ಐಪಿಎಲ್ ಸೀಸನ್ 15 ರ (IPL 2022) ಮೊದಲ ಪಂದ್ಯದಲ್ಲೇ ಮಹೇಂದ್ರ ಸಿಂಗ್ ಧೋನಿ (MS Dhoni) ಅಬ್ಬರಿಸಿದ್ದಾರೆ. ಕೆಕೆಆರ್ ತಂಡದ ಕರಾರುವಾಕ್ ದಾಳಿಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಸಿಎಸ್ಕೆ ತಂಡಕ್ಕೆ ಧೋನಿ ಆಸರೆಯಾದರು. ಅಷ್ಟೇ ಅಲ್ಲದೆ ಭರ್ಜರಿ ಅರ್ಧಶತಕ ಬಾರಿಸಿ ಅಜೇಯರಾಗಿ ಉಳಿದರು. ಇದಕ್ಕೂ ಮುನ್ನ ಟಾಸ್ ಗೆದ್ದ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಸಿಎಸ್ಕೆ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 28 ರನ್ಗಳಿಸುವಷ್ಟರಲ್ಲಿ ಸಿಎಸ್ಕೆ ತಂಡದ ಆರಂಭಿಕರಾದ ರುತುರಾಜ್ ಗಾಯಕ್ವಾಡ್ ಹಾಗೂ ಡೆವೊನ್ ಕಾನ್ವೆ ವಿಕೆಟ್ ಒಪ್ಪಿಸಿದ್ದರು. ಇನ್ನು 28 ರನ್ಗಳಿಸಿ ರಾಬಿನ್ ಉತ್ತಪ್ಪ ಸ್ಟಂಪ್ ಔಟ್ ಆಗಿ ಹೊರನಡೆದಿದ್ದರು. ಇದರ ಬೆನ್ನಲ್ಲೇ ಅಂಬಾಟಿ ರಾಯುಡು ಹಾಗೂ ಶಿವಂ ದುಬೆ ಕೂಡ ವಿಕೆಟ್ ಕೈಚೆಲ್ಲಿದ್ದರು.
ತಂಡದ ಮೊತ್ತ 61 ಕ್ಕೆ 5 ವಿಕೆಟ್ ಕಳೆದುಕೊಂಡಿದ್ದ ವೇಳೆ ಕ್ರೀಸ್ಗೆ ಆಗಮಿಸಿದ ಧೋನಿ ನಾಯಕ ಜಡೇಜಾ ಜೊತೆ ಇನಿಂಗ್ಸ್ ಕಟ್ಟುವ ಜವಾಬ್ದಾರಿವಹಿಸಿಕೊಂಡರು. ಆರಂಭದಲ್ಲಿ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದ ಧೋನಿ ಅಂತಿಮ ಓವರ್ಗಳ ವೇಳೆ ತಮ್ಮ ಹಳೆಯ ಖದರ್ ತೋರಿಸಿದರು. ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸುವ ಮೂಲಕ ಅಬ್ಬರಿಸಿದ ಧೋನಿ 38 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಭರ್ಜರಿ ಇನಿಂಗ್ಸ್ನಲ್ಲಿ ಧೋನಿ ಬ್ಯಾಟ್ನಿಂದ 1 ಸಿಕ್ಸ್ ಹಾಗೂ 7 ಫೋರ್ಗಳು ಮೂಡಿಬಂದಿದ್ದವು.
ವಿಶೇಷ ಎಂದರೆ ಇದು 2 ವರ್ಷಗಳ ಬಳಿಕ ಧೋನಿ ಬಾರಿಸಿದ ಅರ್ಧಶತಕವಾಗಿದೆ. ಅಂದರೆ 2019 ರ ಐಪಿಎಲ್ನಲ್ಲಿ ಕೊನೆಯ ಬಾರಿ ಧೋನಿ ಹಾಫ್ ಸೆಂಚುರಿ ಸಿಡಿಸಿದ್ದರು. ಆರ್ಸಿಬಿ ವಿರುದ್ದ ನಡೆದ ಪಂದ್ಯದಲ್ಲಿ ಧೋನಿ 48 ಎಸೆತಗಳಲ್ಲಿ ಅಜೇಯ 84 ರನ್ ಬಾರಿಸಿದ್ದು ಕೊನೆಯ ಅರ್ಧಶತಕವಾಗಿತ್ತು. ಇದಾದ ಬಳಿಕ 2020 ಹಾಗೂ 2021 ರ ಐಪಿಎಲ್ನಲ್ಲಿ ಕಾಣಿಸಿಕೊಂಡರೂ ಧೋನಿ ಒಂದೇ ಒಂದು ಅರ್ಧಶತಕ ಬಾರಿಸಿರಲಿಲ್ಲ. ಇದೀಗ ಕೆಕೆಆರ್ ವಿರುದ್ದದ ಪಂದ್ಯದಲ್ಲಿ ಕೇವಲ 38 ಎಸೆತಗಳಲ್ಲಿ ಅಜೇಯ ಅರ್ಧಶತಕ ಬಾರಿಸುವ ಮೂಲಕ ಧೋನಿ ಮಿಂಚಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಧೋನಿ ಅವರ ಅರ್ಧಶತಕದ ನೆರವಿನಿಂದ ಸಿಎಸ್ಕೆ ತಂಡವು 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 131 ರನ್ಗಳಿಸಿತು.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ:
ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಮೊಯಿನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಎನ್ ಜಗದೀಶನ್, ಹರಿ ನಿಶಾಂತ್, ಸುಭ್ರಂಶು ಸೇನಾಪತಿ , ರಾಜವರ್ಧನ್ ಹಂಗರ್ಗೇಕರ್, ಭಗತ್ ವರ್ಮಾ, ಪ್ರಶಾಂತ್ ಸೋಲಂಕಿ, ಕ್ರಿಸ್ ಜೋರ್ಡನ್, ಡ್ವೈನ್ ಪ್ರಿಟೋರಿಯಸ್, ಡೆವೊನ್ ಕಾನ್ವೇ, ಆಡಮ್ ಮಿಲ್ನೆ, ಮಿಚೆಲ್ ಸ್ಯಾಂಟ್ನರ್.
ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?
ಇದನ್ನೂ ಓದಿ: IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು
ಇದನ್ನೂ ಓದಿ: IPL 2022: ಐಪಿಎಲ್ನ ಆರಂಭಿಕ ಪಂದ್ಯಗಳಿಗೆ 23 ಸ್ಟಾರ್ ಆಟಗಾರರು ಅಲಭ್ಯ