AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಸೋಲಿನ ಬೆನ್ನಲ್ಲೇ ರೋಹಿತ್ ಶರ್ಮಾಗೆ 12 ಲಕ್ಷ ರೂ. ದಂಡ

IPL 2022: ಮೊದಲ ವಿಕೆಟ್​ಗೆ 67 ರನ್​ಗಳ ಜೊತೆಯಾಟವಾಡಿದ ಹಿಟ್​ಮ್ಯಾನ್-ಕಿಶನ್ ಜೋಡಿ ತಂಡಕ್ಕೆಉತ್ತಮ ಆರಂಭ ಒದಗಿಸಿದ್ದರು. ಈ ವೇಳೆ ರೋಹಿತ್ ಶರ್ಮಾ (41) ಕ್ಯಾಚ್ ನೀಡಿ ನಿರ್ಗಮಿಸಿದರು.

Rohit Sharma: ಸೋಲಿನ ಬೆನ್ನಲ್ಲೇ ರೋಹಿತ್ ಶರ್ಮಾಗೆ 12 ಲಕ್ಷ ರೂ. ದಂಡ
Rohit Sharma
TV9 Web
| Edited By: |

Updated on: Mar 27, 2022 | 10:31 PM

Share

ಬ್ರಬೋರ್ನ್ ಸ್ಟೇಡಿಯಂನಲ್ಲಿ (IPL 2022) ನಡೆದ ಐಪಿಎಲ್​ನ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಮುಂಬೈ ಇಂಡಿಯನ್ಸ್ ತಂಡವು 4 ವಿಕೆಟ್​ಗಳಿಂದ ಸೋಲನುಭವಿಸಿತು. ರೋಚಕ ಹಣಾಹಣಿಗೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ನಾಯಕ ರೋಹಿತ್ ಶರ್ಮಾ (Rohit Sharma) ನಾನಾ ತಂತ್ರಗಳನ್ನು ಪ್ರಯೋಗಿಸಿದರೂ ಪ್ರಯೋಜನವಾಗಿರಲಿಲ್ಲ. ಇತ್ತ ನಿರಂತರ ಬೌಲಿಂಗ್ ಬದಲಿಸಿ ಪ್ರಯೋಗಕ್ಕೆ ಮುಂದಾಗಿದ್ದ ರೋಹಿತ್ ಶರ್ಮಾ ಇದೀಗ ನಿಧಾನಗತಿಯ ಬೌಲಿಂಗ್​ ದಂಡಕ್ಕೆ ಗುರಿಯಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದದ ಸೋಲಿನ ಬೆನ್ನಲ್ಲೇ ಇದೀಗ ರೋಹಿತ್ ಶರ್ಮಾ ನಿಧಾನಗತಿಯ ಓವರ್​ ರೇಟ್​ಗಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಒಟ್ಟಿನಲ್ಲಿ ಮೊದಲ ಪಂದ್ಯದ ಸೋಲಿನ ಚಿಂತೆಯಲ್ಲಿದ್ದ ನಾಯಕನಿಗೆ ಇದೀಗ ದಂಡ ಬರ ಎಳೆದಂತಾಗಿದೆ.

ಇನ್ನು ಈ ಪಂದ್ಯದಲ್ಲಿ ಒಂದು ಹಂತದಲ್ಲಿ 72 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸೋಲಿನ ಸುಳಿಯಲ್ಲಿ ಸಿಲುಕಿತ್ತು. ಆದರೆ ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 4 ವಿಕೆಟ್​ಗಳ ಜಯ ಸಾಧಿಸಿದ್ದು ವಿಶೇಷ. ಈ ಗೆಲುವಿನ ರೂವಾರಿಗಳು ಅಕ್ಷರ್ ಪಟೇಲ್ ಹಾಗೂ ಲಲಿತ್ ಯಾದವ್. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಐದು ವಿಕೆಟ್‌ ನಷ್ಟಕ್ಕೆ 177 ರನ್‌ಗಳ ಗುರಿ ನೀಡಿತ್ತು. ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್​ 13.2 ಓವರ್‌ಗಳಲ್ಲಿ 104 ರನ್ ಗಳಿಸಿ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಈ ಹಂತದಲ್ಲಿ ಜೊತೆಯಾದ ಲಲಿತ್ ಯಾದವ್ ಮತ್ತು ಅಕ್ಷರ್ ಪಟೇಲ್ ಅವರ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. 6 ಓವರ್​ಗಳಲ್ಲಿ 60 ಕ್ಕೂ ಅಧಿಕ ರನ್​ಗಳಿಸಬೇಕಿದ್ದ ಸಮಯದಲ್ಲಿ ಒತ್ತಡವನ್ನು ನಿಭಾಯಿಸಿಕೊಂಡ ಈ ಜೋಡಿ ರನ್​ಗಳಿಸುತ್ತಾ ಹೋದರು. ಅದರಲ್ಲೂ ಡೇನಿಯಲ್ ಸ್ಯಾಮ್ಸ್ ಎಸೆದ 18ನೇ ಓವರ್​ನಲ್ಲಿ 24 ರನ್​ ಬಾರಿಸುವ ಮೂಲಕ ಈ ಜೋಡಿ ಅಬ್ಬರಿಸಿದರು. ಅಂತಿಮ 2 ಓವರ್​ನಲ್ಲಿ ಕೇವಲ 3 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಫೋರ್ ಬಾರಿಸುವ ಮೂಲಕ ಅಕ್ಷರ್ ಪಟೇಲ್ ಡೆಲ್ಲಿ ತಂಡಕ್ಕೆ 4 ವಿಕೆಟ್​ಗಳ ಭರ್ಜರಿ ಜಯ ತಂದುಕೊಟ್ಟರು. ಡೆಲ್ಲಿ ಪರ ಅಜೇಯರಾಗಿ ಉಳಿದ ಲಲಿತ್ ಯಾದವ್ (48) ಮತ್ತು ಅಕ್ಷರ್ ಪಟೇಲ್ (38, 17 ಎಸೆತ) ಏಳನೇ ವಿಕೆಟ್‌ಗೆ 30 ಎಸೆತಗಳಲ್ಲಿ 75 ರನ್‌ಗಳ ಜೊತೆಯಾಟವಾಡುವ ಮೂಲಕ ಗೆಲುವಿನ ರೂವಾರಿ ಎನಿಸಿಕೊಂಡರು.

ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಪರ ಇಶಾನ್ ಕಿಶನ್ ಅಬ್ಬರಿಸಿದ್ದರು. ಮೊದಲ ವಿಕೆಟ್​ಗೆ 67 ರನ್​ಗಳ ಜೊತೆಯಾಟವಾಡಿದ ಹಿಟ್​ಮ್ಯಾನ್-ಕಿಶನ್ ಜೋಡಿ ತಂಡಕ್ಕೆಉತ್ತಮ ಆರಂಭ ಒದಗಿಸಿದ್ದರು. ಈ ವೇಳೆ ರೋಹಿತ್ ಶರ್ಮಾ (41) ಕ್ಯಾಚ್ ನೀಡಿ ನಿರ್ಗಮಿಸಿದರು. ಆ ಬಳಿಕ ಬಂದ ಅನ್​ಮೋಲ್ ಪ್ರೀತ್ ಸಿಂಗ್ (8) ಹಾಗೂ ತಿಲಕ್ ವರ್ಮಾ (22), ಕೀರನ್ ಪೊಲಾರ್ಡ್ (3) ಬೇಗನೆ ವಿಕೆಟ್ ಒಪ್ಪಿಸಿದ್ದರು. ಆದರೆ ಮತ್ತೊಂದೆಡೆ ಅಬ್ಬರಿಸುವ ಮೂಲಕ ಇಶಾನ್ ಕಿಶನ್ ಮುಂಬೈ ತಂಡಕ್ಕೆ ಆಸರೆಯಾಗಿ ನಿಂತರು.

ಅದರಂತೆ ಸಿಕ್ಸ್​ ಫೋರ್​ಗಳ ಸುರಿಮಳೆಗೈಯ್ಯುತ್ತಾ ಕಿಶನ್ ಅರ್ಧಶತಕ ಪೂರೈಸಿದ್ದರು. ಅಲ್ಲದೆ 48 ಎಸೆತಗಳಲ್ಲಿ 2 ಭರ್ಜರಿ ಸಿಕ್ಸರ್ ಹಾಗೂ 11 ಬೌಂಡರಿಗಳೊಂದಿಗೆ ಅಜೇಯ 81 ರನ್​ಗಳಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡದ ಮೊತ್ತವನ್ನು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 177 ಕ್ಕೆ ತಂದು ನಿಲ್ಲಿಸಿದ್ದರು. ಇದಾಗ್ಯೂ ಲಲಿತ್ ಯಾದವ್ (48) ಮತ್ತು ಅಕ್ಷರ್ ಪಟೇಲ್ (38) ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು 4 ವಿಕೆಟ್​ಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್