PBKS vs CSK Live Streaming: ಚೆನ್ನೈ-ಪಂಜಾಬ್ ಮುಖಾಮುಖಿಯಲ್ಲಿ ಗೆಲುವು ಯಾರಿಗೆ? ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ

| Updated By: ಪೃಥ್ವಿಶಂಕರ

Updated on: Apr 24, 2022 | 6:50 PM

PBKS vs CSK Live Streaming: ಅಂಕಪಟ್ಟಿಯಲ್ಲಿ ಕೊನೆಯ 7 ಮತ್ತು 8ನೇ ಸ್ಥಾನದಲ್ಲಿ ಉಭಯ ತಂಡಗಳಿವ. ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಇದುವರೆಗೆ ಏಳು ಪಂದ್ಯಗಳನ್ನು ಆಡಿದ್ದು, ಎರಡರಲ್ಲಿ ಮಾತ್ರ ಗೆದ್ದಿದೆ. ಅದೇ ಸಮಯದಲ್ಲಿ, ಪಂಜಾಬ್ ತಂಡವು ಏಳು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದಿದೆ.

PBKS vs CSK Live Streaming: ಚೆನ್ನೈ-ಪಂಜಾಬ್ ಮುಖಾಮುಖಿಯಲ್ಲಿ ಗೆಲುವು ಯಾರಿಗೆ? ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ
PBKS vs CSK
Follow us on

ಲೀಗ್‌ನ 38ನೇ ಪಂದ್ಯ ಸೋಮುವಾರ ನಡೆಯಲಿದ್ದು, ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (Punjab Kings and Chennai Super Kings) ನಡುವೆ ಪಂದ್ಯ ನಡೆಯಲಿದೆ. ಪಂಜಾಬ್ ಮತ್ತು ಚೆನ್ನೈ ತಂಡಗಳ ಸ್ಥಿತಿಯು ಲೀಗ್‌ನಲ್ಲಿ ಉತ್ತಮವಾಗಿಲ್ಲ. ಅಂಕಪಟ್ಟಿಯಲ್ಲಿ ಕೊನೆಯ 7 ಮತ್ತು 8ನೇ ಸ್ಥಾನದಲ್ಲಿ ಉಭಯ ತಂಡಗಳಿವ. ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಇದುವರೆಗೆ ಏಳು ಪಂದ್ಯಗಳನ್ನು ಆಡಿದ್ದು, ಎರಡರಲ್ಲಿ ಮಾತ್ರ ಗೆದ್ದಿದೆ. ಅದೇ ಸಮಯದಲ್ಲಿ, ಪಂಜಾಬ್ ತಂಡವು ಏಳು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ಸ್ಥಾನವನ್ನು ಸುಧಾರಿಸಲು, ಉಭಯ ತಂಡಗಳು ಈ ಪಂದ್ಯದಲ್ಲಿ ಗೆಲುವಿನ ಅಗತ್ಯವಿದೆ. ಕಳೆದೆರಡು ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ಹ್ಯಾಟ್ರಿಕ್ ಸೋಲಿನ ಭೀತಿಯಲ್ಲಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲನುಭವಿಸಿತ್ತು. ಕೊರೊನಾ ಭೀತಿಯಲ್ಲಿ ನಡೆದ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಛಿದ್ರವಾಯಿತು. ತಂಡದ ನಾಲ್ವರು ಆಟಗಾರರು ಮಾತ್ರ ಎರಡಂಕಿ ಮುಟ್ಟಲು ಸಾಧ್ಯವಾಯಿತು. 116 ರನ್‌ಗಳ ಗುರಿಯನ್ನು ಡೆಲ್ಲಿ ಕೇವಲ ಒಂದು ವಿಕೆಟ್ ನಷ್ಟಕ್ಕೆ ಸಾಧಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿತು.

ಚೆನ್ನೈ ಸೂಪರ್ ಕಿಂಗ್ಸ್ ಮತ್ತೆ ಟ್ರ್ಯಾಕ್‌ಗೆ ಮರಳಬೇಕಾಗಿದೆ
ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮಹತ್ವದ ಗೆಲುವು ಸಾಧಿಸಿತ್ತು. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ, ಚೆನ್ನೈನ ದುರ್ಬಲ ಲಿಂಕ್ ಅದರ ಬೌಲಿಂಗ್ ಆಗಿತ್ತು ಆದರೆ ಮುಂಬೈ ವಿರುದ್ಧ ಅದರ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದರು. ವೇಗಿ ಮುಖೇಶ್ ಚೌಧರಿ ಮೂರು ವಿಕೆಟ್ ಪಡೆದರು. ಅದೇ ಸಮಯದಲ್ಲಿ, ಹಳೆಯ ಸೈನಿಕ ಡ್ವೇನ್ ಬ್ರಾವೋ ಕೂಡ ತನ್ನ ಉಪಯುಕ್ತತೆಯನ್ನು ಸಾಬೀತುಪಡಿಸಿದರು. ನಾಯಕ ಜಡೇಜಾ ಬ್ಯಾಟ್ ಅಥವಾ ಚೆಂಡಿನಲ್ಲೂ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಶ್ರೀಲಂಕಾದ ಸ್ಪಿನ್ನರ್ ಮಹಿಶ್ ಟೀಕ್ಷಣಾ ಉತ್ತಮ ಬೌಲಿಂಗ್ ಮಾಡಿದರೂ ತಂಡವು ದೀಪಕ್ ಚಹಾರ್ ಮತ್ತು ಆಡಮ್ ಮಿಲ್ನೆ ಅವರ ಕೊರತೆಯನ್ನು ಎದುರಿಸುತ್ತುದೆ.

ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ?
ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯವು ಸೋಮವಾರ, ಏಪ್ರಿಲ್ 25 ರಂದು ನಡೆಯಲಿದೆ.

ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಎಲ್ಲಿ ನಡೆಯಲಿದೆ?
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ನಡೆಯಲಿದೆ.

ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ಯಾವಾಗ ಆರಂಭವಾಗುತ್ತದೆ?
ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ಟಾಸ್ ರಾತ್ರಿ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.

ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ಆನ್‌ಲೈನ್‌ನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?
ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಚಂದಾದಾರಿಕೆಯೊಂದಿಗೆ Disney+Hotstar ನಲ್ಲಿ ನೋಡಬಹುದು.

ಇದನ್ನೂ ಓದಿ:PBKS vs CSK Prediction Playing XI: ಪಂಜಾಬ್- ಚೆನ್ನೈ ಮುಖಾಮುಖಿ; ಎರಡು ತಂಡಗಳಲ್ಲೂ ಬದಲಾವಣೆ ಖಚಿತ

Published On - 6:49 pm, Sun, 24 April 22