KL Rahul: ಹೊಸ ತಂಡಕ್ಕೆ ಕೆಎಲ್ ರಾಹುಲ್ ನಾಯಕ..?

IPL 2022: ವಿಶೇಷ ಆಯ್ಕೆಗೂ ಮೊತ್ತ ನಿಗದಿ ಮಾಡಲಾಗಿದೆ. ಅದರಂತೆ ಹೊಸ ಫ್ರಾಂಚೈಸಿಗಳು 33 ಕೋಟಿಯೊಳಗೆ ಮೂವರು ಆಟಗಾರರನ್ನು ಆಯ್ಕೆ ಮಾಡಬಹುದು. ಇಲ್ಲಿ ಫ್ರಾಂಚೈಸಿ ಮೊದಲ ಆಟಗಾರನಿಗೆ 15 ಕೋಟಿ, 2ನೇ ಆಟಗಾರನಿಗೆ 11 ಕೋಟಿ ಹಾಗೂ 3ನೇ ಆಟಗಾರನಿಗೆ 7 ಕೋಟಿ ನೀಡಬೇಕಾಗುತ್ತದೆ.

KL Rahul: ಹೊಸ ತಂಡಕ್ಕೆ ಕೆಎಲ್ ರಾಹುಲ್ ನಾಯಕ..?
KL Rahul
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 01, 2021 | 9:55 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2022 Mega Auction) ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದೆ. ಇದೀಗ ಸ್ಪೆಷಲ್ ಪಿಕ್ ಆಯ್ಕೆಯ ಮೂವರು ಆಟಗಾರರನ್ನು ಉಳಿಸಿಕೊಳ್ಳಲು ಹೊಸ ಫ್ರಾಂಚೈಸಿಗಳಿಗೆ ಬಿಸಿಸಿಐ ಸೂಚಿಸಿದೆ. ಅಂದರೆ 8 ಫ್ರಾಂಚೈಸಿಗಳು ಬಿಡುಗಡೆ ಮಾಡಿದ ಆಟಗಾರರಿಂದ ಆರು ಆಟಗಾರರನ್ನು ನೇರವಾಗಿ ಆಯ್ಕೆ ಮಾಡುವ ಅವಕಾಶ ಲಕ್ನೋ ಹಾಗೂ ಅಹಮದಾಬಾದ್ ಫ್ರಾಂಚೈಸಿಗೆ ಸಿಗಲಿದೆ. ಅದರಂತೆ ಇದೀಗ ರಿಲೀಸ್ ಆಗಿರುವ ಆಟಗಾರರನ್ನು ಹೊಸ ಫ್ರಾಂಚೈಸಿಗಳು ಸಂಪರ್ಕಿಸಲಾರಂಭಿಸಿದ್ದಾರೆ. ಕೆಲ ಮೂಲಗಳ ಮಾಹಿತಿ ಪ್ರಕಾರ, ಲಕ್ನೋ ಫ್ರಾಂಚೈಸಿ ಪಂಜಾಬ್ ಕಿಂಗ್ಸ್​ ತಂಡದ ಮಾಜಿ ನಾಯಕ ಕೆಎಲ್ ರಾಹುಲ್ (KL Rahul) ಅವರನ್ನು ಸಂಪರ್ಕಿಸಿದೆ. ಅಷ್ಟೇ ಅಲ್ಲದೆ ತಂಡದ ನಾಯಕತ್ವ ಹಾಗೂ ಮೊದಲ ಆಯ್ಕೆಯ ಆಫರ್ ನೀಡಿದೆ ಹೇಳಲಾಗಿದೆ.

ಈ ಹಿಂದೆಯೇ ಕೆಎಲ್ ರಾಹುಲ್ ಲಕ್ನೋ ಫ್ರಾಂಚೈಸಿ ಪರ ಆಡಲಿದ್ದಾರೆ ಎಂದು ವರದಿಯಾಗಿತ್ತು. ಇದೀಗ ಆ ಸುದ್ದಿಯನ್ನು ಪುಷ್ಠೀಕರಿಸುವಂತೆ ಇದೀಗ ಲಕ್ನೋ ಫ್ರಾಂಚೈಸಿಯೇ ರಾಹುಲ್ ಅವರನ್ನು ಆಯ್ಕೆ ಮಾಡಲು ಮುಂದಾಗಿರುವುದು ವಿಶೇಷ. ಒಟ್ಟು ಮೂವರು ಆಟಗಾರರನ್ನು ಹೊಸ ಫ್ರಾಂಚೈಸಿಗಳಿಗೆ ಮೆಗಾ ಹರಾಜಿಗೂ ಮುನ್ನ ಆಯ್ಕೆ ಮಾಡುವ ಅವಕಾಶವಿದ್ದು, ಅದರಂತೆ ಇಬ್ಬರು ಭಾರತೀಯ ಆಟಗಾರರು ಹಾಗೂ ಒಬ್ಬ ವಿದೇಶಿ ಆಟಗಾರನನ್ನು ಆಯ್ಕೆ ಮಾಡಬಹುದು.

ಇಲ್ಲಿ ವಿಶೇಷ ಆಯ್ಕೆಗೂ ಮೊತ್ತ ನಿಗದಿ ಮಾಡಲಾಗಿದೆ. ಅದರಂತೆ ಹೊಸ ಫ್ರಾಂಚೈಸಿಗಳು 33 ಕೋಟಿಯೊಳಗೆ ಮೂವರು ಆಟಗಾರರನ್ನು ಆಯ್ಕೆ ಮಾಡಬಹುದು. ಹೀಗೆ ಆಯ್ಕೆ ಮಾಡಲಾದ ಮೊದಲ ಆಟಗಾರನಿಗೆ 15 ಕೋಟಿ, 2ನೇ ಆಟಗಾರನಿಗೆ 11 ಕೋಟಿ ಹಾಗೂ 3ನೇ ಆಟಗಾರನಿಗೆ 7 ಕೋಟಿ ನೀಡಬೇಕಾಗುತ್ತದೆ. ಈ ಮೊತ್ತ ನೀಡಿ ಮೂವರು ಆಟಗಾರರನ್ನು ನೇರವಾಗಿ ಆಯ್ಕೆ ಮಾಡಬಹುದು. ಇದೀಗ ಲಕ್ನೋ ಫ್ರಾಂಚೈಸಿ ರಾಹುಲ್ ಅವರನ್ನು ಮೊದಲ ಆಯ್ಕೆಯಾಗಿ ಖರೀದಿಸಲು ಮುಂದಾಗಿದೆ. ಅದರಂತೆ 15 ಕೋಟಿಯೊಂದಿಗೆ ತಂಡದ ನಾಯಕತ್ವದ ಆಫರ್​ ಅನ್ನು ಕೆಎಲ್ ರಾಹುಲ್ ಮುಂದಿಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಆಫರ್​ ಅನ್ನು ಕೆಎಲ್ಆರ್​ ಕೂಡ ಒಪ್ಪಿಕೊಳ್ಳುವ ಸಾಧ್ಯತೆಯಿದ್ದು, ಹೀಗಾಗಿ ಲಕ್ನೋ ಫ್ರಾಂಚೈಸಿ ಪರ ನಾಯಕ, ಆರಂಭಿಕ, ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗಿದೆ.

ಇದನ್ನೂ ಓದಿ: IPL 2022: ದುಡ್ಡಿಗಿಂತ RCB ತಂಡವೇ ಮುಖ್ಯ: ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಂದ ಬಹುಪರಾಕ್

ಇದನ್ನೂ ಓದಿ: 8 ಫ್ರಾಂಚೈಸಿ ಉಳಿಸಿಕೊಂಡ ಆಟಗಾರರ ಪಟ್ಟಿ ಹೀಗಿದೆ

ಇದನ್ನೂ ಓದಿ: 27 ಆಟಗಾರರು ರಿಟೈನ್: ಬಿಡುಗಡೆಯಾದ ಆಟಗಾರರ ಪಟ್ಟಿ ಇಲ್ಲಿದೆ

(IPL 2022: New franchise Lucknow zero in on KL Rahul as captain)

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ