IPL 2022 ಮೆಗಾ ಹರಾಜಿಗೆ ಆಟಗಾರರ ಹೆಸರು ಬಿಡುಗಡೆ: ಯಾರಿಗೆ ಎಷ್ಟು ಮೊತ್ತ?, ಇಲ್ಲಿದೆ ಸಂಪೂರ್ಣ ಮಾಹಿತಿ

IPL 2022 ಮೆಗಾ ಹರಾಜಿಗೆ ಆಟಗಾರರ ಹೆಸರು ಬಿಡುಗಡೆ: ಯಾರಿಗೆ ಎಷ್ಟು ಮೊತ್ತ?, ಇಲ್ಲಿದೆ ಸಂಪೂರ್ಣ ಮಾಹಿತಿ
IPL 2022 Mega Auction

IPL 2022 Mega Auction: ಐಪಿಎಲ್ 2022 ಮೆಗಾ ಹರಾಜಿಗೆ ಲಭ್ಯವಿರುವ ಆಟಗಾರರ ಹೆಸರು ಪ್ರಕಟವಾಗಿದೆ. ಈ ಐಪಿಎಲ್ ಮೆಗಾ ಆಕ್ಷನ್​ಗೆ ಬರೋಬ್ಬರಿ 1214 ಆಟಗಾರರ ನೋಂದಣಿ ಮಾಡಿದ್ದಾರಂತೆ. ಇದರಲ್ಲಿ 896 ಭಾರತೀಯ ಆಟಗಾರರು ಮತ್ತು 318 ವಿದೇಶಿ ಪ್ಲೇಯರ್ಸ್ ಇದ್ದಾರೆ.

TV9kannada Web Team

| Edited By: Vinay Bhat

Jan 22, 2022 | 11:12 AM

ಇಂಡಿಯನ್ ಪ್ರೀಮಿಯರ್ ಲೀಗ್ 2022 ರ (IPL 2022) ಫೀವರ್ ಶುರುವಾಗಿದೆ. ಮುಂದಿನ ತಿಂಗಳು ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಸಿಸಿಐ ಇಂದು ಎಲ್ಲ ಫ್ರಾಂಚೈಸಿ ಜೊತೆ ವಿಶೇಷ ಸಭೆ ಕರೆದಿದ್ದು ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಲಿದೆ. ಫೆಬ್ರವರಿ 12 ಹಾಗೂ 13 ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಹರಾಜು ಪ್ರಕ್ರಿಯೆ ಬಗ್ಗೆಯೂ ಮಾತುಕತೆ ನಡೆಯಲಿದೆ. ಈಗಾಗಲೇ ಹೊಸ ಫ್ರಾಂಚೈಸಿಗಳಾದ ಲಖನೌ ಮತ್ತು ಅಹಮದಾಬಾದ್ ತಂಡದ ನಾಯಕನನ್ನು ಆಯ್ಕೆ ಮಾಡಿದ ಬಗ್ಗೆ ಮಾಹಿತಿ ನೀಡಿದೆ. ಕೆಎಲ್‌ ರಾಹುಲ್ (KL Rahul) ಅವರನ್ನು ಬರೋಬ್ಬರಿ 17 ಕೋಟಿ ರೂ. ಮೊತ್ತಕ್ಕೆ ಲಖನೌ ಖರೀದಿಸಿದರೆ,  ಅಹಮದಾಬಾದ್ ಫ್ರಾಂಚೈಸ್ ಹಾರ್ದಿಕ್ ಪಾಂಡ್ಯ ಅವರನ್ನು 15 ಕೋಟಿ ರೂ. ಮೊತ್ತಕ್ಕೆ ಪಡೆದುಕೊಂಡಿದೆ. ಇದೀಗ ಮೆಗಾ ಹರಾಜಿಗೆ (Mega Auction) ಲಭ್ಯವಿರುವ ಆಟಗಾರರ ಹೆಸರು ಪ್ರಕಟವಾಗಿದೆ. ಈ ಐಪಿಎಲ್ ಮೆಗಾ ಆಕ್ಷನ್​ಗೆ ಬರೋಬ್ಬರಿ 1214 ಆಟಗಾರರ ನೋಂದಣಿ ಮಾಡಿದ್ದಾರಂತೆ. ಇದರಲ್ಲಿ 896 ಭಾರತೀಯ ಆಟಗಾರರು ಮತ್ತು 318 ವಿದೇಶಿ ಪ್ಲೇಯರ್ಸ್ ಇದ್ದಾರೆ. ಅಚ್ಚರಿ ಎಂದರೆ ಸ್ಟಾರ್ ಆಟಗಾರರಾದ ಕ್ರಿಸ್ ಗೇಲ್, ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚೆರ್, ಮಿಚೆಲ್ ಸ್ಟಾರ್ಕ್, ಸ್ಯಾಮ್ ಕುರ್ರನ್ ಮತ್ತು ಕ್ರಿಸ್ ವೋಕ್ಸ್ ಐಪಿಎಲ್ 2022 ರಿಂದ ಹಿಂದೆ ಸರಿದಿದ್ದಾರೆ. ಎಸ್, ಶ್ರೀಶಾಂತ್ ಹರಾಜಿನಲ್ಲಿ ಹೆಸರು ನೀಡಿದ್ದಾರೆ.

ಹರಾಜಿಗೆ ಲಭ್ಯವಿರುವ ಸ್ಟಾರ್ ಆಟಗಾರರ ಹೆಸರು ಇಲ್ಲಿದೆ:

2 ಕೋಟಿ ಮೂಲಬೆಲೆ ಹೊಂದಿರುವ ಆಟಗಾರರು:

ಆರ್. ಅಶ್ವಿನ್, ಯುಜ್ವೇಂದ್ರ ಚಹಾಲ್, ದೀಪಕ್ ಚಹಾರ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಶಮಿ, ದೇವದತ್ ಪಡಿಕ್ಕಲ್, ಕ್ರುನಾಲ್ ಪಾಂಡ್ಯ, ಹರ್ಷಲ್ ಪಟೇಲ್, ಸುರೇಶ್ ರೈನಾ, ಅಂಬಟಿ ರಾಯುಡು, ಶಾರ್ದೂಲ್ ಥಾಕೂರ್, ರಾಬಿನ್ ಉತ್ತಪ್ಪ, ಉಮೇಶ್ ಯಾದವ್, ದಿನೇಶ್ ಕಾರ್ತಿಕ್, ಇಶಾನ್ ಕಿಶನ್, ಭುವನೇಶ್ವರ್ ಕುಮಾರ್, ಮುಜೀಬ್ ಝರ್ದನ್, ಆಸ್ಟನ್ ಅಗರ್, ನಥನ್ ಕಲ್ಟರ್ ನೈಲ್, ಪ್ಯಾಟ್ ಕಮಿನ್ಸ್, ಜೋಶ್ ಹ್ಯಾಜ್ಲೆವುಡ್, ಮಿಚೆಲ್ ಮಾರ್ಶ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ, ಶಕಿಬ್ ಅಲ್ ಹಸನ್, ಮುಸ್ತಫಿಜುರ್ ರೆಹ್ಮಾನ್, ಸ್ಯಾಮ್ ಬಿಲ್ಲಿಂಗ್ಸ್, ಸಖೀಬ್ ಮೊಹಮ್ಮದ್, ಕ್ರಿಸ್ ಜೋರ್ಡನ್, ಗ್ರೈಗ್ ಓವರ್ಟನ್, ಆದಿಲ್ ರಶೀದ್, ಜೇಸನ್ ರಾಯ್, ಜೇಮ್ಸ್ ವಿನ್ಸ್, ಡೇವಿಡ್ ವಿಲ್ಲೆ, ಮಾರ್ಕ್ ವುಡ್, ಟ್ರೆಂಟ್ ಬೌಲ್ಟ್, ಲೂಕಿ ಫರ್ಗುಸನ್, ಕ್ವಿಂಟನ್ ಡಿಕಾಕ್, ಮರ್ಚೆಂಟ್ ಲ್ಯಾಂಗ್, ಫಾಫ್ ಡುಪ್ಲೆಸಿಸ್, ಕಗಿಸೊ ರಬಾಡ, ಇಮ್ರಾನ್ ತಾಹೀರ್, ಫಾಬಿನ್ ಅಲೆನ್, ಡ್ವೇನ್ ಬ್ರಾವೋ, ಎವಿನ್ ಲೆವಿಸ್, ಓಡೆನ್ ಸ್ಮಿತ್.

1.5 ಕೋಟಿ ಮೂಲಬೆಲೆ ಹೊಂದಿರುವ ಆಟಗಾರರು:

ಅಮಿತ್ ಮಿಶ್ರಾ, ಇಶಾಂತ್ ಶರ್ಮಾ, ವಾಷಿಂಗ್ಟನ್ ಸುಂದರ್, ಆ್ಯರೋನ್ ಫಿಂಚ್, ಕ್ರಿಸ್ ಲಿನ್, ನೇಥನ್ ಲ್ಯಾನ್, ಕೇನ್ ರಿಚರ್ಡಸನ್, ಜಾನಿ ಬೈರ್​ಸ್ಟೋ, ಅಲೆಕ್ಸ್ ಹೇಲ್ಸ್, ಇಯಾನ್ ಮಾರ್ಗನ್, ಡೇವಿಡ್ ಮಲನ್, ಆ್ಯಡಂ ಮಿಲ್ನೆ, ಕಾಲಿನ್ ಮುನ್ರೊ, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಟಿಮ್ ಸೌಥೀ, ಕಾಲಿನ್ ಇನ್​ಗ್ರಾಮ್, ಶಿಮ್ರೋನ್ ಹೆಟ್ಮೇರ್, ಜೇಸನ್ ಹೋಲ್ಡರ್, ನಿಕೋಲಸ್ ಪೂರನ್.

1 ಕೋಟಿ ಮೂಲಬೆಲೆ ಹೊಂದಿರುವ ಆಟಗಾರರು:

ಮನೀಶ್ ಪಾಂಡೆ, ಪಿಯೂಶ್ ಚಾವ್ಲಾ, ಪ್ರಸಿದ್ಧ್ ಕೃಷ್ಣ, ಟಿ. ನಟರಾಜನ್, ಅಜಿಂಕ್ಯಾ ರಹಾನೆ, ನಿತೀಶ್ ರಾಣ, ವೃದ್ದಿಮಾನ್ ಸಾಹ, ಕೇದರ್ ಜಾಧವ್, ಕುಲ್ದೀಪ್ ಯಾದವ್, ಜಯಂತ್ ಯಾದವ್, ಮೊಹಮ್ಮದ್ ನಬಿ, ಜೇಮ್ಸ್ ಫಾಲ್ಕನರ್, ಮೋಸಿಸ್ ಹೆನ್ರಿಕ್ಯೂಸ್, ಮಾರ್ನಸ್ ಲಾಬುಶೇನ್, ರಿಲೆ ಮೆರೆಡಿತ್, ಜೋಶ್ ಫಿಲಿಪ್, ಲ್ಯಾಮ್ ಲಿವಿಂಗ್ಸ್ಟೋನ್, ಟೈಮಲ್ ಮಿಲ್ಸ್, ಆ್ಯಡಂ ಮರ್ಕಮ್, ರಿಲಿ ರೊಸ್ಸೋ, ತಬ್ರೈಸ್ ಶಂಸಿ, ರಾಸ್ಸಿ ವಾನ್ ಡೇರ್ ಡ್ಸೆನ್, ವಾನಿಂದು ಹಸರಂಗ, ರೋಸ್ಟನ್ ಚೇಸ್, ಶೆರ್ಫಾನ್ ರುಥರ್​ಫಾರ್ಡ್, ಡಾರ್ಸಿ ಶಾರ್ಟ್, ಆ್ಯಂಡ್ರೊ ಟೈ, ಡೇನ್ ಲಾರೆನ್ಸ್, ಓಲಿ ಪೋಪ್, ಡೆವೋನ್ ಕಾನ್ವೇ, ಕಾಲಿನ್ ಗ್ರ್ಯಾಂಡ್​ಹೋಮ್, ಮಿಚೆಲ್ ಸ್ಯಾಂಟನರ್.

KL Rahul: ಪಂದ್ಯ ಮುಗಿದ ಬಳಿಕ ಬೇಸರದಲ್ಲಿ ನಾಯಕ ಕೆಎಲ್ ರಾಹುಲ್ ಆಡಿದ ಮಾತು ಕೇಳಿ

KL Rahul: ದಾಖಲೆಯ ಮೊತ್ತಕ್ಕೆ ಕೆಎಲ್ ರಾಹುಲ್​ರನ್ನು ಖರೀದಿಸಿದ ಲಖನೌ: ಹಾರ್ದಿಕ್ ಕೂಡ ಸೇಲ್

Follow us on

Related Stories

Most Read Stories

Click on your DTH Provider to Add TV9 Kannada