AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮತ್ತೆ ಸಂಕಷ್ಟಕ್ಕೆ ಸಿಲುಕಿದ CSK: ಸ್ಟಾರ್ ಆಟಗಾರ ಅಲಭ್ಯ

IPL 2022: ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ: ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಮೊಯಿನ್ ಅಲಿ, ರವೀಂದ್ರ ಜಡೇಜಾ, ಶಿವಂ ದುಬೆ, ದೀಪಕ್ ಚಹರ್, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಕೆಎಂ ಆಸಿಫ್

IPL 2022: ಮತ್ತೆ ಸಂಕಷ್ಟಕ್ಕೆ ಸಿಲುಕಿದ CSK: ಸ್ಟಾರ್ ಆಟಗಾರ ಅಲಭ್ಯ
CSK
TV9 Web
| Updated By: ಝಾಹಿರ್ ಯೂಸುಫ್|

Updated on: Mar 23, 2022 | 3:01 PM

Share

ಮಹೇಂದ್ರ ಸಿಂಗ್ ಧೋನಿ (MS Dhoni) ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಐಪಿಎಲ್​ಗಾಗಿ ಸಿದ್ದತೆಯಲ್ಲಿರುವಾಗಲೇ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದೆ. ಕೆಲ ದಿನಗಳ ಹಿಂದೆಯಷ್ಟೇ ಗಾಯಗೊಂಡಿದ್ದ ಸ್ಟಾರ್ ಆಟಗಾರ ರುತುರಾಜ್ ಗಾಯಕ್ವಾಡ್ ಮತ್ತೆ ಸಿಎಸ್​ಕೆ ಬಳಗವನ್ನು ಸೇರಿಕೊಂಡಿದ್ದರು. ಇದರಿಂದ ಆರಂಭಿಕ ಸಮಸ್ಯೆಯನ್ನು ನೀಗಿಸಿಕೊಂಡಿದ್ದ ಸಿಎಸ್​ಕೆಗೆ ಇದೀಗ ಮಧ್ಯಮ ಕ್ರಮಾಂಕದಲ್ಲಿ ಸಮಸ್ಯೆ ಎದುರಾಗಿದೆ. ತಂಡದ ಸ್ಟಾರ್ ಆಟಗಾರ ಮೊಯೀನ್ ಅಲಿ ಇನ್ನೂ ಕೂಡ ಸಿಎಸ್​ಕೆ ಕ್ಯಾಂಪ್ ಸೇರಿಲ್ಲ. ಇತ್ತ ಸಿಎಸ್​ಕೆ ತಂಡವು ಮಾರ್ಚ್​ 16 ರಂದು ಕೆಕೆಆರ್ ವಿರುದ್ದ ಮೊದಲ ಪಂದ್ಯವಾಡಲಿದೆ. ಆದರೆ ಈ ಪಂದ್ಯಕ್ಕೆ ಇಂಗ್ಲೆಂಡ್ ಆಲ್​ರೌಂಡರ್ ಮೊಯೀನ್ ಅಲಿ ಅಲಭ್ಯರಾಗಲಿದ್ದಾರೆ.

ಕ್ರಿಕ್‌ಇನ್‌ಫೋ ಮಾಹಿತಿ ಪ್ರಕಾರ, ಮೊಯೀನ್ ಅಲಿ ಭಾರತಕ್ಕೆ ಬರಲು ವೀಸಾ ಸಮಸ್ಯೆ ಎದುರಾಗಿದೆ. ಹೀಗಾಗಿ ಇಂಗ್ಲೆಂಡ್​ನಿಂದ ಭಾರತಕ್ಕೆ ಆಗಮಿಸಲು ವಿಳಂಬವಾಗಿದೆ ಎಂದು ತಿಳಿದು ಬಂದಿದೆ. ಒಂದು ವೇಳೆ ಮೊಯೀನ್ ಅಲಿ ಬುಧವಾರ ತಲುಪಿದರೂ ಮೂರು ದಿನಗಳ ಕಾಲ ಕ್ವಾರಂಟೈನ್​ನಲ್ಲಿರಬೇಕಾಗುತ್ತದೆ. ಹೀಗಾಗಿ ಮಾರ್ಚ್​ 26 ರಂದು ನಡೆಯಲಿರುವ ಐಪಿಎಲ್​ ಉದ್ಘಾಟನಾ ಪಂದ್ಯವನ್ನು ಮೊಯೀನ್ ಅಲಿ ಮಿಸ್ ಮಾಡಿಕೊಳ್ಳಲಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಎಸ್​ಕೆ ಸಿಇಒ ಕಾಸಿ ವಿಶ್ವನಾಥನ್, ಮೊಯೀನ್ ಅಲಿ ಫೆಬ್ರವರಿ 28 ರಂದು ವೀಸಾಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಕೆಯಾಗಿ 20 ದಿನಕ್ಕೂ ಹೆಚ್ಚು ಸಮಯ ಕಳೆದಿದೆ. ಇದಾಗ್ಯೂ ಅವರ ಪ್ರಯಾಣದ ದಾಖಲೆಗಳನ್ನು ಸ್ವೀಕರಿಸಿಲ್ಲ. ಅವರು ಶೀಘ್ರದಲ್ಲೇ ತಂಡವನ್ನು ಸೇರಿಕೊಳ್ಳುತ್ತಾರೆ ಎಂದು ನಾವು ಭಾವಿಸುತ್ತೇವೆ. ದಾಖಲೆಗಳನ್ನು ಪಡೆದ ನಂತರ ಅವರು ಮುಂದಿನ ವಿಮಾನದಲ್ಲಿ ಭಾರತಕ್ಕೆ ಹಾರಲಿದ್ದಾರೆ ತಿಳಿಸಿದ್ದಾರೆ. ಆದರೆ ಬಿಸಿಸಿಐ 3 ದಿನಗಳ ಕಡ್ಡಾಯ ಕ್ವಾರಂಟೈನ್ ನಿಯಮ ಜಾರಿಗೊಳಿಸಿರುವ ಕಾರಣ, ಮಾರ್ಚ್​ 23 ರಂದು ಮೊಯೀನ್ ಅಲಿ ಆಗಮಿಸಿದರೂ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲು ಸಾಧ್ಯವಾಗುವುದಿಲ್ಲ. ಅತ್ತ ಈಗಾಗಲೇ ಸಿಎಸ್​ಕೆ ತಂಡದ ಪ್ರಮುಖ ವೇಗಿ ದೀಪಕ್ ಚಹರ್ ಕೂಡ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಇದೀಗ ಸ್ಪಿನ್ ಆಲ್​ರೌಂಡರ್ ಕೂಡ ಮೊದಲ ಪಂದ್ಯಕ್ಕೆ ಅಲಭ್ಯರಾಗುತ್ತಿರುವುದು ತಂಡದ ಚಿಂತೆಗೆ ಕಾರಣವಾಗಿದೆ.

ಮೊಯಿನ್ ಉತ್ತಮ ಪ್ರದರ್ಶನ: ಐಪಿಎಲ್ 2021 ರಲ್ಲಿ ಸಿಎಸ್​ಕೆ ಪರ ಕಾಣಿಸಿಕೊಂಡ ಮೊಯೀನ್ ಅಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆಡಿದ 15 ಇನ್ನಿಂಗ್ಸ್‌ಗಳಲ್ಲಿ 357 ರನ್ ಗಳಿಸಿದ್ದರು. ಇದಲ್ಲದೇ 6 ವಿಕೆಟ್ ಕಬಳಿಸಿದ್ದಾರೆ. ಹೀಗಾಗಿಯೇ ಸಿಎಸ್​ಕೆ ತಂಡವು ಮೊಯೀನ್ ಅಲಿ ಅವರನ್ನು ಈ ಬಾರಿ ರಿಟೈನ್ ಮಾಡಿಕೊಂಡಿತ್ತು. ಇದೀಗ ಉಳಿಸಿಕೊಂಡಿರುವ ಆಟಗಾರನೇ ಅಲಭ್ಯರಾಗುತ್ತಿರುವುದು ಸಿಎಸ್​ಕೆ ತಂಡಕ್ಕೆ ಹಿನ್ನಡೆಯಾಗಬಹುದು.

ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ: ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಮೊಯಿನ್ ಅಲಿ, ರವೀಂದ್ರ ಜಡೇಜಾ, ಶಿವಂ ದುಬೆ, ದೀಪಕ್ ಚಹರ್, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಎನ್ ಜಗದೀಶನ್, ಹರಿ ನಿಶಾಂತ್, ಸುಭ್ರಂಶು ಸೇನಾಪತಿ , ರಾಜವರ್ಧನ್ ಹಂಗರ್ಗೇಕರ್, ಭಗತ್ ವರ್ಮಾ, ಪ್ರಶಾಂತ್ ಸೋಲಂಕಿ, ಕ್ರಿಸ್ ಜೋರ್ಡನ್, ಡ್ವೈನ್ ಪ್ರಿಟೋರಿಯಸ್, ಡೆವೊನ್ ಕಾನ್ವೇ, ಆಡಮ್ ಮಿಲ್ನೆ, ಮಿಚೆಲ್ ಸ್ಯಾಂಟ್ನರ್.

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಇವರೇ..!

ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

(IPL 2022: Moeen Ali likely to miss CSK opener against KKR)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ