AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: KKR ಸ್ಟಾರ್ ಆಟಗಾರ ಎಂಟ್ರಿ: ಮುಂಬೈಗೆ ಚಿಂತೆ ಶುರು

IPL 2022: ಪ್ಯಾಟ್ ಕಮಿನ್ಸ್ ಆಗಮನ ಇದೀಗ ಪ್ಲೇಯಿಂಗ್ 11 ಆಯ್ಕೆಯ ತಲೆನೋವು ಹೆಚ್ಚಿಸಲಿದೆ. ಏಕೆಂದರೆ ಈಗ ನಾವು ಪ್ಲೇಯಿಂಗ್ XI ಅನ್ನು ಆಯ್ಕೆ ಮಾಡಲು ಹೆಚ್ಚಿನ ಆಟಗಾರರನ್ನು ಹೊಂದಿದ್ದೇವೆ.

IPL 2022: KKR ಸ್ಟಾರ್ ಆಟಗಾರ ಎಂಟ್ರಿ: ಮುಂಬೈಗೆ ಚಿಂತೆ ಶುರು
KKR
TV9 Web
| Updated By: ಝಾಹಿರ್ ಯೂಸುಫ್|

Updated on: Apr 04, 2022 | 8:43 PM

Share

ಕೋಲ್ಕತ್ತಾ ನೈಟ್ ರೈಡರ್ಸ್ (KKR) ಐಪಿಎಲ್ 2022 ರಲ್ಲಿ ಉತ್ತಮ ಆರಂಭ ಪಡೆದಿದೆ. ಮೊದಲ 3 ಪಂದ್ಯಗಳಲ್ಲಿ ಎರಡನ್ನು ಗೆದ್ದುಕೊಂಡಿರುವ ಕೆಕೆಆರ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇದೀಗ ತಂಡಕ್ಕೆ ಸ್ಟಾರ್ ಆಟಗಾರರ ಆಗಮನವಾಗಿರುವುದು ತಂಡದ ಬಲವನ್ನು ಹೆಚ್ಚಿಸಿದೆ. ಹೌದು, ಕೆಕೆಆರ್ ತಂಡದ ಮ್ಯಾಚ್ ವಿನ್ನರ್ ಆಲ್​ರೌಂಡರ್ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಕ್ವಾರಂಟೈನ್ ಅವಧಿ ಸೋಮವಾರ ಕೊನೆಗೊಳ್ಳಲಿದ್ದು, ಅದರಂತೆ ಏಪ್ರಿಲ್ 6 ರಿಂದ ಆಯ್ಕೆಗೆ ಲಭ್ಯರಿರಲಿದ್ದಾರೆ. ಅಂದರೆ KKRನ ಮುಂದಿನ ಪಂದ್ಯವು ಮುಂಬೈ ಇಂಡಿಯನ್ಸ್ ವಿರುದ್ಧ ಏಪ್ರಿಲ್ 6 ರಂದು ನಡೆಯಲಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ವಿರುದ್ದ ಪ್ಯಾಟ್ ಕಮಿನ್ಸ್ ಕಣಕ್ಕಿಳಿಯುವ ಸಾಧ್ಯತೆಯಿದೆ.

ಪ್ಯಾಟ್ ಕಮ್ಮಿನ್ಸ್ ಆಗಮನದಿಂದ ಕೋಚ್ ಬ್ರೆಂಡನ್ ಮೆಕಲಮ್ ಫುಲ್ ಖುಷಿಯಾಗಿದ್ದಾರೆ. ಏಕೆಂದರೆ ಕಮ್ಮಿನ್ಸ್ ಅಂತಹ ಆಟಗಾರ, ತಂಡದ ವಾತಾವರಣಕ್ಕೆ ಸುಲಭವಾಗಿ ಹೊಂದಿಕೊಳ್ಳುತ್ತಾರೆ. ಅವರು ಪ್ರಬಲ ನಾಯಕರೂ ಹೌದು. ಇಂತಹ ಪರಿಸ್ಥಿತಿಯಲ್ಲಿ ನಾಯಕನಾಗಿ ತಮ್ಮ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿರುವ ಶ್ರೇಯಸ್ ಅಯ್ಯರ್​ಗೆ ಕಮಿನ್ಸ್ ಉಪಸ್ಥಿತಿಯೂ ಲಾಭವಾಗಲಿದೆ ಎಂದು ಮೆಕಲಮ್ ತಿಳಿಸಿದ್ದಾರೆ.

ಮತ್ತೊಂದೆಡೆ ಪ್ಯಾಟ್ ಕಮಿನ್ಸ್ ಆಗಮನ ಇದೀಗ ಪ್ಲೇಯಿಂಗ್ 11 ಆಯ್ಕೆಯ ತಲೆನೋವು ಹೆಚ್ಚಿಸಲಿದೆ. ಏಕೆಂದರೆ ಈಗ ನಾವು ಪ್ಲೇಯಿಂಗ್ XI ಅನ್ನು ಆಯ್ಕೆ ಮಾಡಲು ಹೆಚ್ಚಿನ ಆಟಗಾರರನ್ನು ಹೊಂದಿದ್ದೇವೆ. ಇವರಿಂದ 11 ಆಟಗಾರರನ್ನು ಆಯ್ಕೆ ಮಾಡುವುದು ಕೂಡ ಸವಾಲಾಗಲಿದೆ. ಇದರಿಂದ ತಂಡವು ಮತ್ತಷ್ಟು ಬಲಿಷ್ಠವಾಗುವುದು ಸ್ಪಷ್ಟ ಎಂದು ಮೆಕಲಂ ತಿಳಿಸಿದ್ದಾರೆ.

ಈ ವರ್ಷ ಪ್ಯಾಟ್ ಕಮ್ಮಿನ್ಸ್ ಅತ್ಯುತ್ತಮ ಫಾರ್ಮ್‌ನಲ್ಲಿರುವುದರಿಂದ ಕಮ್ಮಿನ್ಸ್ ಮರಳುವಿಕೆ ಕೆಕೆಆರ್​ಗೆ ಪ್ಲಸ್ ಪಾಯಿಂಟ್ ಆಗಲಿದೆ. ಇತ್ತೀಚೆಗೆ ಮುಕ್ತಾಯಗೊಂಡ ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಮ್ಮಿನ್ಸ್ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. 3 ಟೆಸ್ಟ್‌ಗಳಲ್ಲಿ 22.50 ಸರಾಸರಿಯಲ್ಲಿ 12 ವಿಕೆಟ್‌ಗಳನ್ನು ಪಡೆದಿದ್ದರು. ಇನ್ನು ಕಮಿನ್ಸ್ ಐಪಿಎಲ್‌ನ 37 ಪಂದ್ಯಗಳಲ್ಲಿ 38 ವಿಕೆಟ್‌ಗಳನ್ನು ಪಡೆದಿದ್ದಾರೆ.

MI ವಿರುದ್ಧ KKR ನ ಮುಂದಿನ ಪಂದ್ಯ: KKR ಇದುವರೆಗೆ IPL 2022 ರಲ್ಲಿ 3 ಪಂದ್ಯಗಳನ್ನು ಆಡಿದೆ. ಇದರಲ್ಲಿ ತಂಡ 2 ರಲ್ಲಿ ಜಯ ಸಾಧಿಸಿದೆ. ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಕೆಕೆಆರ್ 6 ವಿಕೆಟ್ ಗಳ ಜಯ ಸಾಧಿಸಿತ್ತು. ಇದೀಗ ಬುಧವಾರ ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿಯೂ ಈ ಗೆಲುವಿನ ನಾಗಾಲೋಟವನ್ನು ಮುಂದುವರೆಸಲು ಕೆಕೆಆರ್ ಬಯಸಿದೆ. ಇತ್ತ ಕೆಕೆಆರ್ ತಂಡಕ್ಕೆ ಪ್ಯಾಟ್ ಕಮಿನ್ಸ್ ಆಗಮನ, ಸತತ 2 ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ಚಿಂತೆಯನ್ನು ಹೆಚ್ಚಿಸಲಿದೆ.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?