AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 GT vs PBKS Live Streaming: ಗೆಲ್ಲಲೇಬೇಕಾದ ಒತ್ತಡದಲ್ಲಿ ಪಂಜಾಬ್; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ

IPL 2022 GT vs PBKS Live Streaming: ಗುಜರಾತ್ ಟೈಟಾನ್ಸ್ ತಂಡ ಪ್ರಸ್ತುತ ಪಾಯಿಂಟ್ಸ್ ಪಟ್ಟಿಯಲ್ಲಿ ನಂಬರ್-1 ಸ್ಥಾನದಲ್ಲಿದೆ ಆದರೆ ಪಂಜಾಬ್ ಸ್ಥಿತಿ ಕೆಟ್ಟದಾಗಿದೆ. ಒಂಬತ್ತು ಪಂದ್ಯಗಳಲ್ಲಿ ನಾಲ್ಕು ಗೆಲುವು ಮತ್ತು ಐದು ಸೋಲಿನ ನಂತರ ಏಳನೇ ಸ್ಥಾನದಲ್ಲಿದ್ದಾರೆ.

IPL 2022 GT vs PBKS Live Streaming: ಗೆಲ್ಲಲೇಬೇಕಾದ ಒತ್ತಡದಲ್ಲಿ ಪಂಜಾಬ್; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ
PBKS vs GT
TV9 Web
| Edited By: |

Updated on: May 02, 2022 | 4:39 PM

Share

ಐಪಿಎಲ್ 2022 (IPL 2022) ರಲ್ಲಿ ಗುಜರಾತ್ ಟೈಟಾನ್ಸ್ (Gujarat Titans) ತಂಡ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡಿದೆ. ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದ ಈ ತಂಡ ಸತತ ಗೆಲುವು ಸಾಧಿಸುತ್ತಿದೆ. ಈ ತಂಡ ಇದುವರೆಗೆ ಒಂಬತ್ತು ಪಂದ್ಯಗಳನ್ನು ಆಡಿದ್ದು, ಕೇವಲ ಒಂದು ಪಂದ್ಯದಲ್ಲಿ ಸೋತಿದೆ. ಉಳಿದ ಪಂದ್ಯಗಳಲ್ಲಿ ಈ ತಂಡ ಎದುರಾಳಿ ತಂಡಗಳನ್ನು ಮಣಿಸಿತ್ತು. ಇದೀಗ ಪಂಜಾಬ್ ಕಿಂಗ್ಸ್ ಈ ತಂಡದ ಮುಂದಿದೆ . ಗುಜರಾತ್ ಟೈಟಾನ್ಸ್ ತನ್ನ ಮುಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ಮೈದಾನಕ್ಕಿಳಿಯಲಿದೆ. ಗುಜರಾತ್ ಟೈಟಾನ್ಸ್ ತಂಡ ಪ್ರಸ್ತುತ ಪಾಯಿಂಟ್ಸ್ ಪಟ್ಟಿಯಲ್ಲಿ ನಂಬರ್-1 ಸ್ಥಾನದಲ್ಲಿದೆ ಆದರೆ ಪಂಜಾಬ್ ಸ್ಥಿತಿ ಕೆಟ್ಟದಾಗಿದೆ. ಒಂಬತ್ತು ಪಂದ್ಯಗಳಲ್ಲಿ ನಾಲ್ಕು ಗೆಲುವು ಮತ್ತು ಐದು ಸೋಲಿನ ನಂತರ ಏಳನೇ ಸ್ಥಾನದಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಂಜಾಬ್​ಗೆ ಈ ಪಂದ್ಯ ಹೆಚ್ಚು ಮಹತ್ವ ಪಡೆದಿದೆ.

ಈ ಋತುವಿನಲ್ಲಿ ಗುಜರಾತ್ ಅದ್ಭುತ ಪ್ರದರ್ಶನ ನೀಡುತ್ತಿದೆ. ಈ ತಂಡದ ವಿಶೇಷತೆ ಎಂದರೆ ಫಿನಿಶಿಂಗ್ ಕೌಶಲ್ಯ. ಕೊನೆಯ ಓವರ್‌ಗಳಲ್ಲಿ ವೇಗವಾಗಿ ರನ್ ಗಳಿಸುವ ಮೂಲಕ ತಂಡವು ಅನೇಕ ಪಂದ್ಯಗಳನ್ನು ಗೆದ್ದಿದೆ. ಅದೇ ರೀತಿ ತಂಡ ತನ್ನ ಕೊನೆಯ ಪಂದ್ಯವನ್ನು ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿತು. ಮತ್ತೊಂದೆಡೆ ಪಂಜಾಬ್ ತನ್ನ ಕೊನೆಯ ಪಂದ್ಯದಲ್ಲಿ ಸೋಲನುಭವಿಸಿತ್ತು ಮತ್ತು ಈ ಸೋಲನ್ನು ಲಕ್ನೋ ಸೂಪರ್ ಜೈಂಟ್ಸ್ ಅವರಿಗೆ ನೀಡಿತು. ಪಂಜಾಬ್ ತಂಡ ಗುಜರಾತ್ ವಿರುದ್ಧ ಸೋತರೆ ಪ್ಲೇಆಫ್‌ಗೆ ತೊಂದರೆಯಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಅವರಿಗೆ ಗೆಲುವು ಬಹಳ ಮುಖ್ಯವಾಗಿದೆ.

ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ? ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯವು ಮಂಗಳವಾರ, ಮೇ 3 ರಂದು ನಡೆಯಲಿದೆ.

ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯವನ್ನು ಎಲ್ಲಿ ಆಡಲಾಗುತ್ತದೆ? ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಈ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ? ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದ ಟಾಸ್ ರಾತ್ರಿ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.

ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು? ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ನೋಡಬಹುದು.

ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು? ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಚಂದಾದಾರಿಕೆಯೊಂದಿಗೆ Disney+Hotstar ನಲ್ಲಿ ನೋಡಬಹುದು.

ಇದನ್ನೂ ಓದಿ:GT vs PBKS IPL 2022 Head to Head: ಪಂಜಾಬ್​ಗೆ ಗುಜರಾತ್ ಸವಾಲು; ಉಭಯರಲ್ಲಿ ಯಾರು ಬಲಿಷ್ಠ?

ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?