ಉಳಿದಿದ್ದರು. ಆದರೆ ಕಾರ್ತಿಕ್ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೂ, ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭವಲ್ಲ ಎಂದು ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ.
ದಿನೇಶ್ ಕಾರ್ತಿಕ್ ತಮ್ಮ ಪ್ರಸ್ತುತ ಫಾರ್ಮ್ ಅನ್ನು ಉಳಿಸಿಕೊಂಡರೆ, ಅವರು ತಂಡದಲ್ಲಿ ಸ್ಥಾನ ಪಡೆಯಬಹುದು. ಇಲ್ಲಿಯವರೆಗೆ ಐಪಿಎಲ್‌ನ ಅರ್ಧದಷ್ಟು ಪ್ರಯಾಣ ಮುಗಿದಿದೆ. ಇನ್ನುಳಿದ ಪಂದ್ಯಗಳಲ್ಲಿ ಫಾರ್ಮ್ ಅನ್ನು ಹೇಗೆ ಮುಂದುವರಿಸುತ್ತಾರೆ ನೋಡಬೇಕು. ಆ ಬಳಿಕವಷ್ಟೇ ಡಿಕೆ ತಂಡಕ್ಕೆ ಮರಳುವ ಸಾಧ್ಯತೆಯ ಬಗ್ಗೆ ಚರ್ಚಿಸಬಹುದು ಎಂದು ಮಂಜ್ರೇಕರ್ ಹೇಳಿದ್ದಾರೆ.
ಟೀಮ್ ಇಂಡಿಯಾದ ಪ್ಲೇಯಿಂಗ್ 11 ಸ್ಥಾನ ಪಡೆಯುವುದು ಸುಲಭವಲ್ಲ. ಏಕೆಂದರೆ ಡಿಕೆ 5, 6 ಮತ್ತು 7 ನೇ ಸ್ಥಾನದಲ್ಲಿ ಮಾತ್ರ ಆಡಬಹುದು. ಅವರು ಬ್ಯಾಟಿಂಗ್ ಕ್ರಮಾಂಕದಲ್ಲಿ ಮೇಲೆರುವ ಅವಕಾಶ ಕೂಡ ಇರುವುದಿಲ್ಲ. ಇನ್ನು ತಂಡದಲ್ಲಿ ರಿಷಬ್ ಪಂತ್ ಕೂಡ ಇದ್ದಾರೆ. ಅಂದರೆ ವಿಕೆಟ್ ಕೀಪರ್ ಆಗಿ ಪಂತ್ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚು. ಒಂದು ವೇಳೆ ಡಿಕೆಯನ್ನು ಆಯ್ಕೆ ಮಾಡಿದ್ರೆ, ಪಂತ್ ಅವರನ್ನು ಪ್ಲೇಯಿಂಗ್ 11 ನಿಂದ ಕೈ ಬಿಡಬೇಕಾದ ಪರಿಸ್ಥಿತಿ ಬರಬಹುದು. ಹಾಗಾಗಿ ನನ್ನ ಪ್ರಕಾರ 36 ವರ್ಷದ ದಿನೇಶ್ ಕಾರ್ತಿಕ್ಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನ ಎಂದು ಸಂಜಯ್ ಮಂಜ್ರೇಕರ್ ಹೇಳಿದ್ದಾರೆ.
ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್
ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ