IPL 2022 MI vs SRH Live Streaming: ಕೇನ್ ಪಡೆ ಗೆಲ್ಲಲೇಬೇಕು.. ಮುಂಬೈಗೆ ಔಪಚಾರಿಕ; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ

IPL 2022 MI vs SRH Live Streaming: ಮುಂಬೈಗೆ, ಈ ಪಂದ್ಯಾವಳಿ ಬಹಳ ಹಿಂದೆಯೇ ಮುಗಿದಿದೆ. ಈ ಋತುವಿನಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಗುಳಿದ ಮೊದಲ ತಂಡವಾಯಿತು. ಈಗ ಅವರಿಗೆ ಉಳಿದಿರುವ ಪಂದ್ಯಗಳು ಕೇವಲ ಔಪಚಾರಿಕತೆಗಳಾಗಿವೆ.

IPL 2022 MI vs SRH Live Streaming: ಕೇನ್ ಪಡೆ ಗೆಲ್ಲಲೇಬೇಕು.. ಮುಂಬೈಗೆ ಔಪಚಾರಿಕ; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ
MI vs SRH
Follow us
TV9 Web
| Updated By: ಪೃಥ್ವಿಶಂಕರ

Updated on:May 16, 2022 | 6:22 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL) ನ 15 ನೇ ಋತುವಿನಲ್ಲಿ, ಎರಡು ಮಾಜಿ ಚಾಂಪಿಯನ್ ತಂಡಗಳು ಮಂಗಳವಾರ ಪರಸ್ಪರ ಮುಖಾಮುಖಿಯಾಗಲಿವೆ. ಅದರಲ್ಲಿ ಒಂದು ತಂಡ ಈ ಪಂದ್ಯಾವಳಿಯಿಂದ ಈಗಾಗಲೇ ಹೊರಬಿದ್ದಿದೆ. ಆದರೆ ಇನ್ನೊಂದು ತಂಡಕ್ಕೆ ಈ ಪಂದ್ಯವನ್ನು ಗೆದ್ದರೆ ಪ್ಲೇ ಆಫ್​ಗೇರುವ ಅವಕಾಶಬಿದೆ. ಈ ಎರಡು ತಂಡಗಳು ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ (MI vs SRH). ಮುಂಬೈ ತಂಡ ಈಗಾಗಲೇ ಐಪಿಎಲ್-2022ರ ಪ್ಲೇಆಫ್ ರೇಸ್‌ನಿಂದ ಹೊರಗುಳಿದಿದೆ. ಮತ್ತೊಂದೆಡೆ, ಹೈದರಾಬಾದ್‌ನ ಭರವಸೆ ಇನ್ನೂ ಜೀವಂತವಾಗಿದೆ. ಈ ಭರವಸೆಯನ್ನು ಜೀವಂತವಾಗಿರಿಸಲು ಹೈದರಾಬಾದ್‌ಗೆ ಗೆಲುವಿನ ಅವಶ್ಯಕತೆಯಿದೆ. ಈ ಗೆಲುವಿನ ಆಸೆಯೊಂದಿಗೆ ಕೇನ್ ವಿಲಿಯಮ್ಸನ್ (Kane Williamson) ನೇತೃತ್ವದ ತಂಡ ಮುಂಬೈನ ವಾಂಖೆಡೆ ಕ್ರೀಡಾಂಗಣಕ್ಕೆ ಇಳಿದು ರೋಹಿತ್ ಶರ್ಮಾ (Rohit Sharma) ನಾಯಕತ್ವದ ತಂಡಕ್ಕೆ ಸೆಡ್ಡು ಹೊಡೆಯುವ ಮೂಲಕ ತನ್ನ ಸ್ಥಾನವನ್ನು ಗಟ್ಟಿ ಮಾಡಿಕೊಳ್ಳಲು ಪ್ರಯತ್ನಿಸಲಿದೆ.

ಮುಂಬೈಗೆ, ಈ ಪಂದ್ಯಾವಳಿ ಬಹಳ ಹಿಂದೆಯೇ ಮುಗಿದಿದೆ. ಈ ಋತುವಿನಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಗುಳಿದ ಮೊದಲ ತಂಡವಾಯಿತು. ಈಗ ಅವರಿಗೆ ಉಳಿದಿರುವ ಪಂದ್ಯಗಳು ಕೇವಲ ಔಪಚಾರಿಕತೆಗಳಾಗಿವೆ. ಇದರಲ್ಲಿ ಅವರು ತನ್ನ ಬೆಂಚ್ ಶಕ್ತಿಯನ್ನು ಪರೀಕ್ಷಿಸಲು ಮತ್ತು ಮುಂದಿನ ವರ್ಷಕ್ಕೆ ತನ್ನ ತಂಡವನ್ನು ಸಿದ್ಧಪಡಿಸಲು ಬಯಸುತ್ತಾರೆ. ಕಳೆದ ಪಂದ್ಯದಲ್ಲಿ ಮುಂಬೈ ತಂಡ ಕೀರಾನ್ ಪೊಲಾರ್ಡ್ ಅವರನ್ನು ಕೊರಗಿಟ್ಟು ಯುವ ಆಟಗಾರ ಟ್ರಿಸ್ಟಾನ್ ಸ್ಟಬ್ಸ್​ಗೆ ಅವಕಾಶ ನೀಡಿತ್ತು. ಈ ಪಂದ್ಯದಲ್ಲೂ ಮುಂಬೈ ಇದೇ ರೀತಿಯ ಬದಲಾವಣೆ ಮಾಡಿಕೊಂಡರೆ ಆಶ್ಚರ್ಯವಿಲ್ಲ. ಮತ್ತೊಂದೆಡೆ, ಸನ್‌ರೈಸರ್ಸ್ ತಮ್ಮ ಅತ್ಯುತ್ತಮ ತಂಡವನ್ನು ಕಣಕ್ಕಿಳಿಸಲು ಪ್ರಯತ್ನಿಸುತ್ತದೆ ಏಕೆಂದರೆ ಅವರಿಗೆ ಗೆಲುವು ಬಹಳ ಮುಖ್ಯವಾಗಿದೆ.

ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ? ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯವು ಮಂಗಳವಾರ, ಮೇ 17 ರಂದು ನಡೆಯಲಿದೆ.

ಇದನ್ನೂ ಓದಿ
Image
IPL 2022: ಐಪಿಎಲ್​ನಿಂದ ರಹಾನೆ ಔಟ್! ಟೀಂ ಇಂಡಿಯಾದಲ್ಲೂ ಇಲ್ಲ ಸ್ಥಾನ; ಅಪಾಯದಲ್ಲಿ ಅಜಿಂಕ್ಯ ವೃತ್ತಿಜೀವನ
Image
Commonwealth Games-2022: ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಭಾರತದ ಮಹಿಳಾ ಕುಸ್ತಿ ತಂಡ ಪ್ರಕಟ..!
Image
IPL 2022: ಅದ್ಭುತ ಆಟದಿಂದ ವಯಸ್ಸು ಕೇವಲ ಸಂಖ್ಯೆ ಅಷ್ಟೇ ಎಂಬುದನ್ನು ಸಾಭೀತುಪಡಿಸಿದ ಭಾರತದ ಹಿರಿಯ ಕ್ರಿಕೆಟಿಗರು

ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ? ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಈ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಯಾವಾಗ ಆರಂಭವಾಗುತ್ತದೆ? ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ಟಾಸ್ ಸಂಜೆ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 7:30 ಕ್ಕೆ ಆರಂಭವಾಗಲಿದೆ.

ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ನೀವು ಎಲ್ಲಿ ವೀಕ್ಷಿಸಬಹುದು? ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ನೀವು ಎಲ್ಲಿ ವೀಕ್ಷಿಸಬಹುದು? ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಚಂದಾದಾರಿಕೆಯೊಂದಿಗೆ Disney+Hotstar ನಲ್ಲಿ ನೋಡಬಹುದು.

Published On - 6:18 pm, Mon, 16 May 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್