ಐಪಿಎಲ್ ಸೀಸನ್ 15 ಮೆಗಾ ಹರಾಜು ಭರದಿಂದ ಸಾಗುತ್ತಿದೆ. ಈಗಾಗಲೇ ಮಾರ್ಕ್ಯೂ ಲೀಸ್ಟ್ ಹರಾಜು ಪ್ರಕ್ರಿಯೆ ಮುಕ್ತಾಯವಾಗಿದ್ದು,ಅದರಂತೆ ಮೊದಲ ಸುತ್ತಿನ ಹರಾಜು ಮುಗಿದೆ. ಮೊದಲ ಸುತ್ತಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕ್ವಿಂಟನ್ ಡಿಕಾಕ್ ( 6.75 ಕೋಟಿ) ಅವರನ್ನು ಖರೀದಿಸಿದೆ. ಇದಾದ ಬಳಿಕ 2ನೇ ಸುತ್ತಿನಲ್ಲಿ ಕನ್ನಡಿಗ ಮನೀಷ್ ಪಾಂಡೆ(4.60 ಕೋಟಿ) ಯನ್ನು ಸಹ ಖರೀದಿಸಿತು. ಅಷ್ಟೇ ಅಲ್ಲದೆ 2ನೇ ಮತ್ತು 3ನೇ ಸುತ್ತಿನಲ್ಲೂ ಲಕ್ನೋ ಸೂಪರ್ ಜೈಂಟ್ಸ್ ಸ್ಟಾರ್ ಆಟಗಾರನ್ನು ಟಾರ್ಗೆಟ್ ಮಾಡಿಕೊಂಡಿದೆ. ಅದರಂತೆ ಇದೀಗ ವೆಸ್ಟ್ ಇಂಡೀಸ್ನ ಜೇಸನ್ ಹೋಲ್ಡರ್ ಕೂಡ 8.75 ಕೋಟಿಗೆ ಲಕ್ನೋ ಪಾಲಾಗಿದೆ.
ಹಾಗೆಯೇ ಟೀಮ್ ಇಂಡಿಯಾ ಆಟಗಾರ ದೀಪಕ್ ಹೂಡಾ ಕೂಡ ಲಕ್ನೋ ಸೂಪರ್ ಜೈಂಟ್ಸ್ ಪಾಲಾಗಿದ್ದಾರೆ. ಹೂಡಾ ಅವರನ್ನು 5.75 ಕೋಟಿಗೆ ಲಕ್ನೋ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ವಿಶೇಷ ಎಂದರೆ ದೀಪಕ್ ಹೂಡಾ ಹಾಗೂ ಜೇಸನ್ ಹೋಲ್ಡರ್ ಆಲ್ರೌಂಡರ್ಗಳು. ಇದೀಗ ಬ್ಯಾಕ್ ಟು ಬ್ಯಾಕ್ ಆಲ್ರೌಂಡರ್ಗಳನ್ನು ಖರೀದಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಬಲಿಷ್ಠ ತಂಡ ಕಟ್ಟುವ ಸೂಚನೆ ನೀಡಿದೆ.
ಇದಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಿಕೊಂಡಿತು. ಇದೀಗ ಮನೀಷ್ ಪಾಂಡೆ, ಜೇಸನ್ ಹೋಲ್ಡರ್ ಹಾಗೂ ದೀಪಕ್ ಹೂಡಾ ಲಕ್ನೋ ತಂಡದ ಪಾಲಾಗಿದ್ದಾರೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ ತಂಡವು ಸ್ಪೆಷಲ್ ಪಿಕ್ ಆಯ್ಕೆಯ ಮೂಲಕ ಆಸ್ಟ್ರೇಲಿಯಾ ಆಲ್ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಹಾಗೂ ರವಿ ಬಿಷ್ನೋಯ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಇನ್ನು ತಂಡದ ಕೋಚ್ ಆಗಿ ಜಿಂಬಾಬ್ವೆಯ ಮಾಜಿ ಆಟಗಾರ ಆ್ಯಂಡಿ ಫ್ಲವರ್ ಇದ್ದಾರೆ. ಜೊತೆಗೆ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ಕಾಣಿಸಿಕೊಳ್ಳಲಿದ್ದಾರೆ.
ಮೊದಲ ಸುತ್ತಿನಲ್ಲಿ ಹರಾಜಾದ ಆಟಗಾರರು:
ಶಿಖರ್ ಧವನ್- 8.25 ಕೋಟಿ (ಪಂಜಾಬ್ ಕಿಂಗ್ಸ್)
ರವಿಚಂದ್ರನ್ ಅಶ್ವಿನ್- 5 ಕೋಟಿ ( ರಾಜಸ್ಥಾನ್ ರಾಯಲ್ಸ್)
ಪ್ಯಾಟ್ ಕಮಿನ್ಸ್- 7.25 ಕೋಟಿ (ಕೊಲ್ಕತ್ತಾ ನೈಟ್ ರೈಡರ್ಸ್)
ಕಗಿಸೋ ರಬಾಡ- 9.25 ಕೋಟಿ (ಪಂಜಾಬ್ ಕಿಂಗ್ಸ್)
ಟ್ರೆಂಟ್ ಬೌಲ್ಟ್- 8 ಕೋಟಿ (ರಾಜಸ್ಥಾನ್ ರಾಯಲ್ಸ್)
ಶ್ರೇಯಸ್ ಅಯ್ಯರ್- 12.25 ಕೋಟಿ (ಕೊಲ್ಕತ್ತಾ ನೈಟ್ ರೈಡರ್ಸ್)
ಮೊಹಮ್ಮದ್ ಶಮಿ- 6.25 ಕೋಟಿ (ಗುಜರಾತ್ ಟೈಟನ್ಸ್)
ಫಾಫ್ ಡುಪ್ಲೆಸಿಸ್- 7 ಕೋಟಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು)
ಕ್ವಿಂಟನ್ ಡಿಕಾಕ್- 6.75 ಕೋಟಿ (ಲಕ್ನೋ ಸೂಪರ್ ಜೈಂಟ್ಸ್)
ಡೇವಿಡ್ ವಾರ್ನರ್- 6.25 ಕೋಟಿ (ಡೆಲ್ಲಿ ಕ್ಯಾಪಿಟಲ್ಸ್)
ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ
ಇದನ್ನೂ ಓದಿ: IPL 2022: ಐಪಿಎಲ್ ಹರಾಜಿನಲ್ಲಿ ಅತೀ ಹೆಚ್ಚು ಮೊತ್ತ ಖರ್ಚು ಮಾಡಿದ ತಂಡ ಯಾವುದು ಗೊತ್ತಾ?
ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್ಮ್ಯಾನ್ ರೋಹಿತ್ ಶರ್ಮಾ
(IPL 2022 Mega Auction: Deepak Hooda, Jason Holder bought by Lucknow)
Published On - 3:06 pm, Sat, 12 February 22