IPL 2022 Mega Auction: ಲಕ್ನೋ ತಂಡಕ್ಕೆ ಆಯ್ಕೆಯಾದ ಮತ್ತೊಬ್ಬ ಕನ್ನಡಿಗ..!

IPL 2022 Mega Auction: ಲಕ್ನೋ ಸೂಪರ್ ಜೈಂಟ್ಸ್ ತಂಡವು ಸ್ಪೆಷಲ್ ಪಿಕ್ ಆಯ್ಕೆಯ ಮೂಲಕ ಆಸ್ಟ್ರೇಲಿಯಾ ಆಲ್​ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಹಾಗೂ ರವಿ ಬಿಷ್ನೋಯ್​ ಅವರನ್ನು ಆಯ್ಕೆ ಮಾಡಿಕೊಂಡಿದೆ.

IPL 2022 Mega Auction: ಲಕ್ನೋ ತಂಡಕ್ಕೆ ಆಯ್ಕೆಯಾದ ಮತ್ತೊಬ್ಬ ಕನ್ನಡಿಗ..!
IPL 2022 Mega Auction:
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 12, 2022 | 1:45 PM

ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ (IPL 2022 ) ಸೀಸನ್ 15 ಮೆಗಾ ಹರಾಜು ನಡೆಯುತ್ತಿದೆ. ಈಗಾಗಲೇ ಮಾರ್ಕ್ಯೂ ಲೀಸ್ಟ್ ಹರಾಜು ಪ್ರಕ್ರಿಯೆ ಮುಕ್ತಾಯವಾಗಿದ್ದು,ಅದರಂತೆ ಮೊದಲ ಸುತ್ತಿನ ಹರಾಜು ಮುಗಿದೆ. ಮೊದಲ ಸುತ್ತಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕ್ವಿಂಟನ್ ಡಿಕಾಕ್ ಅವರನ್ನು 6.75 ಕೋಟಿ ಖರೀದಿಸಿದೆ. ಇದಾದ ಬಳಿಕ 2ನೇ ಸುತ್ತಿನಲ್ಲಿ ಕನ್ನಡಿಗ ಮನೀಷ್ ಪಾಂಡೆಯನ್ನೂ ಕೂಡ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. 4.60 ಕೋಟಿಗೆ ಲಕ್ನೋ ಮನೀಷ್ ಪಾಂಡೆಯನ್ನು ಖರೀದಿಸಿದೆ. ಇದರೊಂದಿಗೆ ಲಕ್ನೋ ತಂಡದಲ್ಲಿ ಇಬ್ಬರು ಕನ್ನಡಿಗರು ಸೇರ್ಪಡೆಯಾದಂತಾಗಿದೆ. ಇದಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಿಕೊಂಡಿತು. ಇದೀಗ ಪಾಂಡೆ ಕೂಡ ಲಕ್ನೋ ತಂಡದ ಪಾಲಾಗಿದ್ದಾರೆ. ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್ ಪರ ಆಡಿದ್ದ ಪಾಂಡೆ ಈ ಬಾರಿ ಹೊಸ ಫ್ರಾಂಚೈಸಿ ಪರ ಆಡಲಿರುವುದು ವಿಶೇಷ.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡವು ಸ್ಪೆಷಲ್ ಪಿಕ್ ಆಯ್ಕೆಯ ಮೂಲಕ ಆಸ್ಟ್ರೇಲಿಯಾ ಆಲ್​ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಹಾಗೂ ರವಿ ಬಿಷ್ನೋಯ್​ ಅವರನ್ನು ಆಯ್ಕೆ ಮಾಡಿಕೊಂಡಿದೆ. ಹಾಗೆಯೇ ತಂಡದ ಕೋಚ್ ಜಿಂಬಾಬ್ವೆಯ ಮಾಜಿ ಆಟಗಾರ ಆ್ಯಂಡಿ ಫ್ಲವರ್ ಇದ್ದಾರೆ. ಜೊತೆಗೆ ತಂಡದ ಮೆಂಟರ್​ ಆಗಿ ಗೌತಮ್ ಗಂಭೀರ್ ಕಾಣಿಸಿಕೊಳ್ಳಲಿದ್ದಾರೆ.

ಮೆಗಾ ಹರಾಜಿನ ಮೊದಲ ಸುತ್ತಿನಲ್ಲಿ ಹರಾಜಾದ ಆಟಗಾರರು:

ಶಿಖರ್ ಧವನ್- 8.25 ಕೋಟಿ (ಪಂಜಾಬ್ ಕಿಂಗ್ಸ್)

ರವಿಚಂದ್ರನ್ ಅಶ್ವಿನ್- 5 ಕೋಟಿ ( ರಾಜಸ್ಥಾನ್ ರಾಯಲ್ಸ್)

ಪ್ಯಾಟ್ ಕಮಿನ್ಸ್- 7.25 ಕೋಟಿ (ಕೊಲ್ಕತ್ತಾ ನೈಟ್ ರೈಡರ್ಸ್​)

ಕಗಿಸೋ ರಬಾಡ- 9.25 ಕೋಟಿ (ಪಂಜಾಬ್ ಕಿಂಗ್ಸ್​)

ಟ್ರೆಂಟ್ ಬೌಲ್ಟ್- 8 ಕೋಟಿ (ರಾಜಸ್ಥಾನ್ ರಾಯಲ್ಸ್​)

ಶ್ರೇಯಸ್ ಅಯ್ಯರ್- 12.25 ಕೋಟಿ (ಕೊಲ್ಕತ್ತಾ ನೈಟ್ ರೈಡರ್ಸ್​)

ಮೊಹಮ್ಮದ್ ಶಮಿ- 6.25 ಕೋಟಿ (ಗುಜರಾತ್ ಟೈಟನ್ಸ್​)

ಫಾಫ್ ಡುಪ್ಲೆಸಿಸ್- 7 ಕೋಟಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು)

ಕ್ವಿಂಟನ್ ಡಿಕಾಕ್- 6.75 ಕೋಟಿ (ಲಕ್ನೋ ಸೂಪರ್ ಜೈಂಟ್ಸ್​)

ಡೇವಿಡ್ ವಾರ್ನರ್- 6.25 ಕೋಟಿ (ಡೆಲ್ಲಿ ಕ್ಯಾಪಿಟಲ್ಸ್​)

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಐಪಿಎಲ್​ ಹರಾಜಿನಲ್ಲಿ ಅತೀ ಹೆಚ್ಚು ಮೊತ್ತ ಖರ್ಚು ಮಾಡಿದ ತಂಡ ಯಾವುದು ಗೊತ್ತಾ?

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

(IPL 2022 Mega Auction: Manish Pandey picked up by Lucknow Supergiants)

ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ