AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Auction: ಬಹುದೊಡ್ಡ ಹರಾಜಿಗೂ ಮುನ್ನ RCB ಈ 4 ಆಟಗಾರರನ್ನು ತನ್ನಲ್ಲೇ ಉಳಿಸಿಕೊಳ್ಳಬೇಕಂತೆ!

ಚೋಪ್ರಾ ಪ್ರಕಾರ ಮೊದಲಿಗೆ ಆರ್​ಸಿಬಿ ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಅವರನ್ನು ತನ್ನಲ್ಲೇ ಉಳಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

IPL 2022 Auction: ಬಹುದೊಡ್ಡ ಹರಾಜಿಗೂ ಮುನ್ನ RCB ಈ 4 ಆಟಗಾರರನ್ನು ತನ್ನಲ್ಲೇ ಉಳಿಸಿಕೊಳ್ಳಬೇಕಂತೆ!
ವನಿಂದು ಹಸರಂಗ ಜೊತೆ ದುಷ್ಮಂತ ಚಮೀರ ಮತ್ತು ಟಿಮ್ ಡೇವಿಡ್ ಈ ಮೂವರು ಆಟಗಾರರನ್ನು ಹೊಸದಾಗಿ ತಂಡಕ್ಕೆ ಸೇರಿಸಿಕೊಂಡಿದೆ. ಮುಂದುವರಿಯಲಿರುವ ಐಪಿಎಲ್ ಟೂರ್ನಿಗೆ ತಂಡದಲ್ಲಿದ್ದ ಕೆಲ ಆಟಗಾರರು ಅಲಭ್ಯರಾದ ಕಾರಣ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆ ಆಟಗಾರನ ಸ್ಥಾನಕ್ಕೆ ಈ ಮೂವರು ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ.
TV9 Web
| Updated By: Digi Tech Desk|

Updated on:Jul 13, 2021 | 1:11 PM

Share

Indian Premier League: ಇಂಡಿಯನ್ ಪ್ರೀಮಿಯರ್ ಲೀಗ್ (IPL) 14ನೇ ಆವೃತ್ತಿ ಭಾರತದಲ್ಲಿ ಕೋವಿಡ್ (COVID) ಕಾರಣದಿಂದ ಅರ್ಧಕ್ಕೆ ನಿಂತಿತ್ತು. ಸೆಪ್ಟೆಂಬರ್​ನಲ್ಲಿ ಬಿಸಿಸಿಐ (BCCI) ಇದನ್ನು ಮುಂದುವರೆಸಲು ಯೋಜನೆ ಹಾಕಿಕೊಂಡಿದೆ. ಇದಾದ ನಂತರ ಐಪಿಎಲ್ 2022ಕ್ಕಾಗಿ (IPL 2022) ಈ ವರ್ಷಾಂತ್ಯದಲ್ಲಿ ಬಹುದೊಡ್ಡ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಬಾರಿಯ ಮೆಗಾ ಆಕ್ಷನ್ ಸಾಕಷ್ಟು ಕುತೂಹಲ ಕೆರಳಿಸಿದೆ. ಪ್ರತಿ ಫ್ರಾಂಚೈಸಿಗೆ ಕೇವಲ 4 ಆಟಗಾರರನ್ನು ಮಾತ್ರ ತನ್ನಲ್ಲೇ ಉಳಿಸಿಕೊಳ್ಳುವ ಆಯ್ಕೆ ನೀಡಲಾಗಿದೆ.

ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಗೆ ಕೂಡ ಯಾರನ್ನು ಕೈಬಿಡುವುದು ಯಾರನ್ನ ರಿಟೇನ್ ಮಾಡುವುದು ಎಂಬ ಗೊಂದಲ ಶುರುವಾಗಿದೆ. ಹೀಗಿರುವಾಗ ಟೀಮ್ ಇಂಡಿಯಾದ ಮಾಜಿ ಆಟಗಾರ ಆಕಾಶ್ ಚೋಪ್ರಾ ಐಪಿಎಲ್ 2022 ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಯಾರನ್ನ ರಿಟೇನ್ ಮಾಡಬೇಕೆಂದು ಸಲಹೆ ನೀಡಿದ್ದಾರೆ.

ನಿಯಮಗಳ ಪ್ರಕಾರ, ಐಪಿಎಲ್ ಮೆಗಾ ಆಕ್ಷನ್​ನಲ್ಲಿ ಪ್ರತಿಯೊಂದು ಫ್ರಾಂಚೈಸಿ ಕೇವಲ 4 ಆಟಗಾರರನ್ನು ಮಾತ್ರ ತನ್ನಲೇ ಉಳಿಸಿಕೊಳ್ಳುವ ಅಧಿಕಾರ ಹೊಂದಿದೆ. ಉಳಿದ ಎಲ್ಲಾ ಆಟಗಾರರನ್ನು ರಿಲೀಸ್ ಮಾಡಬೇಕಿದೆ. ಇದರಲ್ಲಿ ಮೂರು ಭಾರತೀಯ ಆಟಗಾರರು ಮತ್ತು ಓರ್ವ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಬಹುದು. ಅಥವಾ ಇಬ್ಬರು ಭಾರತೀಯ ಆಟಗಾರರು-ಇಬ್ಬರು ವಿದೇಶಿ ಆಟಗಾರರನ್ನು ತಮ್ಮಲ್ಲೆ ಉಳಿಸಿಕೊಳ್ಳಬಹುದು.

ಚೋಪ್ರಾ ಪ್ರಕಾರ ಮೊದಲಿಗೆ ಆರ್​ಸಿಬಿ ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಅವರನ್ನು ತನ್ನಲ್ಲೇ ಉಳಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಎಬಿಡಿ ಮುಂದಿನ ಐಪಿಎಲ್ ಆಡುವ ಬಗ್ಗೆ ಮಾಹಿತಿ ಹಂಚಿಕೊಂಡಿಲ್ಲ. ಅವರು ಆಡುವುದಿಲ್ಲ ಎಂದಾದರೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ರಿಟೇನ್ ಮಾಡುವುದು ಉತ್ತಮ ಆಯ್ಕೆ ಎಂಬುದು ಚೋಪ್ರಾ ಅಭಿಪ್ರಾಯ.

ಇನ್ನುಳಿದ ಇಬ್ಬರು ಆಟಗಾರರು ಯಜುವೇಂದ್ರ ಚಹಾಲ್ ಮತ್ತು ದೇವದತ್ ಪಡಿಕ್ಕಲ್. ಎಲ್ಲವಾದಲ್ಲಿ ಮೊಹಮ್ಮದ್ ಸಿರಾಜ್ ಮತ್ತು ವಾಷಿಂಗ್ಟನ್ ಸುಂದರ್ ಎಂದು ಚೋಪ್ರಾ ಹೇಳಿದ್ದಾರೆ.

ಇನ್ನೂ ಇದೇ ವಿಷಯದ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಬ್ರಾಡ್ ಹಾಗ್ ಮಾತನಾಡಿದ್ದು ಇವರ ಪ್ರಕಾರ ವಿರಾಟ್ ಕೊಹ್ಲಿ (Virat Kohli), ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಹಾಲ್ ಹಾಗೂ ದೇವದತ್ ಪಡಿಕ್ಕಲ್ ಅವರನ್ನು ರಿಟೇನ್ ಮಾಡಬೇಕು ಎಂದಿದ್ದಾರೆ.

ನನಗೆ ಬೌಲಿಂಗ್ ಮಾಡಲು ಕಷ್ಟ ಎನಿಸಿದ್ದು ಈ ಸ್ಟಾರ್ ಬೌಲರ್​ಗೆ ಎಂದ ಅಖ್ತರ್

Yashpal Sharma Death: 1983ರ ವಿಶ್ವಕಪ್ ಗೆಲುವಿನ ತಂಡದಲ್ಲಿದ್ದ ಸ್ಟಾರ್ ಪ್ಲೇಯರ್ ಹೃದಯಾಘಾತದಿಂದ ನಿಧನ

(IPL 2022 Mega Auction Aakash Chopra wants Royal Challengers Bangalore RCB to retain these four players)

Published On - 12:48 pm, Tue, 13 July 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ