IPL 2022 MI vs DC Live Streaming: ಆರ್​ಸಿಬಿ ಪ್ಲೇ ಆಫ್​ಗೇರಲು ಡೆಲ್ಲಿ ಸೋಲಲೇಬೇಕು! ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ

IPL 2022 MI vs DC Live Streaming: ಐಪಿಎಲ್ 2022 ರ ಅಗ್ರ ಮೂರು ತಂಡಗಳು ಬಹುತೇಕ ನಿರ್ಧಾರವಾಗಿವೆ, ಆದರೂ ಉಳಿದ ಒಂದು ಸ್ಥಾನಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪೈಪೋಟಿ ನಡೆಯುತ್ತಿದೆ.

IPL 2022 MI vs DC Live Streaming: ಆರ್​ಸಿಬಿ ಪ್ಲೇ ಆಫ್​ಗೇರಲು ಡೆಲ್ಲಿ ಸೋಲಲೇಬೇಕು! ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ
ಪಂತ್, ರೋಹಿತ್
Follow us
TV9 Web
| Updated By: ಪೃಥ್ವಿಶಂಕರ

Updated on: May 20, 2022 | 4:23 PM

ಐಪಿಎಲ್ 2022 (IPL 2022)ರ ಅಗ್ರ ಮೂರು ತಂಡಗಳು ಬಹುತೇಕ ನಿರ್ಧಾರವಾಗಿವೆ, ಆದರೂ ಉಳಿದ ಒಂದು ಸ್ಥಾನಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ (Royal Challengers Bangalore and Delhi Capitals) ನಡುವೆ ಪೈಪೋಟಿ ನಡೆಯುತ್ತಿದೆ. ಈ ಲೀಗ್‌ನ ಪ್ರಮುಖ ಪಂದ್ಯ ಶನಿವಾರ ನಡೆಯಲಿದ್ದು, ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಲಿದೆ. ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್ ತಂಡ 13 ಪಂದ್ಯಗಳಲ್ಲಿ ಏಳು ಗೆಲುವಿನೊಂದಿಗೆ 14 ಅಂಕ ಗಳಿಸಿದೆ. ಸದ್ಯ ಅವರು ಐದನೇ ಸ್ಥಾನದಲ್ಲಿದ್ದಾರೆ. ಅಗ್ರ ನಾಲ್ಕನೇ ಸ್ಥಾನವನ್ನು ತಲುಪಲು, ಅವರು ಯಾವುದೇ ಬೆಲೆ ತೆತ್ತಾದರೂ ಈ ಪಂದ್ಯವನ್ನು ಗೆಲ್ಲಬೇಕಾಗುತ್ತದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿದ್ದು, ಆರು ಪಂದ್ಯಗಳಲ್ಲಿ ಸೋಲು ಎದುರಿಸಬೇಕಾಯಿತು. ಜೊತೆಗೆ 16 ಅಂಕಗಳನ್ನು ಹೊಂದಿದೆ. ದೆಹಲಿ ತಂಡವು ಮುಂಬೈ ತಂಡವನ್ನು ಸೋಲಿಸಿದರೆ, ಅದು ಪ್ಲೇಆಫ್ ತಲುಪುತ್ತದೆ ಏಕೆಂದರೆ ಅದರ ನೆಟ್-ರೇಟ್ RCB ಗಿಂತ ಉತ್ತಮವಾಗಿದೆ. ಆದರೆ, ಸೋತರೆ ಆರ್‌ಸಿಬಿ ಸ್ಥಾನ ಖಚಿತವಾಗಲಿದೆ.

ಇದನ್ನೂ ಓದಿ:48 ವರ್ಷಗಳ ಬಳಿಕ ಪೂರ್ವಜರು ನೆಲೆಸಿದ್ದ ಮನೆ ತೊರೆದ ಗಂಗೂಲಿ! ಖರೀದಿಸಿದ್ದು ಎಷ್ಟು ಕೋಟಿಯ ಬಂಗಲೆ ಗೊತ್ತಾ?

ಇದನ್ನೂ ಓದಿ
Image
48 ವರ್ಷಗಳ ಬಳಿಕ ಪೂರ್ವಜರು ನೆಲೆಸಿದ್ದ ಮನೆ ತೊರೆದ ಗಂಗೂಲಿ! ಖರೀದಿಸಿದ್ದು ಎಷ್ಟು ಕೋಟಿಯ ಬಂಗಲೆ ಗೊತ್ತಾ?
Image
Hardik Pandya: ಗುಜರಾತ್ ನಾಯಕನನ್ನು ಬೌಲಿಂಗ್ ಮಾಡದಂತೆ ತಡೆದು ನಿಲ್ಲಿಸಿದ ವಿರಾಟ್ ಕೊಹ್ಲಿ: ವಿಡಿಯೋ ನೋಡಿ

ವಾರ್ನರ್ ಜೊತೆ ಓಪನರ್ ಯಾರು? ಡೆಲ್ಲಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಉತ್ತಮ ಲಯದಲ್ಲಿದ್ದಾರೆ ಆದರೆ ಎರಡನೇ ಓಪನರ್ ತಂಡಕ್ಕೆ ಚಿಂತೆಯ ವಿಷಯವಾಗಿ ಉಳಿದಿದ್ದಾರೆ. ಪೃಥ್ವಿ ಶಾ ಅನುಪಸ್ಥಿತಿಯಲ್ಲಿ ಮನದೀಪ್ ಸಿಂಗ್ ಮತ್ತು ಶ್ರೀಕರ್ ಭರತ್ ನಿರಾಸೆ ಮೂಡಿಸಿದ್ದಾರೆ. ಆದರೂ ಟೈಫಾಯಿಡ್ ನಿಂದ ಚೇತರಿಸಿಕೊಂಡಿರುವ ಪೃಥ್ವಿ ಪ್ರಸಕ್ತ ಋತುವಿನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಎಲ್ಲರ ಕಣ್ಣುಗಳು ಕೂಡ ನಾಯಕ ರಿಷಬ್ ಪಂತ್ ಮೇಲಿದೆ. ರಾಯಲ್ಸ್ ವಿರುದ್ಧದ ನಾಲ್ಕು ಎಸೆತಗಳ ಇನ್ನಿಂಗ್ಸ್‌ನಲ್ಲಿ ಪಂತ್ ಎರಡು ಸಿಕ್ಸರ್‌ಗಳನ್ನು ಹೊಡೆದರು ಆದರೆ ಇಲ್ಲಿಯವರೆಗೆ ಅವರು ಸಮರ್ಥವಾಗಿರುವ ಪಂದ್ಯ-ವಿಜೇತ ಇನ್ನಿಂಗ್ಸ್‌ಗಳನ್ನು ಆಡಲು ಸಾಧ್ಯವಾಗಲಿಲ್ಲ.

ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ? ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ಶನಿವಾರ, ಮೇ 21 ರಂದು ನಡೆಯಲಿದೆ.

ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ? ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ? ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ಟಾಸ್ ಸಂಜೆ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.

ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು? ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ನೋಡಬಹುದು.

ಮುಂಬೈ ಇಂಡಿಯನ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಲೈವ್ ಸ್ಟ್ರೀಮಿಂಗ್ ಅನ್ನು ಆನ್‌ಲೈನ್‌ನಲ್ಲಿ ಎಲ್ಲಿ ವೀಕ್ಷಿಸಬಹುದು? ಲೈವ್ ಸ್ಟ್ರೀಮಿಂಗ್ ಚಂದಾದಾರಿಕೆಯೊಂದಿಗೆ ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಪಂದ್ಯವನ್ನು ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ