IPL 2022 PBKS vs GT Live Streaming: ಗುಜರಾತ್- ಪಂಜಾಬ್ ಮುಖಾಮುಖಿ; ಪಂದ್ಯದ ಬಗೆಗಿನ ಪೂರ್ಣ ಮಾಹಿತಿ

IPL 2022 PBKS vs GT Live Streaming: ಪಂಜಾಬ್ ಕಿಂಗ್ಸ್ ಬೌಲಿಂಗ್‌ನಲ್ಲಿ ಶಮಿ ಮತ್ತು ಲಾಕಿ ಫರ್ಗುಸನ್‌ರನ್ನು ಹೊರತುಪಡಿಸಿ ಆರಂಭಿಕ ಜೋಡಿ ಮಯಾಂಕ್ ಮತ್ತು ಧವನ್ ಅವರನ್ನು ಹೊಂದಿದೆ. ಮತ್ತೊಂದೆಡೆ, ಗುಜರಾತ್ ಟೈಟಾನ್ಸ್ ಹಾರ್ದಿಕ್ ಪಾಂಡ್ಯ, ಎವಿನ್ ಲೂಯಿಸ್ ಅವರಂತಹ ದೊಡ್ಡ ಪವರ್ ಹಿಟ್ಟರ್‌ಗಳನ್ನು ಹೊಂದಿದೆ.

IPL 2022 PBKS vs GT Live Streaming: ಗುಜರಾತ್- ಪಂಜಾಬ್ ಮುಖಾಮುಖಿ; ಪಂದ್ಯದ ಬಗೆಗಿನ ಪೂರ್ಣ ಮಾಹಿತಿ
PBKS vs GT
Follow us
TV9 Web
| Updated By: ಪೃಥ್ವಿಶಂಕರ

Updated on: Apr 07, 2022 | 4:20 PM

ಐಪಿಎಲ್ 2022 (IPL 2022) ರಲ್ಲಿ, ಶುಕ್ರವಾರ ಅಂದರೆ ಏಪ್ರಿಲ್ 8 ರಂದು ಎರಡು ಬಲಿಷ್ಠ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಒಂದು ಟೂರ್ನಿಯಲ್ಲಿ ಇನ್ನೂ ಸೋಲಿನ ಮುಖವನ್ನೇ ಕಾಣದ ತಂಡ. ಅದೇ ಇನ್ನೊಂದು ಇದುವರೆಗೆ ಆಡಿದ 3 ಪಂದ್ಯಗಳಲ್ಲಿ ಎರಡನ್ನು ಗೆದ್ದಿರುವ ತಂಡ. ನಾವು ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ (Gujarat Titans and Punjab Kings) ನಡುವಿನ ಪಂದ್ಯದ ಬಗ್ಗೆ ಮಾತನಾಡುತ್ತಿದ್ದೇವೆ. ಎರಡೂ ತಂಡಗಳು ಬಲಿಷ್ಠವಾಗಿರುವ ಕಾರಣ ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯ ಅದ್ಧೂರಿಯಾಗಿ ನಡೆಯಲಿದೆ. ಈ ಉಭಯ ತಂಡಗಳಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ಅದ್ಭುತವಾಗಿದೆ. ಗುಜರಾತ್ ಟೈಟಾನ್ಸ್ ಇದುವರೆಗೆ ಆಡಿದ ಎರಡೂ ಪಂದ್ಯಗಳನ್ನು ಗೆದ್ದಿದ್ದು, ಪಂಜಾಬ್ ಕಿಂಗ್ಸ್ ವಿರುದ್ಧ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಮತ್ತೊಂದೆಡೆ, ಪಂಜಾಬ್ ಕಿಂಗ್ಸ್ ಹಿಂದಿನ ಪಂದ್ಯದಲ್ಲಿ ತಮ್ಮ ಪ್ರದರ್ಶನವನ್ನು ಉಳಿಸಿಕೊಂಡು ಗೆಲುವು ದಾಖಲಿಸಲು ಬಯಸುತ್ತದೆ.

ಇದು ಗುಜರಾತ್ ಟೈಟಾನ್ಸ್‌ನ ಮೊದಲ ಐಪಿಎಲ್ ಸೀಸನ್. ಅದೇ ಸಮಯದಲ್ಲಿ, ಪಂಜಾಬ್ ಕಿಂಗ್ಸ್ ಈ ಲೀಗ್ ಕ್ರಿಕೆಟ್‌ನಲ್ಲಿ ತೊಡಗಿಸಿಕೊಂಡಿದೆ. ತಂಡಗಳ ಮಟ್ಟಿಗೆ ಹೇಳುವುದಾದರೆ, ಪಂಜಾಬ್ ಕಿಂಗ್ಸ್ ಬೌಲಿಂಗ್‌ನಲ್ಲಿ ಶಮಿ ಮತ್ತು ಲಾಕಿ ಫರ್ಗುಸನ್‌ರನ್ನು ಹೊರತುಪಡಿಸಿ ಆರಂಭಿಕ ಜೋಡಿ ಮಯಾಂಕ್ ಮತ್ತು ಧವನ್ ಅವರನ್ನು ಹೊಂದಿದೆ. ಮತ್ತೊಂದೆಡೆ, ಗುಜರಾತ್ ಟೈಟಾನ್ಸ್ ಹಾರ್ದಿಕ್ ಪಾಂಡ್ಯ, ಎವಿನ್ ಲೂಯಿಸ್ ಅವರಂತಹ ದೊಡ್ಡ ಪವರ್ ಹಿಟ್ಟರ್‌ಗಳನ್ನು ಹೊಂದಿದೆ. ಬೌಲಿಂಗ್ ವಿಭಾಗದಲ್ಲಿ, ಈ ತಂಡವು ಅರ್ಷದೀಪ್ ಸಿಂಗ್, ರಶೀದ್ ಖಾನ್ ಅವರಂತಹ ದಿಗ್ಗಜರನ್ನು ಹೊಂದಿದೆ.

ಪಂದ್ಯದ ಬಗೆಗಿನ ವಿವರ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ IPL-2022 ಪಂದ್ಯ ಯಾವಾಗ ನಡೆಯಲಿದೆ? ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ IPL-2022 ಪಂದ್ಯವು ಶುಕ್ರವಾರ, ಏಪ್ರಿಲ್ 8 ರಂದು ನಡೆಯಲಿದೆ.

ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ? ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ನಡೆಯಲಿದೆ.

ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ಯಾವಾಗ ಆರಂಭವಾಗುತ್ತದೆ? ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದ ಟಾಸ್ ರಾತ್ರಿ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.

ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು? ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ನೋಡಬಹುದು.

ಆನ್‌ಲೈನ್‌ನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು? ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಚಂದಾದಾರಿಕೆಯೊಂದಿಗೆ Disney+Hotstar ನಲ್ಲಿ ನೋಡಬಹುದು.

ಇದನ್ನೂ ಓದಿ:PBKS vs GT Playing XI IPL 2022: ಗುಜರಾತ್​ಗೆ ಪಂಜಾಬ್ ಸವಾಲು; ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ