IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!

IPL 2022 RCB Team: RCB ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್.

IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!
RCB
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 14, 2022 | 2:54 PM

IPL 2022: ಐಪಿಎಲ್​ನ​ 60ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್​ ವಿರುದ್ದ ಆರ್​ಸಿಬಿ (RCB vs PBKS) ತಂಡ 54 ರನ್​ಗಳಿಂದ ಹೀನಾಯವಾಗಿ ಸೋತಿದೆ. ಈ ಸೋಲಿಗೆ ಪ್ರಮುಖ ಕಾರಣ ಆರ್​ಸಿಬಿ ತಂಡದ ವೇಗಿಗಳ ಕಳಪೆ ಬೌಲಿಂಗ್. ಏಕೆಂದರೆ ಪವರ್​ಪ್ಲೇನಲ್ಲಿ ಆರ್​ಸಿಬಿ ಬೌಲರ್​ಗಳು ನೀಡಿದ್ದು ಬರೋಬ್ಬರಿ 83 ರನ್​ಗಳು. ಅದೇ ಪಂಜಾಬ್ ಕಿಂಗ್ಸ್ ನೀಡಿದ್ದು ಕೇವಲ 44 ರನ್​ ಮಾತ್ರ. ಅದರಲ್ಲೂ ಆರ್​ಸಿಬಿ ತಂಡದ ಇಬ್ಬರು ವೇಗಿಗಳು ದುಬಾರಿಯಾಗಿದ್ದರು. ಏಕೆಂದರೆ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ (Josh Hazelwood)​ 4 ಓವರ್​ಗಳಲ್ಲಿ ಬರೋಬ್ಬರಿ 64 ರನ್​ ಬಿಟ್ಟುಕೊಟ್ಟಿದ್ದರು. ಮತ್ತೊಂದೆಡೆ ಮೊಹಮ್ಮದ್ ಸಿರಾಜ್ (Mohammed Siraj) 2 ಓವರ್​ನಲ್ಲಿ ನೀಡಿದ್ದು 36 ರನ್​ಗಳು.

ಅಂದರೆ ಮೊಹಮ್ಮದ್ ಸಿರಾಜ್ ಹಾಗೂ ಜೋಶ್ ಹ್ಯಾಝಲ್​ವುಡ್​ 6 ಓವರ್​ಗಳಲ್ಲಿ ನೀಡಿರುವುದು ಬರೋಬ್ಬರಿ 100 ರನ್​ಗಳು. ಈ ಇಬ್ಬರು ಬೌಲರ್​ಗಳು ಹೆಚ್ಚಿನ ರನ್​ ಬಿಟ್ಟು ಕೊಟ್ಟ ಪರಿಣಾಮ ಪಂಜಾಬ್ ಕಿಂಗ್ಸ್​ ದೊಡ್ಡ ಮೊತ್ತಗಳಿಸಿತು. ಏಕೆಂದರೆ ಉಳಿದ 14 ಓವರ್​ಗಳಲ್ಲಿ ಮೂಡಿಬಂದಿದ್ದು 109 ರನ್​ಗಳು ಮಾತ್ರ. ಇಲ್ಲಿ ಜೋಶ್ ಹ್ಯಾಝಲ್​ವುಡ್ ಪ್ರತಿ ಓವರ್​ಗೆ 16 ರನ್​ನಂತೆ ಬಿಟ್ಟು ಕೊಟ್ಟರೆ, ಸಿರಾಜ್ 18 ರನ್​ನಂತೆ 36 ರನ್​ ಹೊಡೆಸಿಕೊಂಡಿದ್ದರು. ಆದರೆ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಇನ್ನು ಶಹಬಾಜ್ ಅಹ್ಮದ್ 4 ಓವರ್​ಗಳಲ್ಲಿ 40 ರನ್ ನೀಡಿದರೂ 1 ವಿಕೆಟ್ ಕಬಳಿಸಿದ್ದರು.

ಇನ್ನುಳಿದಂತೆ ವನಿಂದು ಹಸರಂಗ 4 ಓವರ್​ಗಳಲ್ಲಿ 15 ರನ್ ನೀಡಿದ 2 ವಿಕೆಟ್ ಪಡೆದರು. ಹಾಗೆಯೇ ಹರ್ಷಲ್ ಪಟೇಲ್ 4 ಓವರ್​ಗಳಲ್ಲಿ 34 ರನ್ ನೀಡಿ 4 ವಿಕೆಟ್ ಉರುಳಿಸಿದ್ದರು. ಇನ್ನು ಪಾರ್ಟ್​ ಟೈಮ್ ಸ್ಪಿನ್ನರ್ ಆಗಿ ಕಾಣಿಸಿಕೊಂಡ ಗ್ಲೆನ್ ಮ್ಯಾಕ್ಸ್​ವೆಲ್ 2 ಓವರ್​ಗಳಲ್ಲಿ 17 ರನ್ ನೀಡಿ 1 ವಿಕೆಟ್ ಪಡೆದು ಮಿಂಚಿದರು.

ಇದನ್ನೂ ಓದಿ
Image
MS Dhoni: ಸೂಪರ್ ಬೆಡಗಿ ಜೊತೆ ಸಿನಿಮಾ ನಿರ್ಮಿಸಲು ಮುಂದಾದ ಧೋನಿ..!
Image
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
Image
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!
Image
AB De Villiers: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

ಅಂದರೆ ಇಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಜೋಶ ಹ್ಯಾಝಲ್​ವುಡ್​ 36 ಎಸೆತಗಳಲ್ಲಿ 100 ರನ್​ ನೀಡಿದ್ದು ಆರ್​ಸಿಬಿ ಪಾಲಿಗೆ ಮುಳುವಾಯಿತು. ಅದರಂತೆ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು 209 ರನ್​ ಕಲೆಹಾಕಿತು. ಆದರೆ ಬೃಹತ್ ಟಾರ್ಗೆಟ್ ಅನ್ನು ಬೆನ್ನತ್ತಿದ ಆರ್​ಸಿಬಿ ತಂಡವು ಆರಂಭದಲ್ಲೇ ಒತ್ತಡಕ್ಕೆ ಸಿಲುಕಿತ್ತು. ಮೊದಲ 3 ಓವರ್​ಗಳಲ್ಲಿ ಬಿರುಸಿನ ಬ್ಯಾಟಿಂಗ್ ಮೂಲಕ 33 ರನ್​ಗಳಿಸಿ ಉತ್ತಮ ಆರಂಭ ಪಡೆದರೂ, ಆ ಬಳಿಕ ಬೃಹತ್ ಟಾರ್ಗೆಟ್​ ಅನ್ನು ಚೇಸ್ ಮಾಡಲು ವಿಫಲರಾಗಿ ಆರ್​ಸಿಬಿ ತಂಡವು ಅಂತಿಮವಾಗಿ 54 ರನ್​ಗಳಿಂದ ಸೋಲೊಪ್ಪಿಕೊಂಡಿತು.

RCB ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು